ಮೋದಿ ನಪುಂಸಕ ಅಂದ ಸಲ್ಮಾನ್ ಬೆವರಿಳಿಸಿದ ರಾಹುಲ್
ನವದೆಹಲಿ, ಫೆ 27: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು 'ನಪುಂಸಕ' ಎಂದು ಕರೆದಿದ್ದ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಹೇಳಿಕೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತೀವ್ರ ಬೇಸರ ವ್ಯಕ್ತ ಪಡಿಸಿದ್ದಾರೆ.
ಇಂತಹಾ ಹೇಳಿಕೆಗಳನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ ಮತ್ತು ಇಂತಹ ಭಾಷೆ ಬಳಸುವುದನ್ನು ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ತೀವ್ರ ವಿರೋಧ ವ್ಯಕ್ತ ಪಡಿಸುತ್ತದೆ ಎಂದು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ರಾಹುಲ್, ಸಾರ್ವಜನಿಕ ಜೀವನದಲ್ಲಿರುವ ರಾಜಕೀಯ ಮುಖಂಡರು ಪದ ಬಳಕೆಯ ಮುನ್ನ ಜಾಗರೂಕರಾಗಿರ ಬೇಕು ಎನ್ನುವುದು ನನ್ನ ಅಭಿಪ್ರಾಯ ಮತ್ತು ಸಲ್ಮಾನ್ ಹೇಳಿಕೆಗೆ ನನ್ನ ಸಹಮತವಿಲ್ಲ ಎಂದು ಹೇಳಿದ್ದಾರೆ. [ಗಂಡನನ್ನು ನಪುಂಸಕ ಅಂದೀರಿ ಜೋಕೆ!]

ರಾಹುಲ್ ಗಾಂಧಿ ಅವರು ಸಲ್ಮಾನ್ ಖುರ್ಷಿದ್ ಬಳಸಿದ ಪದದ ಬಗ್ಗೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಮತ್ತು ಪಕ್ಷದ ವಕ್ತಾರ ಮನೀಶ್ ತಿವಾರಿ ತಿಳಿಸಿದ್ದಾರೆ. (ಸಲ್ಮಾನ್ ಹೇಳಿಕೆಗೆ ವ್ಯಾಪಕ ಖಂಡನೆ)
ಬುಧವಾರ ಫಾರೂಕಾಬಾದಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಚಿವ ಸಲ್ಮಾನ್ ಖುರ್ಷಿದ್, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ 'ನಪುಂಸಕ ವ್ಯಕ್ತಿ' ಎಂದು ಹೇಳಿಕೆ ನೀಡಿದ್ದರು.
"ಕೆಲ ಜನರು ಬಂದು, ಪ್ರಹಾರ ಮಾಡಿದರು ಮತ್ತು ಹೊರಟುಹೋದರು. ನೀವು ಅಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಈ ಘಟನೆ ನಡೆದಿತ್ತು. ಜನತೆಯ ರಕ್ಷಣೆ ಮಾಡಲು ನಿಮ್ಮಿಂದ ಸಾಧ್ಯವಾಗಲಿಲ್ಲ. ನೀವೊಬ್ಬ ಬಲಶಾಲಿಯೇ? ನೀವು ನಪುಂಸಕರಿದ್ದೀರಿ ಎಂದು ಗಂಭೀರ ಆರೋಪ ಮಾಡಿದ್ದರು. ಸಲ್ಮಾನ್ ಹೇಳಿಕೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. (ರಾಹುಲ್ ಗಾಂಧಿ ಯುಪಿಎಗೆ ಸೂಪರ್ ಮ್ಯಾನ್)
ಸಲ್ಮಾನ್ ಹೇಳಿಕೆ ತೀರಾ ಅಸಭ್ಯ. ಮುಂಬರುವ ಚುನಾವಣೆಯಲ್ಲಿ ಸೋಲು ಖಚಿತ ಎನ್ನುವ ಹತಾಶೆಯಲ್ಲಿ ಕಾಂಗ್ರೆಸ್ ಮುಖಂಡರು ಇಂಥ ನೀಚ ಹೇಳಿಕೆ ನೀಡುತ್ತಿದ್ದಾರೆಂದು ಎಂದು ಬಿಜೆಪಿ ಮುಖಂಡರು ಪ್ರತಿಕ್ರಿಯಿಸಿದ್ದರು.












Click it and Unblock the Notifications