Himachal Pradesh Elections 2022: ರಾಹುಲ್ ಗಾಂಧಿ ಪ್ರಚಾರ
ಶಿಮ್ಲಾ, ನವೆಂಬರ್ 7: ನವೆಂಬರ್ 12ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಪ್ರಸ್ತುತ ಭಾರತ್ ಜೋಡೊ ಯಾತ್ರೆ ಮುನ್ನೆಡೆಸುತ್ತಿದ್ದಾರೆ. ಈಗಾಗಲೇ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಹಾಗೂ ಆಂದ್ರಪ್ರದೇಶಗಳಲ್ಲಿ ಸಾಗಿರುವ ಯಾತ್ರೆಯು ನವೆಂಬರ್ 7 ರಂದು ಮಹಾರಾಷ್ಟ್ರ ಪ್ರವೇಶಿಸಲಿದೆ.
ನವೆಂಬರ್ 12ರಂದು ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ(ಮಂಗಳವಾರ) ಹಿಮಾಚಲದಲ್ಲಿ ಪ್ರಚಾರ ಮಾಡಲಿದ್ದಾರೆ.

ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭೆ ಚುನಾವಣೆಗೆ ರಾಹುಲ್ ಗಾಂಧಿ ಪಕ್ಷದ ಪರ ಪ್ರಚಾರ ಕೈಗೊಂಡಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿದ್ದವು.
ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಹಿಮಾಚಲದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಅವರೊಂದಿಗೆ ರಾಹುಲ್ ಜೊತೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಮಾಚಲದಲ್ಲಿ ಬಂಡಾಯದ ಬಿಸಿ
ಹಿಮಾಚಲ ಪ್ರದೇಶದ ಕಾಂಗ್ರೆಸ್ ಘಟಕಕ್ಕೆ ಬಂಡಾಯದ ಬಿಸಿ ತಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಕುರಿತು ಮಾತನಾಡಿರುವ ಪಕ್ಷದ ರಾಜ್ಯ ವೀಕ್ಷಕ ಭೂಪೇಶ್ ಬಘೇಲ್, ಸಾಮೂಹಿಕ ನಾಯಕತ್ವದ ಅಡಿಯಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.












Click it and Unblock the Notifications