ಪ್ರಧಾನಿ ಮೋದಿಗೆ ರಾಹುಲ್ ಗಾಂಧಿಯಿಂದ ಹೊಸ ಸವಾಲು!
ನವದೆಹಲಿ, ಮೇ 24: ಇದೊಳ್ಳೆ ಸವಾಲಿನ ಕತೆಯಾಯ್ತಲ್ಲ! ವಿರಾಟ್ ಕೊಹ್ಲಿ ಸವಾಲು ಸ್ವೀಕರಿಸಿದ್ದೂ ಆಯ್ತು, ಮೋದಿಯವರಿಗೆ ಸವಾಲು ಹಾಕಿದ್ದು ಆಯ್ತು! ಇದೀಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರಿಗೆ ಚಾಲೆಂಜ್ ಎಸೆದಿದ್ದಾರೆ! ಆದರೆ ಇದು ಫಿಟ್ನೆಸ್ ಚಾಲೆಂಜ್ ಅಲ್ಲ, ಫ್ಯೂಯೆಲ್ ಚಾಲೆಂಜ್!
"ಪ್ರೀತಿಯ ಪ್ರಧಾನಿಯವರೇ, ನೀವು ವಿರಾಟ್ ಕೊಹ್ಲಿ ಅವರ ಚಾಲೆಂಜ್ ಸ್ವೀಕರಿಸಿದ್ದು ತಿಳಿದು ಬಹಳ ಸಂತಸವಾಯ್ತು. ಈಗ ನಾನೂ ಒಂದು ಸವಾಲು ನೀಡುತ್ತಿದ್ದೇನೆ. ಇಂಧನ ದರವನ್ನು ಕಡಿತಗೊಳಿಸಿ. ಇಲ್ಲವೆಂದರೆ ಇಡೀ ದೇಶದಾದ್ಯಂತ ಕಾಂಗ್ರೆಸ್ ಚಳವಳಿ ನಡೆಸುತ್ತದೆ. ಇದು ಫ್ಯೂಯೆಲ್ ಚಾಲೆಂಜ್. ನಾನು ನಿಮ್ಮ ಪ್ರತಿಕ್ರಿಯೆಗೆ ಕಾಯುತ್ತೇನೆ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Dear PM,
— Rahul Gandhi (@RahulGandhi) May 24, 2018
Glad to see you accept the @imVkohli fitness challenge. Here’s one from me:
Reduce Fuel prices or the Congress will do a nationwide agitation and force you to do so.
I look forward to your response.#FuelChallenge
ಹಮ್ ಫಿಟ್ ತೋ ಇಂಡಿಯಾ ಫಿಟ್ ಎಂಬ ಹ್ಯಾಶ್ ಟ್ಯಾಗ್ ಜೊತೆಗೆ ನಿನ್ನೆ ರಾಜ್ಯವರ್ಧನ್ ಸಿಂಗ್ ರಾಥೋಡ್ ಚಾಲೆಂಜ್ ಮಾಡಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರಿಗೆ.
ರಾಥೋರ್ ಅವರ ಚಾಲೆಂಜ್ ಸ್ವೀಕರಿಸಿದ್ದ ಕೊಹ್ಲಿ, ತಮ್ಮ ಫಿಟ್ನೆಸ್ ವಿಡಿಯೋ ಪೋಸ್ಟ್ ಮಾಡಿ, ತಮ್ಮ ಚಾಲೆಂಜ್ ಪತ್ನಿ ಅನುಷ್ಕಾ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಎಂ ಎಸ್ ಧೋನಿ ಅವರಿಗೆ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ಮೋದಿ, 'ವಿರಾಟ್ ಕೊಹ್ಲಿ ಅವರ ಚಾಲೆಂಜ್ ಸ್ವೀಕರಿಸಿದ್ದೇನೆ. ಸದ್ಯದಲ್ಲೇ ವಿಡಿಯೋ ಪೋಸ್ಟ್ ಮಾಡುತ್ತೇನೆ' ಎಂದು ಪ್ರತಿಕ್ರಿಯಿಸಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications