ಕೋಲಾರದಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಕಾರ್ಯಕ್ರಮ ಮುಂದೂಡಿಕೆ?
ನವದೆಹಲಿ, ಏಪ್ರಿಲ್ 5: ಏಪ್ರಿಲ್ 9ರಂದು ಕೋಲಾರದಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಅವರ ಸತ್ಯಮೇವ ಜಯತೇ ಕಾರ್ಯಕ್ರಮ ಮುಂದೂಡಿಕೆ ಆಗಿದೆ. ಇದಕ್ಕೂ ಮೊದಲು ಏಪ್ರಿಲ್ 5ರಂದು ಕೋಲಾರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈಗ ಮತ್ತೊಮ್ಮೆ ಅವರ ಕಾರ್ಯಕ್ರಮ ಮುಂದೂಡಿಕೆ ಆಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್ 10 ರಂದು ಕರ್ನಾಟಕದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದು, ಒಂದು ದಿನದ ಬಳಿಕ ತಮ್ಮ ಮಾಜಿ ಸಂಸದೀಯ ಕ್ಷೇತ್ರವಾದ ವೈನಾಡ್‌ಗೆ ಭೇಟಿ ನೀಡಲಿದ್ದಾರೆ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಹೇಳಿದ್ದಾರೆ.

ನಿನ್ನೆ ಎಲ್ಲಾ ಹಿರಿಯ ನಾಯಕರು ರಾಹುಲ್ ಗಾಂಧಿ ಅವರ ಜಾಮೀನಿಗಾಗಿ ಸೂರತ್‌ಗೆ ತಲುಪಿದ್ದು, ಏಪ್ರಿಲ್ 13 ರಂದು ವಿಚಾರಣೆ ನಡೆಯಲಿದೆ. ರಾಹುಲ್ ಗಾಂಧಿ ಏಪ್ರಿಲ್ 10ರಂದು ಕರ್ನಾಟಕದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಹೋಗುತ್ತಾರೆ. ನಾನು ಅಲ್ಲಿ ಹಾಜರಿರಬೇಕು ಎಂದು ನನಗೆ ತಿಳಿಸಲಾಗಿದೆ. ಹಾಗಾಗಿ ರಾಹುಲ್ ಜೀ ಏಪ್ರಿಲ್ 11ರಂದು ವಯನಾಡಿಗೆ ಹೋಗಲಿದ್ದಾರೆ ಎಂದು ಬಾಘೆಲ್ ಹೇಳಿದ್ದಾರೆ.
ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಏಪ್ರಿಲ್ 9ರಂದು ಪ್ರಧಾನಿ ಮೋದಿ ಅವರು ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದು ಇದಕ್ಕೆ ಪ್ರತಿಸ್ಪರ್ಧಾ ಕಾರ್ಯಕ್ರಮವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರ ಕಾರ್ಯಕ್ರಮ ಮುಂದೂಡಲಾಗಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರ ಜೊತೆಯಲ್ಲಿ ಅವರ ಸಹೋದರಿ ಹಾಗೂ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಇದ್ದರು. ಆಕೆಯ ಜೊತೆಗೆ ರಾಜಸ್ಥಾನ, ಛತ್ತೀಸ್‌ಗಢ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳೂ ನ್ಯಾಯಾಲಯಕ್ಕೆ ಬಂದಿದ್ದರು. ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸಲ್ಲಿಸಿದ ಮೇಲ್ಮನವಿ ಇತ್ಯರ್ಥವಾಗುವವರೆಗೆ ಜಾಮೀನು ನೀಡಿದೆ.

ರಾಹುಲ್ ಗಾಂಧಿ ಕರ್ನಾಟಕದಲ್ಲಿ 2019ರಲ್ಲಿ ಮಾಡಿದ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಮಾರ್ಚ್ 23 ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹೆಚ್ ಹೆಚ್ ವರ್ಮಾ ನ್ಯಾಯಾಲಯವು ದೋಷಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. 2019ರ ಏಪ್ರಿಲ್‌ನಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಅವ ಎಲ್ಲಾ ಕಳ್ಳರಿಗೆ ಮೋದಿ ಸಾಮಾನ್ಯ ಉಪನಾಮ ಹೇಗೆ?"ಇದೆ ಎಂದು ಪ್ರಶ್ನಿಸಿದ್ದರು.
2013ರಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ, ಮಾರ್ಚ್ 24 ರಂದು ರಾಹುಲ್ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು. ಈ ತೀರ್ಪಿನ ಪ್ರಕಾರ, ಯಾವುದೇ ಸಂಸದರು ಅಥವಾ ಶಾಸಕರು ತಪ್ಪಿತಸ್ಥರೆಂದು ಸಾಬೀತಾದರೆ ಮತ್ತು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷೆಯಾದರೆ ಸ್ವಯಂಚಾಲಿತವಾಗಿ ಅನರ್ಹರಾಗುತ್ತಾರೆ.
ಕೋಲಾರದಲ್ಲಿ ಮಾಡಿದ ಭಾಷಣಕ್ಕೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಕೋಲಾರದಿಂದ ಸಂವಿಧಾನ ಉಳಿಸುವ ಹೋರಾಟಕ್ಕೆ ಪಕ್ಷ ಮುಂದಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸುದ್ದಿಗಾರರಿಗೆ ತಿಳಿಸಿದ್ದರು.
ಮೈಸೂರಿನಲ್ಲಿ ಪ್ರಧಾನಿ ಮೋದಿಯವರ ಗೋಲ್ಡನ್ ಜುಬಿಲಿ 'ಪ್ರಾಜೆಕ್ಟ್ ಟೈಗರ್' ಆಚರಣೆ ಕಾರ್ಯಕ್ರಮಕ್ಕೆ ಟಕ್ಕರ್ ನೀಡಲು ಕೋಲಾರದಲ್ಲಿ 'ಸತ್ಯಮೇವ ಜಯತೆ' ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹಿಂದೆ ತಿಳಿಸಿದ್ದವು.












Click it and Unblock the Notifications