ಅಪ್ಪನ ಸಾವಿನ ಕುರಿತ ಮೋದಿ ಹೇಳಿಕೆಗೆ ರಾಹುಲ್ ಅಪ್ಪುಗೆಯ ಉತ್ತರ
ನವದೆಹಲಿ, ಮೇ 05: ಅಪ್ಪ ರಾಜೀವ್ ಗಾಂಧಿ ಅವರ ಸಾವಿನ ಕುರಿತಾದ ಮೋದಿ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಪ್ಪುಗೆ ಉತ್ತರ ನೀಡಿದ್ದಾರೆ.
'ಭ್ರಷ್ಟಾಚಾರಿ ನಂ 1 ಹಣೆಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಯಿತು' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಬಗ್ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಮೋದಿ ಅವರ ಹೇಳಿಕೆಗೆ ಇಂದು ಟ್ವೀಟ್ ಮೂಲಕ ಉತ್ತರಿಸಿರುವ ರಾಹುಲ್ ಗಾಂಧಿ, ಯುದ್ಧ ಮುಗಿದಿದೆ, ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ, ನಿಮ್ಮ ಬಗ್ಗೆಗಿನ ನಿಮ್ಮ ನಂಬಿಕೆಗಳನ್ನು ನನ್ನ ತಂದೆಯವರ ಮೇಲೆ ಹೇರುತ್ತಿರುವುದು ನಿಮಗೆ ಸಹಾಯ ಮಾಡಲಾರದು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಕೊನೆಯಲ್ಲಿ, 'ನಿಮಗೆ ನನ್ನ ಕಡೆಯಿಂದ ಪ್ರೀತಿ ತುಂಬಿದ ದೊಡ್ಡ ಅಪ್ಪುಗೆ' ಎಂದು ರಾಹುಲ್ ಅವರು ಟ್ವೀಟ್ ಮಾಡಿದ್ದಾರೆ.
ರಾಜೀವ್ ಗಾಂಧಿ ಅವರ ಪುತ್ರಿ, ಪ್ರಿಯಾಂಕಾ ಗಾಂಧಿ ಸಹ ಮೋದಿ ಅವರ ಹೇಳಿಕೆಗೆ ಟ್ವೀಟ್ ಪ್ರತಿಕ್ರಿಯೆ ನೀಡಿದ್ದು, ಹುತಾತ್ಮರ ಹೆಸರಲ್ಲಿ ಮತ ಕೇಳುವ ಮೋದಿ, ಮತ್ತೊಬ್ಬ ಹುತಾತ್ಮ ವ್ಯಕ್ತಿಯನ್ನು ಅವಮಾನಿಸಿದ್ದಾರೆ, ಇದಕ್ಕೆ ಅಮೇಥಿಯ ಜನ ತಕ್ಕ ಉತ್ತರ ನೀಡಲಿದ್ದಾರೆ, ನನ್ನ ತಂದೆ ಅಮೇಥಿಯ ಜನರಿಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
Modi Ji,
— Rahul Gandhi (@RahulGandhi) May 5, 2019
The battle is over. Your Karma awaits you. Projecting your inner beliefs about yourself onto my father won’t protect you.
All my love and a huge hug.
Rahul
ಮಾಜಿ ಹಣಕಾಸು ಮಂತ್ರಿ ಪಿ.ಚಿದಂಬರಂ, ಕಾಂಗ್ರೆಸ್ ವಕ್ತಾರ ಸ್ಯಾಮ್ ಪಿತ್ರೋಡಾ ಇನ್ನೂ ಹಲವರು ಮೋದಿ ಅವರ ರಾಜೀವ್ ಗಾಂಧಿ ಬಗೆಗಿನ ಹೇಳಿಕೆಯನ್ನು ಖಂಡಿಸಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications