ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಲಿದ್ದಾರೆ ರಾಹುಲ್ ಗಾಂಧಿ: ಯಾವ ವಿಷಯ? ವರದಿ ಓದಿ
ರಾಹುಲ್ ಅವರು ಅವರು ಈ ತಿಂಗಳ ಕೊನೆಯಲ್ಲಿ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಲಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ಉಪನ್ಯಾಸವನ್ನೂ ಕೊಡಲಿದ್ದಾರೆ. ಯಾವ ವಿಷಯ? ಇಲ್ಲಿ ತಿಳಿಯಿರಿ
ನವದೆಹಲಿ, ಫೆಬ್ರವರಿ 16: ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವ್ಯಕ್ತಿತ್ವ ಬದಲಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಸಂಸತ್‌ನಲ್ಲಿ ಅದಾನಿ ವಿಚಾರವಾಗಿ ಗುಡುಗಿದ್ದಾರೆ. ಅವರೀಗ ಕೇವಲ ರಾಜಕಾರಣಿಯಾಗಿರದೇ ಉಪನ್ಯಾಸಕರೂ ಆಗಲಿದ್ದಾರೆ. ಹೌದು, ರಾಹುಲ್ ಅವರು ಅವರು ಈ ತಿಂಗಳ ಕೊನೆಯಲ್ಲಿ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಲಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ಉಪನ್ಯಾಸವನ್ನೂ ಕೊಡಲಿದ್ದಾರೆ.
ಯುಕೆಗೆ ತಮ್ಮ ಭೇಟಿಯ ಕುರಿತು ಮಾಹಿತಿಯನ್ನು ಹಂಚಿಕೊಂಡ ರಾಹುಲ್ ಗಾಂಧಿ, ತಮ್ಮ ಅಲ್ಮಾ ಮೇಟರ್‌ಗೆ (ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ) ಭೇಟಿ ನೀಡಲು ಎದುರು ನೋಡುತ್ತಿದ್ದೇನೆ. ಭೌಗೋಳಿಕ ರಾಜಕೀಯ, ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ಪ್ರಜಾಪ್ರಭುತ್ವದ ಕುರಿತು ಉಪನ್ಯಾಸ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
'ನನ್ನ ಅಲ್ಮಾ ಮೇಟರ್ ಕೇಂಬ್ರಿಡ್ಜ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲು ಮತ್ತು @CambridgeJBS ನಲ್ಲಿ ಉಪನ್ಯಾಸ ನೀಡಲು ಎದುರುನೋಡುತ್ತಿದ್ದೇನೆ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

'ಭೌಗೋಳಿಕ ರಾಜಕೀಯ, ಅಂತರಾಷ್ಟ್ರೀಯ ಸಂಬಂಧಗಳು ಮತ್ತು ಪ್ರಜಾಪ್ರಭುತ್ವ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ನನ್ನ ವಿಚಾರಗಳನ್ನು ಹಂಚಿಕೊಳ್ಳಲಿದ್ದೇನೆ. ಉತ್ತಮ ಮನಸ್ಸುಗಳೊಂದಿಗೆ ತೊಡಗಿಸಿಕೊಳ್ಳಲು ಸಂತೋಷವಾಗಿದೆ' ಎಂದು ಕಾಂಗ್ರೆಸ್ ಸಂಸದರು ಹೇಳಿದ್ದಾರೆ.
ಟ್ವೀಟ್‌ನಲ್ಲಿ ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್, 'ಈ ತಿಂಗಳ ಕೊನೆಯಲ್ಲಿ ರಾಹುಲ್ ಗಾಂಧಿ ಅವರನ್ನು ಮತ್ತೆ ಕೇಂಬ್ರಿಡ್ಜ್ ವಿಶ್ವವಿದ್ಯಾಲಯಕ್ಕೆ ಸ್ವಾಗತಿಸಲು ಸಂತೋಷವಾಗಿದೆ' ಎಂದು ಹೇಳಿದೆ.
'ಅವರು (ರಾಹುಲ್ ಗಾಂಧಿ) @CambridgeMBA ಅಲ್ಲಿ ಉಪನ್ಯಾಸ ನೀಡಲಿದ್ದಾರೆ. ದತ್ತಾಂಶಗಳು ಮತ್ತು ಡೆಮಾಕ್ರಸಿ, ಭಾರತ-ಚೀನಾ ಸಂಬಂಧಗಳ ಬಗ್ಗೆ ಸೆಷನ್‌ಗಳನ್ನು ನಡೆಸಲಿದ್ದಾರೆ. ಬೆನೆಟ್ ಇನ್ಸ್ಟಿಟ್ಯೂಟ್ ಫಾರ್ ಪಬ್ಲಿಕ್ ಪಾಲಿಸಿ, ಸೆಂಟರ್ ಫಾರ್ ಜಿಯೋಪಾಲಿಟಿಕ್ಸ್ ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಮತ್ತು ಇತಿಹಾಸ ವಿಭಾಗದಿಂದ ಇದು ಆಯೋಜಿಸಲ್ಪಟ್ಟಿದೆ' ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ತಿಳಿಸಿದೆ.

ಫೆಬ್ರವರಿ 24 ರಿಂದ 26 ರ ವರೆಗೆ, ಛತ್ತೀಸ್‌ಗಢದ ರಾಯ್‌ಪುರದಲ್ಲಿ ಕಾಂಗ್ರೆಸ್‌ನ 85 ನೇ ಸರ್ವಸದಸ್ಯರ ಅಧಿವೇಶನದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಅಲ್ಲಿ ಪಕ್ಷವು 2024 ರ ಸಾರ್ವತ್ರಿಕ ಚುನಾವಣೆಗೆ ತನ್ನ ಕಾರ್ಯತಂತ್ರವನ್ನು ಹೆಣೆಯಲಿದೆ. ಹಲವಾರು ಆಂತರಿಕ ವಿಷಯಗಳ ಬಗ್ಗೆಯೂ ಚರ್ಚಿಸಲಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಚಿತ್ರಗಳು ಪ್ರಕಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಉತ್ತರ ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ಕೀಯಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಪಿಟಿಐ ವರದಿಯ ಪ್ರಕಾರ, ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾಲ ಕಾಶ್ಮೀರಕ್ಕೆ ವೈಯಕ್ತಿಕ ಭೇಟಿಯಲ್ಲಿದ್ದಾರೆ.

ಕಾಶ್ಮೀರದ ರಾಜಧಾನಿ ಶ್ರೀನಗರದ (ಮಾರ್ಚ್ 31 ರಂದು) ಲಾಲ್ ಚೌಕ್‌ನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಗಾಂಧಿಯವರು ತಮ್ಮ 3,800 ಕಿಲೋಮೀಟರ್ ಉದ್ದದ ಯಾತ್ರೆಯನ್ನು ಮುಕ್ತಾಯಗೊಳಿಸಿದರು. ಶೇರ್-ಎ-ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾಗವಹಿಸಿದ್ದರು. ಯಾತ್ರೆಯು 75 ಜಿಲ್ಲೆಗಳು, 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 136 ದಿನಗಳಲ್ಲಿ 4,000 ಕಿಮೀ ದೂರವನ್ನು ಕ್ರಮಿಸಿದೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications