ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಿದೆಯೋ ಲಸಿಕೆ ಅಣ್ಣ; ಭಾರತದಲ್ಲಿ ಅಂಕಿ-ಸಂಖ್ಯೆಗಳೇ ಬಯಲು ಮಾಡುತ್ತೆ ಸರ್ಕಾರದ ಬಣ್ಣ?

|
Google Oneindia Kannada News

ನವದೆಹಲಿ, ಜುಲೈ 14: "ಕೇಂದ್ರ ಸರ್ಕಾರದ ಬಳಿ ವಾಕ್ಚಾತುರ್ಯವಿದೆಯೇ ವಿನಃ, ಕೊರೊನಾವೈರಸ್ ಲಸಿಕೆ ಇಲ್ಲ." ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿರುವ ಇದೊಂದು ಟ್ವೀಟ್ ಸಂದೇಶ ದೇಶಾದ್ಯಾಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಸೃಷ್ಟಿಯಾಗುತ್ತಿದೆ ಎಂದು ಮೇಲಿಂದ ಮೇಲೆ ಕಾಂಗ್ರೆಸ್ ನಾಯಕರು ಟೀಕಿಸುತ್ತಾ ಬಂದಿದ್ದಾರೆ. ದೇಶದಲ್ಲಿ ಲಸಿಕೆ ಉತ್ಪಾದನೆ ಪ್ರಮಾಣ ಕಡಿಮೆಯಾಗಿದ್ದು, ದಿನ ಕಳೆದಂತೆ ಲಸಿಕೆ ವಿತರಣೆ ಪ್ರಮಾಣವೂ ತಗ್ಗುತ್ತಿದೆ ಎಂಬುದು ಕಾಂಗ್ರೆಸ್ ವಾದವಾಗಿದೆ.

ಕೊರೊನಾವೈರಸ್ ಕಥೆ: ಓದಿ ತಿಳಿಯಿರಿ ಸಂಪೂರ್ಣ ಅಂಕಿ-ಸಂಖ್ಯೆಕೊರೊನಾವೈರಸ್ ಕಥೆ: ಓದಿ ತಿಳಿಯಿರಿ ಸಂಪೂರ್ಣ ಅಂಕಿ-ಸಂಖ್ಯೆ

ದೇಶದಲ್ಲಿ 2021ರ ಡಿಸೆಂಬರ್ ಅಂತ್ಯದ ವೇಳೆಗೆ 18 ವರ್ಷ ಮೇಲ್ಪಟ್ಟ 94 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಈ ಗುರಿ ತಲುಪಬೇಕಾದರೆ ಪ್ರತಿನಿತ್ಯ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ವಿತರಿಸಬೇಕಾಗುತ್ತದೆ. ಆದರೆ ದೆಹಲಿ, ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಲಸಿಕೆ ಖಾಲಿಯಾಗಿದೆ. ದಿನದ ಲಸಿಕೆ ವಿತರಣೆ ಪ್ರಮಾಣ 40 ಲಕ್ಷಕ್ಕಿಂತ ಕಡಿಮೆಯಾಗಿದೆ.

ಸ್ಪುಟ್ನಿಕ್-ವಿ ಸೂಪರ್: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕೆ ರಷ್ಯಾ ಲಸಿಕೆಯೇ ಮದ್ದು!?ಸ್ಪುಟ್ನಿಕ್-ವಿ ಸೂಪರ್: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕೆ ರಷ್ಯಾ ಲಸಿಕೆಯೇ ಮದ್ದು!?

ಕೊರೊನಾವೈರಸ್ ಲಸಿಕೆ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆಗಳೇನು?. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ ಪೂರೈಕೆಯಾಗಿರುವ ಲಸಿಕೆ ಪ್ರಮಾಣವೆಷ್ಟು?. ಎಷ್ಟು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ?. ಅದೆಷ್ಟು ಫಲಾನುಭವಿಗಳು ಲಸಿಕೆ ಪಡೆದುಕೊಂಡಿದ್ದಾರೆ?. ಲಸಿಕೆ ವಿತರಣೆಯಲ್ಲಿ ಮುಂದಿರುವ ರಾಜ್ಯಗಳಾವವು?. ದೇಶದಲ್ಲಿ ಕೊರೊನಾವೈರಸ್ ಹರಡುವಿಕೆ ಪ್ರಮಾಣ ಹಾಗೂ ತಪಾಸಣೆ ವೇಗ ಎಷ್ಟರ ಮಟ್ಟಿಗಿದೆ ಎಂಬುದರ ಕುರಿತು ಒಂದು ವಿಸ್ತೃತ ವರದಿಗಾಗಿ ಮುಂದೆ ಓದಿ.

'WhereArevVaccines' ಹ್ಯಾಷ್ ಟ್ಯಾಗ್ ಅಡಿ ಟ್ವೀಟ್

'WhereArevVaccines' ಹ್ಯಾಷ್ ಟ್ಯಾಗ್ ಅಡಿ ಟ್ವೀಟ್

ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆ ಖಾಲಿಯಾಗಿರುವುದನ್ನೇ ಉಲ್ಲೇಖಿಸಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ. "ವಾಕ್ಚಾತುರ್ಯವೇನೋ ಇದೆ, ಲಸಿಕೆ ಮಾತ್ರ ಇಲ್ಲ," ಎಂದು 'WhereArevVaccines' ಹ್ಯಾಷ್ ಟ್ಯಾಗ್ ಅಡಿ ಟ್ವೀಟ್ ಮಾಡಿದ್ದಾರೆ.

ಲಸಿಕೆ ಬಗ್ಗೆ ಸತ್ಯ ಹೇಳುವಂತೆ ಚಿದಂಬರಂ ಆಗ್ರಹ

ಲಸಿಕೆ ಬಗ್ಗೆ ಸತ್ಯ ಹೇಳುವಂತೆ ಚಿದಂಬರಂ ಆಗ್ರಹ

"ಕೊರೊನಾವೈರಸ್ ಲಸಿಕೆಯ ಕೊರತೆ ಒಂದು ಸತ್ಯವಾಗಿದೆ. ಲಸಿಕೆ ಉತ್ಪಾದನೆಯು ಉತ್ಪ್ರೇಕ್ಷೆಯಾಗಿದೆ. ಲಸಿಕೆ ಆಮದು ಪ್ರಮಾಣದ ಬಗ್ಗೆ ಎಲ್ಲವೂ ರಹಸ್ಯವಾಗಿದೆ. ಇದರ ಮಧ್ಯೆ 2021ರ ಡಿಸೆಂಬರ್ ವೇಳೆಗೆ ದೇಶದ ಪ್ರತಿಯೊಬ್ಬ ವಯಸ್ಕರಿಗೆ ಲಸಿಕೆ ನೀಡಲಾಗುವುದು ಎಂದು ಹೇಳುವುದು ಕೇವಲ ಬೂಟಾಟಿಕೆ ಆಗುತ್ತದೆ. ದೇಶದಲ್ಲಿ ಮುಂದೆ ಯಾವ ರೀತಿ ಸಮರ್ಪಕ ಹಾಗೂ ನಿರಂತರವಾಗಿ ಲಸಿಕೆ ಸರಬರಾಜು ಮಾಡಲಾಗುತ್ತದೆ. ಕೊವಿಡ್-19 ಲಸಿಕೆ ವಿತರಣೆ ಕಾರ್ಯಯೋಜನೆ ಹೇಗೆ ನಡೆಯಲಿದೆ. ಲಸಿಕೆ ವಿತರಣೆ ಕಾರ್ಯಕ್ರಮದ ಬಗ್ಗೆ ನೂತನ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸತ್ಯವನ್ನು ಹೇಳುತ್ತಾರೆಯೇ," ಎಂದು ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಪ್ರಶ್ನೆ ಮಾಡಿದ್ದರು.

ಭಾರತೀಯ ಭದ್ರತಾ ಪಡೆಗಳ ಸಿಬ್ಬಂದಿಯನ್ನೂ ಬಿಡದ ಕೊರೊನಾವೈರಸ್!ಭಾರತೀಯ ಭದ್ರತಾ ಪಡೆಗಳ ಸಿಬ್ಬಂದಿಯನ್ನೂ ಬಿಡದ ಕೊರೊನಾವೈರಸ್!

ಕೇಂದ್ರ ಸರ್ಕಾರ ಎಷ್ಟು ಕೋಟಿ ಡೋಸ್ ಲಸಿಕೆ ಪೂರೈಸಿದೆ?

ಕೇಂದ್ರ ಸರ್ಕಾರ ಎಷ್ಟು ಕೋಟಿ ಡೋಸ್ ಲಸಿಕೆ ಪೂರೈಸಿದೆ?

ಕೊರೊನಾವೈರಸ್ ಲಸಿಕೆ ಉತ್ಪಾದಕ ಕಂಪನಿಗಳಿಂದ ಶೇ.75ರಷ್ಟು ಲಸಿಕೆಯನ್ನು ಖರೀದಿಸುವ ಕೇಂದ್ರ ಸರ್ಕಾರ ಅದನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತ್ತದೆ. ಕೇಂದ್ರ ಸರ್ಕಾರವು 39,59,21,220 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲ ಮೂಲಗಳಿಂದ ಖರೀದಿಸಿ ಸರಬರಾಜು ಮಾಡಿದೆ. ಇನ್ನೂ1,51,52,450 ಡೋಸ್ ಲಸಿಕೆ ಬಾಕಿ ಉಳಿದುಕೊಂಡಿದೆ. ಸದ್ಯದಲ್ಲೇ ಇನ್ನೂ 30,250 ಡೋಸ್ ಲಸಿಕೆ ಸರಬರಾಜು ಮಾಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

4 ಕೊರೊನಾವೈರಸ್ ಲಸಿಕೆ ವಿತರಣೆಗೆ ಅನುಮತಿ

4 ಕೊರೊನಾವೈರಸ್ ಲಸಿಕೆ ವಿತರಣೆಗೆ ಅನುಮತಿ

ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.

ಕರ್ನಾಟಕ; ದಿನಕ್ಕೆ 5 ಲಕ್ಷ ಡೋಸ್ ಲಸಿಕೆಗೆ ಬೇಡಿಕೆ, ಪೂರೈಕೆ ಎಷ್ಟು?ಕರ್ನಾಟಕ; ದಿನಕ್ಕೆ 5 ಲಕ್ಷ ಡೋಸ್ ಲಸಿಕೆಗೆ ಬೇಡಿಕೆ, ಪೂರೈಕೆ ಎಷ್ಟು?

ಭಾರತದಲ್ಲಿ ಹಂತ ಹಂತವಾಗಿ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಹಂತ ಹಂತವಾಗಿ ಲಸಿಕೆ ವಿತರಣೆ ಅಭಿಯಾನ

ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ?

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ?

ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 179 ದಿನಗಳಲ್ಲಿ 38.50 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 37,14,441 ಜನರಿಗೆ ಲಸಿಕೆ ನೀಡಲಾಗಿದ್ದು, ಈವರೆಗೂ 38,76,97,935 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 18 ರಿಂದ 44 ವಯೋಮಾನದ 15,49,982 ಜನರಿಗೆ ಮೊದಲ ಡೋಸ್ ಹಾಗೂ 1,19,121 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 11,59,50,619 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 40,19,089 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

10 ಮತ್ತು 50 ಲಕ್ಷಕ್ಕಿಂತ ಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು

10 ಮತ್ತು 50 ಲಕ್ಷಕ್ಕಿಂತ ಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು

ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವಯೋಮಾನದ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಸ್ಥಿರತೆ

ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಸ್ಥಿರತೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,792 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ ಮಹಾಮಾರಿಗೆ 624 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 41,000 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಒಟ್ಟು 3,09,46,074 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,01,04,720 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,11,408 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,29,946 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದಕ್ಕೆ ಒಂದು ಕಾರಣವಿದೆ. ದೇಶದ ಮೊದಲಿನಂತೆ ಪ್ರತಿನಿತ್ಯ ಕನಿಷ್ಠ 19 ಲಕ್ಷ ಜನರಿಗೆ ತಪಾಸಣೆ ನಡೆಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 19,15,501 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 43,59,73,639 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

English summary
Rahul Gandhi Slams Centre on Alleged Covid Vaccine Shortage; Here Is What Govt Data Says. Read On To The Reality.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X