ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಕ್ರವಾರ ವಿಚಾರಣೆಗೆ ಬರುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್

|
Google Oneindia Kannada News

ನವದೆಹಲಿ, ಜೂನ್ 15: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಶುಕ್ರವಾರಕ್ಕೆ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಕಳೆದ ಮೂರು ದಿನಗಳಿಂದ ರಾಹುಲ್ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರದಿಂದ ಈವರೆಗೂ 30 ಗಂಟೆಗಳವರೆಗೆ ವಿಚಾರಣೆ ನಡೆಸಿದ್ದಾರೆ. ಗುರುವಾರದ ಮಟ್ಟಿಗೆ ಅಲ್ಪವಿರಾಮ ನೀಡಿರುವ ಇಡಿ ಅಧಿಕಾರಿಗಳು ಶುಕ್ರವಾರ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ಬಿಜೆಪಿಗೆ ಕೇಡುಗಾಲಕ್ಕೆ ನಾಯಿ ಮೊಟ್ಟೆಯಿಟ್ಟ ವೃತ್ತಾಂತ ಹೇಳಿದ ಸಿದ್ದು! ಬಿಜೆಪಿಗೆ ಕೇಡುಗಾಲಕ್ಕೆ ನಾಯಿ ಮೊಟ್ಟೆಯಿಟ್ಟ ವೃತ್ತಾಂತ ಹೇಳಿದ ಸಿದ್ದು!

ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಬೆಳಗ್ಗೆ 11.35ರ ಸುಮಾರಿಗೆ ರಾಹುಲ್ ಗಾಂಧಿ ಆಗಮಿಸಿದರು. 3ನೇ ದಿನದಂದು, ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು.

Rahul Gandhi’s 3RD Day of Questioning Ends, Summoned Again on Friday in National Herald Case

ಮೂರನೇ ದಿನದ ಬೆಳವಣಿಗೆಗಳು:

* ರಾಹುಲ್ ಗಾಂಧಿ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಜೊತೆಗೆ ಆಗಮಿಸಿದರು. ತನಿಖಾ ಸಂಸ್ಥೆಯ 'ಪ್ರವರ್ತನ ಭವನ' ಕಚೇರಿಗೆ ತನ್ನ ಸಹೋದರನನ್ನು ಇಳಿಸಿದ ನಂತರ ಪ್ರಿಯಾಂಕಾ ಗಾಂಧಿ ಅಲ್ಲಿಂದ ಹೊರಟರು.

* ಹಲವಾರು ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಪ್ರಧಾನ ಕಚೇರಿ ಮತ್ತು ಇಡಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಹುಲ್ ಗಾಂಧಿಯನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ನಡುವೆ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಎಳೆದೊಯ್ದು ಬಸ್‌ಗಳಲ್ಲಿ ತುಂಬಿಸುತ್ತಿರುವ ವಿಡಿಯೋಗಳು ವೈರಲ್ ಆದವು.

* ಕೆಸಿ ವೇಣುಗೋಪಾಲ್, ಭೂಪೇಶ್ ಬಾಘೇಲ್ ಮತ್ತು ರಣದೀಪ್ ಸುರ್ಜೇವಾಲಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ಪ್ರಧಾನ ಕಚೇರಿಗೆ ಪೊಲೀಸರು ಬಲವಂತವಾಗಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದರು. ಆದರೆ ದೆಹಲಿ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.

* ಇದಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡರು, ಕೇಂದ್ರ ಸರ್ಕಾರವು ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಕಚೇರಿಗೆ ಪ್ರವೇಶಿಸದಂತೆ ತಡೆಯುವ ಮೂಲಕ ರಾಜಕೀಯ ಚಟುವಟಿಕೆಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು. ಆಡಳಿತ ಪಕ್ಷವು ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Rahul Gandhi’s 3RD Day of Questioning Ends, Summoned Again on Friday in National Herald Case

* ಇದುವರೆಗೆ ಇಡಿ ಕಚೇರಿಯಲ್ಲಿ ರಾಹುಲ್ ಗಾಂಧಿ 25 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಅವರ ಹೇಳಿಕೆಯನ್ನು ತನಿಖಾ ಸಂಸ್ಥೆ ಅಧಿಕಾರಿಗಳು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅನೇಕ ಸೆಷನ್‌ಗಳಲ್ಲಿ ದಾಖಲಿಸಿದ್ದಾರೆ. ಸಲ್ಲಿಕೆಗೆ ಮೊದಲು ಅವರ ಹೇಳಿಕೆಯ ಪ್ರತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು.

* ಮಂಗಳವಾರ ರಾತ್ರಿ 2ನೇ ದಿನದ ವಿಚಾರಣೆ ಮುಗಿದ ನಂತರ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ತೆರಳಿ ತಮ್ಮ ತಾಯಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವ್ಯವಹಾರದ ಆರೋಪ: ದೇಶದಲ್ಲಿ ತದನಂತರ ಪ್ರಕಟಗೊಂಡ ಇತರ ಪತ್ರಿಕೆಗಳಿಗೆ ಪೈಪೋಟಿ ನೀಡುವುದುಕ್ಕೆ ಸಾಧ್ಯವಾಗದೇ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗದೇ ತೀವ್ರ ವೈಫಲ್ಯವನ್ನು ಅನುಭವಿಸಿತು. ಇದರ ಪರಿಣಾಮವಾಗಿ ಜಾಹೀರಾತು ಆದಾಯದ ಕೊರತೆ ಸೃಷ್ಟಿಯಾಯಿತು. ಕಳೆದ 2008ರಲ್ಲಿ ಮೂರೂ ಆವೃತ್ತಿಯ ಪ್ರಕಟಣೆ ಸ್ಥಗಿತಗೊಳಿಸುತ್ತಿರುವುದಾಗಿ ಪತ್ರಿಕೆ ಘೋಷಿಸಿತು. 29.09.2010ರ ವೇಳೆಗೆ ಷೇರು ಹೋಲ್ಡರುಗಳ ಸಂಖ್ಯೆ 1057ಕ್ಕೆ ಇಳಿದಿತ್ತು. ಆ ಸಮಯದಲ್ಲಿ ಸಂಸ್ಥೆಯು 90.25 ಕೋಟಿ ರೂಪಾಯಿ ಸಾಲವನ್ನು ಹೊಂದಿತ್ತು.

ನ್ಯಾಷನಲ್ ಹೆರಾಲ್ಡ್ ಮತ್ತು ಕಾಂಗ್ರೆಸ್ ನಡುವಿನ ನಂಟು: ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ವೈಐಎಲ್ 90.25 ಕೋಟಿ ರೂಪಾಯಿ ಬಡ್ಡಿರಹಿತ ಸಾಲವನ್ನು ನೀಡಿತ್ತು. ಇದರಲ್ಲಿ ಎಐಸಿಸಿ ಖಜಾನೆಯಿಂದ ಐವತ್ತು ಲಕ್ಷ ರೂಪಾಯಿ ನೇರವಾಗಿ ವರ್ಗಾವಣೆಯಾಗಿತ್ತು ಎಂಬ ಆರೋಪವಿದೆ. ಅಲ್ಲದೇ, ಹೆರಾಲ್ಡ್ ಒಡೆತನದಲ್ಲಿದ್ದ 'ಹೆರಾಲ್ಡ್‌ ಹೌಸ್‌' ನವೀಕರಣಕ್ಕೆ ಒಂದು ಕೋಟಿ ರೂಪಾಯಿ ನೀಡಿತ್ತು ಎಂದು ಹೇಳಲಾಗುತ್ತಿದೆ.

English summary
Congress leader Rahul Gandhi's 3rd day of questioning ends by ED. Summoned again on Friday in National Herald Case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X