Rahul Gandhi: ನಾಯಿಗಳ ಪರ ಧ್ವನಿ ಎತ್ತಿದ ರಾಹುಲ್ ಗಾಂಧಿ, ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಹೇಳಿದ್ದೇನು ?
Rahul Gandhi: ಬೆಂಗಳೂರು ಸೇರಿದಂತೆ ದೇಶದಾದ್ಯಂತ ಬೀದಿ ನಾಯಿಗಳ ಸಮಸ್ಯೆ ಹೆಚ್ಚಳವಾಗಿದೆ. ಕರ್ನಾಟಕದಲ್ಲೂ ಬೀದಿ ನಾಯಿಗಳ ಹಾವಳಿ ಇತ್ತೀಚಿನ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಹೆಚ್ಚಾಗಿದೆ. ಈ ವಿಷಯ ಹೆಚ್ಚು ಚರ್ಚೆ ಆಗುತ್ತಿರುವಾಗಲೇ ದೆಹಲಿ ಹಾಗೂ ಎನ್‌ಸಿಆರ್ ಪ್ರದೇಶದಲ್ಲಿನ ನಾಯಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನವನ್ನು ನೀಡಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಹೇಳಿದ್ದೇನು, ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಬೀದಿ ನಾಯಿಗಳು ಮನುಷ್ಯರಿಗೆ ಕಚ್ಚುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಈ ನಾಯಿಗಳು ಮತ್ತೆ ಬೀದಿಗಳಲ್ಲಿ ಕಾಣಿಸಿಕೊಳ್ಳಬಾರದು ಅಥವಾ ಬೀದಿಗೆ ಬರಬಾರದು ಎಂದು ಸೂಚನೆ ನೀಡಲಾಗಿದೆ. ಅಲ್ಲದೇ ಇದೇ ಸಂದರ್ಭದಲ್ಲಿ ಈ ಕಾರ್ಯಾಚರಣೆಗೆ ಯಾರಾದರೂ ಅಡ್ಡಿಪಡಿಸಿದರೆ ಆ ನಿರ್ದಿಷ್ಟ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧವೂ ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗಿದೆ.

ಅಲ್ಲದೇ ನಾಯಿಗಳ ಸ್ಥಳಾಂತರ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿಯೂ ಎಚ್ಚರಿಕೆ ಕೊಡಲಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ರೇಬಿಸ್ ಪ್ರಕರಣಗಳು ಹೆಚ್ಚಾಗಿರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು.
ರಾಹುಲ್ ಗಾಂಧಿ ಟ್ವೀಟ್: ಇನ್ನು ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ. ದೆಹಲಿ-ಎನ್‌ಸಿಆರ್‌ನಿಂದ ಎಲ್ಲಾ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಬೇಕು ಎನ್ನುವ ಸುಪ್ರೀಂ ಕೋರ್ಟ್‌ನ ನಿರ್ದೇಶನವು ದಶಕಗಳ ಮಾನವೀಯ, ವೈಜ್ಞಾನಿಕ ಬೆಂಬಲಿತ ನೀತಿಯಿಂದ ಹಿಂದಕ್ಕೆ ಸರಿದಂತೆ. ಮಾತನಾಡಲು ಸಾಧ್ಯವಿಲ್ಲದ ಈ ಪ್ರಾಣಿಗಳನ್ನು (ನಾಯಿ) ಅಳಿಸಬೇಕಾದ ಸಮಸ್ಯೆಗಳಲ್ಲ ಎಂದು ರಾಹುಲ್ ಗಾಂಧಿ ಅವರು ಅಭಿಪ್ರಾಯಪಟ್ಟಿದ್ದಾರೆ.
The SC’s directive to remove all stray dogs from Delhi-NCR is a step back from decades of humane, science-backed policy.
— Rahul Gandhi (@RahulGandhi) August 12, 2025
These voiceless souls are not “problems” to be erased.
Shelters, sterilisation, vaccination & community care can keep streets safe - without cruelty.
Blanket…
ನಾಯಿಗಳಿಗೆ ಆಶ್ರಯ, ಸಂತಾನಹರಣ ಶಸ್ತ್ರಚಿಕಿತ್ಸೆ, ವ್ಯಾಕ್ಸಿನೇಷನ್ ಹಾಗೂ ಸಮುದಾಯ ಆರೈಕೆಯು ಬೀದಿಗಳನ್ನು ಸುರಕ್ಷಿತವಾಗಿರಿಸಬಹುದು - ಕ್ರೌರ್ಯವಿಲ್ಲದೆ. ನಾಯಿಗಳಿಗೆ ಹೊದಿಸಲಾಗಿರುವ ಕಂಬಳಿ ತೆಗೆಯುವುದು ಕ್ರೂರ ಹಾಗೂ ಸಹಾನುಭೂತಿಯನ್ನು ಕಡಿಮೆ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರ ಸುರಕ್ಷತೆ ಮತ್ತು ಪ್ರಾಣಿ ಕಲ್ಯಾಣವು ಒಟ್ಟಿಗೆ ಸಾಗಬೇಕು ಈ ವಿಷಯವನ್ನು ನಾವು ಖಚಿತಪಡಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.












Click it and Unblock the Notifications