ಪ್ರಧಾನಿ ಮೋದಿಯ 8 ವರ್ಷದ ದುರಾಡಳಿತದಿಂದ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು: ರಾಹುಲ್ ಗಾಂಧಿ
ನವದೆಹಲಿ, ಮೇ 2: ಪ್ರಧಾನಿ ನರೇಂದ್ರ ಮೋದಿ ಕಳಪೆ ಆಡಳಿತ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿನ ವಿದ್ಯುತ್ ಬಿಕ್ಕಟ್ಟು ಸೇರಿದಂತೆ ಉದ್ಯೋಗ, ರೈತರು ಮತ್ತು ಹಣದುಬ್ಬರ ಬಿಕ್ಕಟ್ಟು ಇವುಗಳ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ 8 ವರ್ಷಗಳ ದುರಾಡಳಿತವು ಒಂದು ಕಾಲದಲ್ಲಿ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದನ್ನು ಹೇಗೆ ಹಾಳು ಮಾಡುತ್ತದೆ ಎಂಬುದರ ಕುರಿತಾದ ಅಧ್ಯಯನವಾಗಿದೆ ಎಂದು ಹೇಳಿದ್ದಾರೆ.
Power Crisis
— Rahul Gandhi (@RahulGandhi) May 2, 2022
Jobs Crisis
Farmer Crisis
Inflation Crisis
PM Modi’s 8-years of misgovernance is a case study on how to ruin what was once one of the world’s fastest growing economies.
ಪ್ರಸ್ತುತ ದೇಶದಲ್ಲಿನ ವಿದ್ಯುತ್ ಬಿಕ್ಕಟ್ಟಿನ ನಡುವೆ, ಮೋದಿ ಸರ್ಕಾರವು ದ್ವೇಷದ ರಾಜಕಾರಣ ಮಾಡುವುದನ್ನ ನಿಲ್ಲಿಸಿ, ವಿದ್ಯುತ್ ಉತ್ಪಾದನಾ ಕೇಂದ್ರಗಳಿಗೆ ಚಾಲನೆ ನೀಡಬೇಕು ಎಂದು ಕಳೆದ ಶುಕ್ರವಾರ ರಾಹುಲ್ ಗಾಂಧಿ ಆಗ್ರಹಿಸಿದ್ದರು.

ಸದ್ಯ ದೇಶದಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ಹಲವು ರಾಜ್ಯಗಳಲ್ಲಿ ವಿದ್ಯುತ್ ಕೊರೆತೆ ಉಂಟಾಗಿದೆ. ಇದರಿಂದಾಗಿ ಕೈಗಾರಿಕೆಗಳಲ್ಲೂ ಉತ್ಪಾದನೆ ಕುಂಠಿತಗೊಂಡಿದೆ. ದೇಶ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿದೆ. ಇವುಗಳ ಸಮಸ್ಯೆಯನ್ನ ಪರಿಹರಿಸುವ ಕೆಲಸ ಮಾಡಬೇಕಿದೆ.

ಅಲ್ಲದೆ ದೇಶದಲ್ಲಿ ಕಲ್ಲಿದ್ದಲು ಮತ್ತು ವಿದ್ಯುತ್ ಬಿಕ್ಕಟ್ಟು ಹೆಚ್ಚಾಗಿರುವ ಹಿನ್ನೆಲೆ ದೇಶ ಹಾಗೂ ಜನರ ಬಗೆಗಿನ ಕಾಳಜಿ ಇದೆಯೇ ಅಥವಾ ಇಲ್ಲವೇ ಎಂಬುದನ್ನ ಪ್ರಧಾನಿಗಳು ಹೇಳಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನ ಲೇವಡಿ ಮಾಡಿದ್ದಾರೆ.












Click it and Unblock the Notifications