ರಾಹುಲ್ ಗಾಂಧಿ ಅನರ್ಹ: ದೆಹಲಿಯ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ನವದೆಹಲಿ, ಮಾರ್ಚ್. 26: ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ದೇಶಾದ್ಯಂತ ಸಂಕಲ್ಪ ಸತ್ಯಾಗ್ರಹ ನಡೆಸುತ್ತಿದೆ. ದೆಹಲಿಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ರಾಜ್ ಘಾಟ್‌ನಲ್ಲಿ ಪ್ರತಿಭಟನೆ ನಡೆಸುವ ಕಾಂಗ್ರೆಸ್ ಮನವಿಯನ್ನು ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ದೆಹಲಿ ಪೊಲೀಸರು ತಿರಸ್ಕರಿಸಿದ ನಂತರವೂ ಸಂಕಲ್ಪ ಸತ್ಯಾಗ್ರಹ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ನಡೆಯುತ್ತಿದೆ.

ಈ ಒಂದು ದಿನದ 'ಸಂಕಲ್ಪ ಸತ್ಯಾಗ್ರಹ' ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯಗಳ ಪ್ರಮುಖ ಕೇಂದ್ರಗಳು ಮತ್ತು ಜಿಲ್ಲೆಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯ ಮುಂದೆ ನಡೆಯಲಿದೆ.

Rahul Gandhis Disqualification: Congress holding a day-long satyagraha

ಸುಮಾರು ಒಂದು ದಶಕದಿಂದ ಪ್ರಮುಖ ವಿರೋಧ ಪಕ್ಷದ ಮುಖ್ಯಸ್ಥರಾಗಿರುವ ನಾಯಕನನ್ನು ಮೌನಗೊಳಿಸಲು ನರೇಂದ್ರ ಮೋದಿ ಸರ್ಕಾರ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಗಿದೆ. ಇದೊಂದು "ಪಿತೂರಿ" ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್‌ಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಟ್ರಾಫಿಕ್ ಕಾರಣಗಳಿಂದ ವಿನಂತಿಯನ್ನು ತಿರಸ್ಕರಿಸಿದ್ದಾರೆ . ರಾಜ್‌ಘಾಟ್ ಮತ್ತು ಸುತ್ತಮುತ್ತಲಿನ ಸೆಕ್ಷನ್ 144 ಸಿಆರ್‌ಪಿಸಿ ಅಡಿಯಲ್ಲಿ ನಿಷೇಧಾಜ್ಞೆಗೆ ಆದೇಶಿಸಲಾಗಿದೆ. ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಲಾಗಿದ್ದು, ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಅನರ್ಹತೆಯ ಬಗ್ಗೆ ರಾಹುಲ್ ಗಾಂಧಿ ನಿನ್ನೆ ಪ್ರಧಾನಿಯವರ ಮೇಳೆ ವಾಗ್ದಾಳಿ ನಡೆಸಿದ್ದಾರೆ. ಲಂಡನ್‌ನಲ್ಲಿ ಮಾಡಿದ ಹಳಿಕೆಗಳು ಮತ್ತು ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಅವರು ಮಾಡಿದ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ. ಎಂದಿದ್ದರಯ.

"ಪ್ರಧಾನಿ ನರೇಂದ್ರ ಮೋದಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ" ಎಂದಿದ್ದಾರೆ. ಕ್ಷಮೆಯಾಚಿಸಬೇಕೆಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Rahul Gandhis Disqualification: Congress holding a day-long satyagraha

2019 ರ ಪ್ರಚಾರದ ಸಮಯದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಕುರಿತು ಟೀಕಿಸಿದ್ದರು. ಈ ಪ್ರಕರಣದಲ್ಲಿ ಗುಜರಾತ್‌ನ ನ್ಯಾಯಾಲಯವು ಮಾನನಷ್ಟದ ಆರೋಪದಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿತ್ತು. ಇದಾಗಿ ಒಂದು ದಿನದ ನಂತರ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು.

ಗುಜರಾತ್‌ನ ಸೂರತ್ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತು ಮತ್ತು ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿತು. ಈ ತೀರ್ಪಿನ ವಿರುದ್ಧ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಅವರ ವಕೀಲರು ಪ್ರತಿಜ್ಞೆ ಮಾಡಿದ್ದರು. ಇಷ್ಟಲ್ಲಿಯೇ ಬಿಜೆಪಿ ಅವರನ್ನು ಅಮಾನತು ಮಾಡಿದೆ. ಲೋಕಸಭೆ ಸೆಕ್ರೆಟರಿಯೇಟ್ ಕೇರಳದ ವಯನಾಡ್‌ನಲ್ಲಿರುವ ಅವರ ಕ್ಷೇತ್ರವನ್ನು ಖಾಲಿ ಎಂದು ಘೋಷಿಸಿದೆ. ಚುನಾವಣಾ ಆಯೋಗವು ಈಗ ಸ್ಥಾನಕ್ಕಾಗಿ ವಿಶೇಷ ಚುನಾವಣೆಯನ್ನು ಘೋಷಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+