ಚೀನಾ ಉಪಟಳದ ಬಗ್ಗೆ ಸೇನಾಧಿಕಾರಿಯ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ: ಸಂಸತ್‌ನಲ್ಲಿ ಕೋಲಾಹಲ
ನವದೆಹಲಿ: ಚೀನಾ ಆಕ್ರಮಣ ಕುರಿತು ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ ನರವಾಣೆ (ನಿವೃತ್ತ), ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಪ್ರಕಟಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡುವುದು ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಬಾಕಿ ಇದೆ. ಒಪ್ಪಿಗೆ ನೀಡಬೇಕು ಎಂದು ಸಂಸತ್ ಅಧಿವೇಶನದಲ್ಲಿ ಇಂದು ಸೋಮವಾರ ಸಂಸದ ರಾಹುಲ್ ಗಾಂಧಿ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ ನಾಯಕರಾದ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಅವರ ಮುಗಿಬಿದ್ದ ಪ್ರಸಂಗ ನಡೆಯಿತು. ಕೆಲ ಕಾಲ ಕೋಲಾಹಲವೇ ಸೃಷ್ಟಿಯಾಯಿತು.
ಸಂಸತ್‌ನಲ್ಲಿ ಸೋಮವಾರ ರಾಷ್ಟ್ರಪತಿಗಳ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳಲಾಯಿತು. ಈ ವೇಳೆ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಪುಸ್ತಕವನ್ನು ಉಲ್ಲೇಖಿಸುತ್ತಿದ್ದಂತೆ ಲೋಕಸಭೆಯಲ್ಲಿ ಗದ್ದಲ ಉಂಟಾಯಿತು. ಅಪ್ರಕಟಿತ ವಿಷಯವನ್ನು ಸದನದಲ್ಲಿ ಉಲ್ಲೇಖ ಸರಿಯಲ್ಲ ರಾಜನಾಥ್ ಸಿಂಗ್ ಅವರು ಹೇಳಿದರು. ಅವರ ಮಾತು ಬೆಂಬಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಕ್ಷೇಪಿಸಿದರು. ಔಪಚಾರಿಕವಾಗಿ ಪ್ರಕಟಿತ ವಿಷಯವನ್ನು ಪ್ರಸ್ತಾಪಿಸುವಂತೆ ಒತ್ತಾಯಿಸಿದರು.

ಇದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಯಿತು. ಬಿಜೆಪಿಗರ ಆಕ್ಷೇಪಣೆ, ವಿರೋಧ ಪಕ್ಷದ ಸದಸ್ಯರ ಪ್ರಸ್ತಾಪನೆಯ ಅಂಶಗಳು ಸದನದಲ್ಲಿ ಅಲ್ಪಾವಧಿಯ ಗದ್ದಲಕ್ಕೆ ಕಾರಣವಾಯಿತು. ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರ ವಿರುದ್ಧ ವಿರೋಧ ಪಕ್ಷದ ಸದಸ್ಯರು ಪ್ರತಿಭಟಿಸಿದರು.
ರಾಹುಲ್ ಗಾಂಧಿ ಹೇಳಿದ್ದೇನು?
ಡಿಸೆಂಬರ್ 2019 ರಿಂದ ಏಪ್ರಿಲ್ 2022 ರವರೆಗೆ ಭಾರತದ ಸೇನಾ ಮುಖ್ಯಸ್ಥರಾಗಿ ಎಂ ಎಂ ನರವಾಣೆ ಅವರು ಸೇವೆ ಸಲ್ಲಿಸಿದ್ದಾರೆ. ಅವರ ಕುರಿತಾದ ಪುಸ್ತಕ ಪ್ರಕಟಿಸಲು ಕೇಂದ್ರ ಅನುಮೋದನೆ ನೀಡಿಲ್ಲ. 2020ರ ಭಾರತ-ಚೀನಾ ಗಡಿ ಘರ್ಷಣೆಯ ಸಮಯದಲ್ಲಿನ ಮಹತ್ವದ ಅಂಶಗಳು ಪುಸ್ತಕದಲ್ಲಿವೆ. ಚೀನಾ ಆಕ್ರಮಣ, ಉಪಟಳವು ಅದರಲ್ಲಿದೆ. ಇಂತಹ ಪುಸ್ತಕದ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಅವರು ರಾಹುಲ್ ಗಾಂಧಿ ಸಂಸತ್‌ನಲ್ಲಿ ತಿಳಿಸಿದರು.
ಸೂಕ್ಷ್ಮ ಮಿಲಿಟರಿ ಕಾರ್ಯಾಚರಣೆಗಳು ಮತ್ತು ಸರ್ಕಾರ ಕೈಗೊಂಡ ನೀತಿ ನಿರ್ಧಾರಗಳ ಮಹತ್ವ ಮಾಹಿತಿಯನ್ನು ಆತ್ಮಚರಿತ್ರೆ ಹೊಂದಿದೆ. ಹೀಗಾಗಿಯೇ ಕೇಂದ್ರ ಸರ್ಕಾರ ಅದರ ಪ್ರಕಟಣೆಯನ್ನು ವಿಳಂಬಗೊಳಿಸಿದೆ. ಆತ್ಮಚರಿತ್ರೆ ಪ್ರಕಟಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು. ಈ ಆರೋಪವನ್ನು ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ನಿರಾಕರಿಸಿದರು. ಈ ವೇಳೆ ಸದನದ ಉಭಯ ಸದಸ್ಯರ ಮಧ್ಯ ಮಾತಿಗೆ ಮಾತು ಬೆಳೆಯಿತು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications