Rahul Gandhi Speech: ನೀವು ಭಾರತ ಮಾತೆಯ ಹಂತಕರು: ಬಿಜೆಪಿ ನಾಯಕರ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
ನವದೆಹಲಿ, ಆಗಸ್ಟ್ 09: ಮಣಿಪುರದ ವಿಚಾರವಾಗಿ ಸದನದಲ್ಲಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 'ನೀವು ಭಾರತ ಮಾತೆಯ ಹಂತಕರು' ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಲೋಕಸಭೆಯಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ.
'ಭಾರತ ಒಂದು ಧ್ವನಿಯಾಗಿದೆ. ಅದು ಹೃದಯದ ಧ್ವನಿ. ನೀವು ಮಣಿಪುರದಲ್ಲಿ ಆ ಧ್ವನಿಯನ್ನು ಕೊಂದಿದ್ದೀರಿ. ನೀವು ಮಣಿಪುರದಲ್ಲಿ ಭಾರತ ಮಾತೆಯನ್ನು ಕೊಂದಿದ್ದೀರಿ. ನೀವು ದೇಶದ್ರೋಹಿಗಳು. ನನ್ನ ತಾಯಿ ಇಲ್ಲಿ ಕುಳಿತಿದ್ದಾರೆ. ನನಗೆ ಇನ್ನೊಂದು ತಾಯಿ ಭಾರತ ಮಾತಾ. ನೀವು ಮಣಿಪುರದಲ್ಲಿ ಅವಳನ್ನು ಕೊಂದಿದ್ದೀರಿ. ಆದ್ದರಿಂದಲೇ ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವುದಿಲ್ಲ. ನೀವು ಭಾರತ ಮಾತೆಯ ರಕ್ಷಕರಲ್ಲ, ನೀವು ಆಕೆಯ ಹಂತಕರು' ಎಂದು ರಾಹುಲ್ ಹೇಳಿದ್ದಾರೆ.

'ಪ್ರಧಾನಿ ಅವರು ಮಣಿಪುರಕ್ಕೆ ಹೋಗಿಲ್ಲ ಏಕೆಂದರೆ ಅವರು ಅದನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ. ನೀವು (ಬಿಜೆಪಿ) ಮಣಿಪುರವನ್ನು ವಿಭಜಿಸಿದ್ದೀರಿ' ಎಂದು ತಿಳಿಸಿದ್ದಾರೆ.
ರಾವಣನನ್ನು ರಾಮ ಕೊಲ್ಲಲಿಲ್ಲ. ಆದರೆ, ಆತನ ದುರಹಂಕಾರವೇ ರಾವಣನನ್ನು ಕೊಂದಿತು. ನೀವು ಎಲ್ಲೆಡೆ ಸೀಮೆಎಣ್ಣೆ ಎರಚಿದ್ದೀರಿ, ನೀವು ಮಣಿಪುರಕ್ಕೆ ಬೆಂಕಿ ಹಚ್ಚಿದ್ದೀರಿ, ನೀವು ಈಗ ಹರಿಯಾಣದಲ್ಲಿ ಅದೇ ಪ್ರಯತ್ನ ಮಾಡುತ್ತಿದ್ದೀರಿ ಎಂದು ತಿಳಿಸಿದ್ದಾರೆ.
ಈ ದೇಶವು ದುರಹಂಕಾರವನ್ನು ಸಹಿಸುವುದಿಲ್ಲ. ಕೆಲವೇ ದಿನಗಳಲ್ಲಿ, ಹಳೆಯ ಗಾಯವು ಮರುಕಳಿಸಿದೆ. ನಾನು ನೋವು ಅನುಭವಿಸುತ್ತಿದ್ದೇನೆ ಎಂದು ಅವರು ಹೇಳಿದರು.
ಇದೇ ವೇಳೆ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದವರಿಗೆ ಆಶ್ರಯ ನೀಡಲು ಸ್ಥಾಪಿಸಲಾದ ಪರಿಹಾರ ಶಿಬಿರಗಳಲ್ಲಿ ಇಬ್ಬರು ಮಹಿಳೆಯರೊಂದಿಗೆ ನಡೆಸಿದ ಸಂವಾದದ ಕುರಿತು ರಾಹುಲ್ ಗಾಂಧಿ ಮಾತನಾಡಿದರು.
ರಾಷ್ಟ್ರದ ಧ್ವನಿಯನ್ನು ಕೇಳಲು, ನಾವು ದುರಹಂಕಾರ ಮತ್ತು ದ್ವೇಷವನ್ನು ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿ ಹೇಳಿದರು.

ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಮ್ಮ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರಿಗೆ ಮಣಿಪುರ ಭಾರತದ ಭಾಗವಲ್ಲ ಎಂದು ಇದೇ ವೇಳೆ ಹರಿಹಾಯ್ದರು.
ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ರಾಹುಲ್ ಟೀಕಿಸಿದರು.
ಮಣಿಪುರದ ಜನರನ್ನು ಕೊಲ್ಲುವ ಮೂಲಕ, ನೀವು ಭಾರತ ಮಾತೆಯ ಹಂತಕರಾಗಿದ್ದೀರಿ. ನೀವು ದೇಶದ್ರೋಹಿಗಳು, ದೇಶಭಕ್ತರಲ್ಲ ಎಂದು ರಾಹುಲ್ ಕಿಡಿ ಕಾರಿದರು.
ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಆರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಈ ದೇಶವನ್ನು ಅರ್ಥಮಾಡಿಕೊಳ್ಳಲು ಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಜನರಿಗೆ ಹೇಳುತ್ತಿದ್ದೆ. 10 ವರ್ಷಗಳಿಂದ ನನ್ನನ್ನು ಏಕೆ ನಿಂದಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ಅವಿಶ್ವಾಸ ಗೊತ್ತುವಳಿ ಮೇಲಿನ ಮೂರು ದಿನಗಳ ಚರ್ಚೆ ಮಂಗಳವಾರದಂದು ಬಿರುಸಿನ ಚರ್ಚೆಗಳ ಮೂಲಕ ಆರಂಭಗೊಂಡಿದೆ. ವಿರೋಧ ಪಕ್ಷಗಳ ಪರ ಚರ್ಚೆ ಆರಂಭಿಸಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು 'ಒನ್ ಇಂಡಿಯಾ' ಕುರಿತು ಮಾತನಾಡಿದರು. ಒನ್ ಇಂಡಿಯಾದಲ್ಲಿ 'ಎರಡು ಮಣಿಪುರ'ಗಳನ್ನು ಬಿಜೆಪಿ ಸರ್ಕಾರ ಹುಟ್ಟುಹಾಕಿದೆ ಎಂದಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications