ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರವು ಜನತೆ ಬಗ್ಗೆ ಸೂಕ್ಷ್ಮ ಮನೋಭಾವ ಹೊಂದಬೇಕು: ರಾಹುಲ್

|
Google Oneindia Kannada News

ನವದೆಹಲಿ, ನವೆಂಬರ್ 03: ಹಬ್ಬದ ನಡುವೆಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇದು ದೀಪಾವಳಿ ಆಚರಿಸುವ ಸಮಯ. ಅಗತ್ಯ ವಸ್ತುಗಳ ಬೆಲೆಗಳು ಉತ್ತುಂಗದಲ್ಲಿವೆ. ಇದು ವ್ಯಂಗ್ಯದ ವಿಷಯವಲ್ಲ. ಮೋದಿ ಸರ್ಕಾರ, ಸಾರ್ವಜನಿಕರ ಬಗ್ಗೆ ಸೂಕ್ಷ್ಮ ಹೃದಯ ಹೊಂದಬೇಕೆಂದು ನಾನು ಬಯಸುತ್ತೇನೆಂದು ಹೇಳಿದ್ದಾರೆ.

 ದೀಪಾವಳಿಗೂ ಮುನ್ನವೇ ಗ್ರಾಹಕರಿಗೆ ಬರೆ ಎಳೆದ ಎಲ್‌ಪಿಜಿ, 266 ರೂ. ಹೆಚ್ಚಳ ದೀಪಾವಳಿಗೂ ಮುನ್ನವೇ ಗ್ರಾಹಕರಿಗೆ ಬರೆ ಎಳೆದ ಎಲ್‌ಪಿಜಿ, 266 ರೂ. ಹೆಚ್ಚಳ

ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಇಂದು ಯಾವುದೇ ರೀತಿಯ ಏರಿಕೆಯಾಗದೆ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಈ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿ ನಿಗದಿಯಾಗಿದೆ.

Rahul Gandhi Says Inflation At Peak Around Deepavali, Wish Centre Was Sensitive To People

ಹೈದಾರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ.

ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ ಇಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಕೂಡ ಇಂದು ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ನವೆಂಬರ್ 1ರಂದಷ್ಟೇ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ. 266ರಷ್ಟು ಏರಿಕೆ ಮಾಡಲಾಗಿತ್ತು.

ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿಯೂ ಬೆಲೆ ಏರಿಕೆ : ಈ ಹಿಂದೆ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಕೂಡ ಪೆಟ್ರೋಲಿಯಂ ಕಂಪನಿಗಳು ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿದ್ದವು.

19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಂದು 43 ರೂ ಮತ್ತು ಅಕ್ಟೋಬರ್ 1 ರಂದು 75 ರೂ ಹೆಚ್ಚಿಸಲಾಗಿತ್ತು. ಕಳೆದ ತಿಂಗಳು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು.

266 ರೂಪಾಯಿ ಹೆಚ್ಚಳದ ನಂತರ ದೆಹಲಿಯಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 1998 ರೂ.ಗೆ ಏರಿದೆ. ಇದಕ್ಕೂ ಮೊದಲು ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ (LPG Price) 1733 ರೂಪಾಯಿ ಇತ್ತು. ಮುಂಬೈನಲ್ಲಿ 19 ಕೆ.ಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 1950 ರೂ.ಆಗಿದೆ. ಕೋಲ್ಕತ್ತಾದಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ 2073.50 ರೂ ಆಗಿದ್ದರೆ, ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 2133 ರೂ.ಗೆ ಲಭ್ಯವಾಗಲಿದೆ.

ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.2 ಕೆಜಿ ತೂಕದ ಮನೆ ಬಳಕೆ ಎಲ್​ಪಿಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್​ ಬೆಲೆ (ಸಬ್ಸಿಡಿ ರಹಿತ) 899.50 ರೂ. ಇದೆ. ಕೋಲ್ಕತ್ತದಲ್ಲಿ 926 ರೂ.ಇದ್ದರೆ, ಚೆನ್ನೈನಲ್ಲಿ 915.50 ರೂಪಾಯಿ ಇದೆ.

ಹಾಗೇ, ಕೊನೇ ಬಾರಿಕೆ ಮನೆ ಬಳಕೆ ಸಿಲಿಂಡರ್ ಬೆಲೆಯನ್ನು ಅಕ್ಟೋಬರ್ 6ರಂದು ಏರಿಸಲಾಗಿತ್ತು. ಹಾಗೇ ಕಮರ್ಷಿಯಲ್​ ಸಿಲಿಂಡರ್​ ಬೆಲೆಯನ್ನು ಅಕ್ಟೋಬರ್​ 1ರಂದು ಹೆಚ್ಚಿಸಲಾಗಿತ್ತು. ಇದೀಗ ಆದ ಹೆಚ್ಚಳದಿಂದ ಹಲವು ನಗರಗಳಲ್ಲಿ ಬೆಲೆ 2000 ರೂಪಾಯಿ ಗಡಿ ದಾಟಿದ್ದು ಹೊರೆಯೇ ಆಗಿದೆ.

ಜಾಗತಿಕವಾಗಿ ಕಚ್ಚಾತೈಲ ಬೆಲೆ ಸರಾಸರಿ 83-85 ಡಾಲರ್ ದಾಟಿದ್ದು, ಡಾಲರ್ ಚೇತರಿಕೆ ಕಾಣದಿದ್ದರೂ ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ ಇಂಧನ ದರ ಏರಿಕೆ ಮಾಡಲಾಗಿತ್ತು. ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ ದರ ಏರಿಕೆ ಕಂಡಿತ್ತು.

ಮೆಟ್ರೋ ನಗರಗಳಲ್ಲಿ ಇಂದು (ನ.3) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮಂಗಳವಾರದಂದು ಪೆಟ್ರೋಲ್ ದರ ಪ್ರತಿ ಲೀಟರ್ ಮೇಲೆ 35 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಮೇಲೆ 36 ಪೈಸೆ ಹೆಚ್ಚಳವಾಗಿದೆ.

ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ. ಡೀಸೆಲ್ ಬೆಲೆ ಮಾತ್ರ ಏರಿಕೆಯಾಗಿದೆ.

English summary
Congress leader Rahul Gandhi on Wednesday hit out the Centre saying that inflation is at its peak around Diwali and added that he wished the government had a sensitive heart for the people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X