Get Updates
Get notified of breaking news, exclusive insights, and must-see stories!

ಇದು ಅಧಿಕೃತ, ಕಾಂಗ್ರೆಸ್ ಅಧ್ಯಕ್ಷ ಪಟ್ಟದಿಂದ ರಾಹುಲ್ ಇಳಿಯುವುದು ನಿಶ್ಚಿತ

ನವದೆಹಲಿ, ಜೂನ್ 20 : ಸಂಸತ್ತಿನಲ್ಲಿ ಕಾಂಗ್ರೆಸ್ ಪರವಾಗಿ ವಿರೋಧ ಪಕ್ಷದ ನಾಯಕನಾಗುವ ಜವಾಬ್ದಾರಿಯಿಂದಲೂ ಹಿಂದೆ ಸರಿದಿರುವ ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನದ ಬಗೆಗಿನ ಎಲ್ಲ ಊಹಾಪೋಹಗಳಿಗೂ ಕೊನೆಹಾಡಿದ್ದು, ಕೆಳಗಿಳಿಯುವುದು ನಿಶ್ಚಿತ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಉತ್ತರಾಧಿಕಾರಿ ಯಾರು ಆಗಬೇಕೆಂಬುದನ್ನು ನಾನು ನಿರ್ಧರಿಸುವುದಿಲ್ಲ, ನನ್ನ ಪಕ್ಷ ನಿರ್ಧರಿಸುತ್ತದೆ ಎಂದು ಪತ್ರಕರ್ತರಿಗೆ ಗುರುವಾರ ತಿಳಿಸಿದ ಅವರು, ಪ್ರತಿಯೊಬ್ಬರಿಗೂ ಉತ್ತರದಾಯಿತ್ವ ಇರಲೇಬೇಕು, ಸೋಲು ಅಥವಾ ಗೆಲುವಿನ ಹೊಣೆ ಹೊರಲೇಬೇಕು ಎಂದು ತಮ್ಮ ನಿರ್ಗಮನ ಕಾರಣ ತಿಳಿಸಿದರು.

ರಾಹುಲ್ ಗಾಂಧಿಯವರೇ ಕಾಂಗ್ರೆಸ್ ನ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಪಕ್ಷದ ಇತರ ನಾಯಕರು ಹೇಳಿಕೆ ನೀಡುತ್ತಿದ್ದರೂ, ರಾಹುಲ್ ಅವರು ಒಪ್ಪಿಕೊಳ್ಳಲು ತಯಾರಿಲ್ಲ. ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಾಗ ಹೀನಾಯ ಸೋಲಿನಿಂದ ತೀವ್ರ ಕಂಗೆಟ್ಟಿರುವ ಅವರು ಕಾಂಗ್ರೆಸ್ ಅಧ್ಯಕ್ಷ ಪಟ್ಟದಿಂದ ಕೆಳಗಿಳಿಯುವ ನಿರ್ಧಾರಕ್ಕೆ ಬಂದಿದ್ದಾರೆ.

Rahul Gandhi to step down as Congress president

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲುಂಟಾದ ನಂತರ ಮೇ 25ರಂದು ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ತಮ್ಮ ನಿರ್ಧಾರವನ್ನು ಅವರು ಪ್ರಕಟಿಸಿದ್ದರೂ, ಸಭೆ ಒಪ್ಪಿರಲಿಲ್ಲ. ಅಲ್ಲದೆ, ಇಡೀ ದೇಶದಾದ್ಯಂತ ಎಲ್ಲ ಹಂತಗಳಲ್ಲಿಯೂ ಬದಲಾವಣೆಗಳನ್ನು ಜಾರಿಗೆ ತರುವಂತೆ ಅವರನ್ನು ಕೋರಿದ್ದರು.

ಚಳಿಗಾಲದ ಅಧಿವೇಶನಕ್ಕೂ ಮುನ್ನ 10 ದಿನಗಳ ಕಾಲ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ರಾಹುಲ್ ಗಾಂಧಿ ಅವರು, ವಾಪಸ್ ಬಂದ ನಂತರವೂ ತಮ್ಮ ನಿರ್ಧಾರವನ್ನು ಬದಲಿಸಿಲ್ಲ. ಆದರೆ, ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಎಲ್ಲ ಸಮಿತಿಗಳ ಪದಾಧಿಕಾರಿಗಳನ್ನು ಬದಲಾಯಿಸಲು ರಾಹುಲ್ ಸೂಚಿಸಿದ್ದಾರೆ.

ಸಂಸತ್ತಿನಲ್ಲಿಯೂ ಕಾಂಗ್ರೆಸ್ ನಾಯಕತ್ವ ವಹಿಸಿಕೊಳ್ಳಲು ರಾಹುಲ್ ಗಾಂಧಿ ನಿರಾಕರಿಸಿದ್ದರಿಂದ ಆಧಿರ್ ರಂಜನ್ ಚೌಧರಿ ಅವರನ್ನು ಕಾಂಗ್ರೆಸ್ ನಾಯಕನನ್ನಾಗಿ ನೇಮಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ 542 ಕ್ಷೇತ್ರಗಳಿಗೆ ನಡೆದಿದ್ದ ಮತದಾನದಲ್ಲಿ ಕಾಂಗ್ರೆಸ್ ಕೇವಲ 52 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಅಭೂತಪೂರ್ವ ಜಯ ಗಳಿಸಿದ ಬಿಜೆಪಿ ಮತ್ತೊಮ್ಮೆ ಆಡಳಿತದ ಚುಕ್ಕಾಣಿ ಹಿಡಿದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+