• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೊದಲು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ಕೊನೆಗೆ ನೀವು ಗೆಲ್ಲುತ್ತೀರ; ರಾಹುಲ್ ಗಾಂಧಿ

|

ನವದೆಹಲಿ, ಏಪ್ರಿಲ್ 14: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಸೋಂಕು ನಿಯಂತ್ರಣಕ್ಕೆ ವಿದೇಶದಲ್ಲಿ ಅಭಿವೃದ್ಧಿಯಾದ ಲಸಿಕೆಗಳಿಗೆ ಅವಕಾಶ ನೀಡುವ ಕೇಂದ್ರದ ಹೆಜ್ಜೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಈಚೆಗಷ್ಟೆ ರಾಹುಲ್ ಗಾಂಧಿ, ವಿದೇಶಗಳಿಗೆ ಕೊರೊನಾ ಲಸಿಕೆ ರಫ್ತು ಮಾಡುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು ಎಂದು ಆಗ್ರಹಿಸಿದ್ದರು. ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕೆಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆಗಳ ಕೊರತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಜೊತೆಗೆ ವಿದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಭಾರತದಲ್ಲಿ ಅನುಮತಿ ನೀಡುವಂತೆ ಆಗ್ರಹಿಸಿದ್ದರು. ಆದರೆ ರಾಹುಲ್ ಗಾಂಧಿ ಆಗ್ರಹಕ್ಕೆ ಕೇಂದ್ರ ವಿರೋಧ ವ್ಯಕ್ತಪಡಿಸಿತ್ತು. ಫಾರ್ಮಾ ಕಂಪನಿಗಳಿಗೆ ಲಾಬಿ ನಡೆಸುತ್ತಿದ್ದಾರೆ ಎಂದು ದೂರಿತ್ತು.

ಅದಾದ ಬೆನ್ನಲ್ಲೇ ರಷ್ಯಾ ಅಭಿವೃದ್ಧಿಪಡಿಸಿದ ಸ್ಫುಟ್ನಿಕ್ ವಿ ಲಸಿಕೆಗೆ ಭಾರತದಲ್ಲಿ ಅನುಮತಿ ನೀಡಲಾಗಿದೆ. ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, "ಮೊದಲು ನಿಮ್ಮನ್ನು ನಿರ್ಲಕ್ಷಿಸುತ್ತಾರೆ. ನಂತರ ನಿಮ್ಮನ್ನು ನೋಡಿ ನಗುತ್ತಾರೆ. ಆಮೇಲೆ ಜಗಳ ಮಾಡುತ್ತಾರೆ, ಕೊನೆಗೆ ನೀವು ಗೆಲ್ಲುತ್ತೀರ" ಎಂದಿದ್ದಾರೆ.

ಮಂಗಳವಾರ ಭಾರತದಲ್ಲಿ ವಿದೇಶಿ ನಿರ್ಮಿತ ಲಸಿಕೆಗಳಿಗೆ ಅನುಮತಿ ನೀಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿತ್ತು. ಫೈಜರ್, ಮಾಡರ್ನಾ, ಜಾನ್ಸನ್ ಅಂಡ್ ಜಾನ್ಸನ್ ಇನ್ನಿತರ ಲಸಿಕಾ ಅಭಿವೃದ್ಧಿ ಸಂಸ್ಥೆಗಳಿಗೆ ಭಾರತದಲ್ಲಿ ಶೀಘ್ರ ಅನುಮತಿ ದೊರೆಯಬಹುದು ಎಂದು ನೀತಿ ಆಯೋಗ ಸದಸ್ಯ ಡಾ.ವಿ.ಕೆ.ಪೌಲ್ ತಿಳಿಸಿದ್ದರು.

English summary
Congress leader Rahul Gandhi on Wednesday reacted to the Centre's move to clear the way for foreign-made vaccines to tackle the spread of Covid-19 in country,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X