Breaking; ಶುಕ್ರವಾರದ ವಿಚಾರಣೆ ಮುಂದೂಡಿ, ಇಡಿಗೆ ರಾಹುಲ್ ಮನವಿ

ನವದೆಹಲಿ, ಜೂನ್ 16; ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿಚಾರಣೆಯನ್ನು ಇಡಿ ನಡೆಸುತ್ತಿದೆ. ಶುಕ್ರವಾರ ಪುನಃ ವಿಚಾರಣೆಗೆ ಬರುವಂತೆ ಬುಧವಾರ ನೋಟಿಸ್ ನೀಡಲಾಗಿದೆ.

ಗುರುವಾರ ರಾಹುಲ್ ಗಾಂಧಿ ಇಡಿಗೆ ಪತ್ರವೊಂದನ್ನು ಬರೆದಿದ್ದಾರೆ. ಶುಕ್ರವಾರ ವಿಚಾರಣೆಗೆ ಬರುವಂತೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಮನವಿಯನ್ನು ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಶುಕ್ರವಾರದ ವಿಚಾರಣೆ ಮುಂದೂಡಿ ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Rahul Gandhi Requests ED To Push Back Friday Questioning

3 ದಿನಗಳ ಕಾಲ ವಿಚಾರಣೆ; ಜಾರಿ ನಿರ್ದೇಶನಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಮವಾರದಿಂದ ಬುಧವಾರದ ತನಕ ರಾಹುಲ್ ಗಾಂಧಿಯನ್ನು 28 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಗುರುವಾರ ವಿಚಾರಣಗೆ ಬಿಡುವು ನೀಡಲಾಗಿದೆ. ಶುಕ್ರವಾರ ಪುನಃ ವಿಚಾರಣೆಗೆ ಆಗಮಿಸುವಂತೆ ನೋಟಿಸ್ ನೀಡಲಾಗಿತ್ತು.

ಕೋವಿಡ್ ಸೋಂಕು ತಗುಲಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಸೋನಿಯಾ ಗಾಂಧಿ ಭಾನುವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಇಡಿ ವಿಚಾರಣೆ ಬಳಿಕ ರಾಹುಲ್ ಗಾಂಧಿ ಆಸ್ಪತ್ರೆಗೆ ನೀಡಿದ್ದರು.

ಇನ್ನು ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಸಹ ಇಡಿ ವಿಚಾರಣೆಯನ್ನು ಎದುರಿಸಬೇಕಿದೆ. ಜೂನ್ 23ಕ್ಕೆ ವಿಚಾರಣೆಗೆ ಬರುವಂತೆ ಇಡಿ ನೋಟಿಸ್ ನೀಡಿದೆ. ಆದರೆ ಅವರು ಆಸ್ಪತ್ರೆಗೆ ದಾಖಲಾದ ಕಾರಣ ವಿಚಾರಣೆಗೆ ವಿನಾಯಿತಿ ಕೋರಿದ್ದಾರೆ.

ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆ ನಡೆಸುವುದನ್ನು ಖಂಡಿಸಿ ಕಾಂಗ್ರೆಸ್ ನವದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇಡಿ ಕಚೇರಿ ಎರಡು ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+