ಅಪ್ಪಾ, ನೀವು ನನ್ನ ಜೊತೆಯಲ್ಲೇ ಇದ್ದಿರಿ: ರಾಜೀವ್ ಗಾಂಧಿ ಪುಣ್ಯತಿಥಿಯಂದು ರಾಹುಲ್ ಭಾವುಕ ಶ್ರದ್ಧಾಂಜಲಿ
ನವದೆಹಲಿ, ಮೇ. 21: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಭಾನುವಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ದಿವಂಗತ ತಂದೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ರಾಜೀವ್ ಗಾಂಧಿ ಅವರ ರಾಜಕೀಯ ಪ್ರಯಾಣವನ್ನು ಮನೋಹರವಾಗಿ ಸೆರೆಹಿಡಿಯುವ ವಿಡಿಯೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.
पापा, आप मेरे साथ ही हैं, एक प्रेरणा के रूप में, यादों में, सदा! pic.twitter.com/WioVkdPZcr
— Rahul Gandhi (@RahulGandhi) May 21, 2023
ರಾಜೀವ್ ಗಾಂಧಿಯವರ ರಾಜಕೀಯ ಪಯಣ ನೆನಪಿಸುವ ಎರಡು ನಿಮಿಷಗಳ ವೀಡಿಯೊದ ಜೊತೆಗೆ, ರಾಹುಲ್ ಅವರು " ಅಪ್ಪಾ, ನೀವು ಯಾವಾಗಲೂ ನನ್ನೊಂದಿಗೆ ಇರುತ್ತೀರಿ, ಸ್ಫೂರ್ತಿಯಾಗಿ, ನನ್ನ ನೆನಪುಗಳಲ್ಲಿ ಶಾಶ್ವತವಾಗಿ" ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ರಾಹುಲ್ ಜೊತೆಗೆ ಕಾಂಗ್ರೆಸ್ ನಾಯಕರು ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ್ದಾರೆ.

ಇಂದು 1991 ರಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದ ರಾಜೀವ್ ಗಾಂಧಿಯವರ 32 ನೇ ಪುಣ್ಯತಿಥಿ. ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಈ ದುರಂತ ಘಟನೆ ನಡೆದಿತ್ತು.
ಇಂದು ಮುಂಜಾನೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ದೆಹಲಿಯಲ್ಲಿರುವ ದಿವಂಗತ ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿಯವರ ಸ್ಮಾರಕ ವೀರ ಭೂಮಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕೂಡ ಉಪಸ್ಥಿತರಿದ್ದರು.
ಟ್ವಿಟರ್‌ನಲ್ಲಿ ಈ ಬಗ್ಗೆ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರ ನಿರ್ಮಾಣದಲ್ಲಿ "ಭಾರತದ ಮಹಾನ್ ಪುತ್ರ" ಕೊಡುಗೆಗಳನ್ನು ಸ್ಮರಿಸಿದ್ದಾರೆ. "ಮತ ಚಲಾಯಿಸುವ ವಯಸ್ಸನ್ನು ಕಡಿಮೆಗೊಳಿಸುವುದು, ಪಂಚಾಯತ್ ರಾಜ್, ಟೆಲಿಕಾಂ ಮತ್ತು ಐಟಿ ಕ್ರಾಂತಿಯನ್ನು ಬಲಪಡಿಸುವುದು ಮತ್ತು ನಿರಂತರ ಶಾಂತಿ ಒಪ್ಪಂದಗಳಂತಹ ಬಹು ಮಧ್ಯಸ್ಥಿಕೆಗಳ ಮೂಲಕ ಅವರು ಭಾರತವನ್ನು 21 ನೇ ಶತಮಾನದತ್ತ ಮುನ್ನಡೆಸಿದರು" ಎಂದಿದ್ದಾರೆ.
ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಕಾಂಗ್ರೆಸ್ ಸಂಸದ ಶಶಿ ತರೂರ್, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಮತ್ತು ಇತರ ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರು ಸಹ ರಾಜೀವ್ ಗಾಂಧಿಯವರನ್ನು ಸ್ಮರಿಸಿಕೊಂಡಿದ್ದಾರೆ. ಅವರ ತ್ಯಾಗ ಯಾವಾಗಲೂ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಪ್ರೇರೇಪಿಸುತ್ತದೆ ಎಂದು ತಮ್ಮ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಇಲ್ಲಿಯವರೆಗಿನ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿ ರಾಜೀವ್ ಗಾಂಧಿ ಅವರು 1984 ರಿಂದ 1989 ರವರೆಗೆ ಅಧಿಕಾರ ವಹಿಸಿಕೊಂಡಿದ್ದರು. ರಾಜಕೀಯವಾಗಿ ಪ್ರಬಲವಾದ ನೆಹರು - ಗಾಂಧಿ ಕುಟುಂಬದಿಂದ ಬಂದ ಅವರು 1984 ರಲ್ಲಿ ತಮ್ಮ ತಾಯಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದುರಂತ ಹತ್ಯೆಯ ನಂತರ ದೇಶದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
1944 ರಲ್ಲಿ ಬಾಂಬೆಯಲ್ಲಿ ಜನಿಸಿದ ರಾಜೀವ್ ಗಾಂಧಿ ಅವರು 1980 ರಲ್ಲಿ ಯುದ್ಧ ವಿಮಾನ ಅಪಘಾತದಲ್ಲಿ ತಮ್ಮ ಸಹೋದರ ಸಂಜಯ್ ಗಾಂಧಿಯವರ ನಿಧನದ ನಂತರ ರಾಜಕೀಯಕ್ಕೆ ಪ್ರವೇಶಿಸಿದ್ದರು. ಒಂದು ವರ್ಷದ ನಂತರ ತಮ್ಮ ಸಹೋದರನ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ಅಮೇಥಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಪ್ರಧಾನಿಯಾಗುವ ಮೊದಲು ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.ಇಂದು 1991 ರಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದ ರಾಜೀವ್ ಗಾಂಧಿಯವರ 32 ನೇ ಪುಣ್ಯತಿಥಿ. ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಈ ದುರಂತ ಘಟನೆ ನಡೆದಿತ್ತು.
ಇಂದು ಮುಂಜಾನೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ದೆಹಲಿಯಲ್ಲಿರುವ ದಿವಂಗತ ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿಯವರ ಸ್ಮಾರಕ ವೀರ ಭೂಮಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕೂಡ ಉಪಸ್ಥಿತರಿದ್ದರು.
ಟ್ವಿಟರ್‌ನಲ್ಲಿ ಈ ಬಗ್ಗೆ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರ ನಿರ್ಮಾಣದಲ್ಲಿ "ಭಾರತದ ಮಹಾನ್ ಪುತ್ರ" ಕೊಡುಗೆಗಳನ್ನು ಸ್ಮರಿಸಿದ್ದಾರೆ. "ಮತ ಚಲಾಯಿಸುವ ವಯಸ್ಸನ್ನು ಕಡಿಮೆಗೊಳಿಸುವುದು, ಪಂಚಾಯತ್ ರಾಜ್, ಟೆಲಿಕಾಂ ಮತ್ತು ಐಟಿ ಕ್ರಾಂತಿಯನ್ನು ಬಲಪಡಿಸುವುದು ಮತ್ತು ನಿರಂತರ ಶಾಂತಿ ಒಪ್ಪಂದಗಳಂತಹ ಬಹು ಮಧ್ಯಸ್ಥಿಕೆಗಳ ಮೂಲಕ ಅವರು ಭಾರತವನ್ನು 21 ನೇ ಶತಮಾನದತ್ತ ಮುನ್ನಡೆಸಿದರು" ಎಂದಿದ್ದಾರೆ.
ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಕಾಂಗ್ರೆಸ್ ಸಂಸದ ಶಶಿ ತರೂರ್, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಮತ್ತು ಇತರ ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರು ಸಹ ರಾಜೀವ್ ಗಾಂಧಿಯವರನ್ನು ಸ್ಮರಿಸಿಕೊಂಡಿದ್ದಾರೆ. ಅವರ ತ್ಯಾಗ ಯಾವಾಗಲೂ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಪ್ರೇರೇಪಿಸುತ್ತದೆ ಎಂದು ತಮ್ಮ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಇಲ್ಲಿಯವರೆಗಿನ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿ ರಾಜೀವ್ ಗಾಂಧಿ ಅವರು 1984 ರಿಂದ 1989 ರವರೆಗೆ ಅಧಿಕಾರ ವಹಿಸಿಕೊಂಡಿದ್ದರು. ರಾಜಕೀಯವಾಗಿ ಪ್ರಬಲವಾದ ನೆಹರು - ಗಾಂಧಿ ಕುಟುಂಬದಿಂದ ಬಂದ ಅವರು 1984 ರಲ್ಲಿ ತಮ್ಮ ತಾಯಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದುರಂತ ಹತ್ಯೆಯ ನಂತರ ದೇಶದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
1944 ರಲ್ಲಿ ಬಾಂಬೆಯಲ್ಲಿ ಜನಿಸಿದ ರಾಜೀವ್ ಗಾಂಧಿ ಅವರು 1980 ರಲ್ಲಿ ಯುದ್ಧ ವಿಮಾನ ಅಪಘಾತದಲ್ಲಿ ತಮ್ಮ ಸಹೋದರ ಸಂಜಯ್ ಗಾಂಧಿಯವರ ನಿಧನದ ನಂತರ ರಾಜಕೀಯಕ್ಕೆ ಪ್ರವೇಶಿಸಿದ್ದರು. ಒಂದು ವರ್ಷದ ನಂತರ ತಮ್ಮ ಸಹೋದರನ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ಅಮೇಥಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಪ್ರಧಾನಿಯಾಗುವ ಮೊದಲು ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

Click it and Unblock the Notifications