Rahul Gandhi : ಚಾಲಕರ 'ಮನ್ ಕಿ ಬಾತ್' ಆಲಿಸಲು ಟ್ರಕ್ ಹತ್ತಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಾರಿ ಡ್ರೈವರ್ ಗಳ ಸಮಸ್ಯೆ ಆಲಿಸಲು, ಟ್ರಕ್‌ನಲ್ಲಿ ಪ್ರಯಾಣ ಮಾಡಿದ್ದಾರೆ. ಸೋಮವಾರ ರಾತ್ರಿ ಅವರು ದೆಹಲಿಯಿಂದ ಚಂಡೀಗಢಕ್ಕೆ ತೆರಳುವ ಸಂದರ್ಭದಲ್ಲಿ ಅಂಬಾಲ ಬಳಿ ಟ್ರಕ್ ಏರಿದ್ದು, ಡ್ರೈವರ್ ಗಳ ಸಮಸ್ಯೆಯನ್ನು ಕೇಳಿದ್ದಾರೆ.
ಅವರು ಟ್ರಕ್‌ನಲ್ಲಿ ಪ್ರಯಾಣ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಲಾರಿ, ಟ್ರಕ್‌ಗಳ ಚಾಲಕರು ರಾತ್ರಿಯಿಡೀ ಪ್ರಯಾಣ ಮಾಡುವ ಸಂದರ್ಭಗಳಲ್ಲಿ ಎದುರಾಗುವ ಸವಾಲುಗಳು, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ರಾಹುಲ್ ಗಾಂಧಿ ಟ್ರಕ್‌ನಲ್ಲಿ ಪ್ರಯಾಣ ಮಾಡಿದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.

ಅಂಬಾಲಾ ಬಳಿಯ ಟ್ರಕ್ ಸ್ಟಾಪ್‌ನಲ್ಲಿ ರಾಹುಲ್ ಗಾಂಧಿಯ ವೀಡಿಯೊಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟ್ ಮಾಡಿದ್ದಾರೆ. ಈ ಫೋಟೊ ಮತ್ತು ವಿಡಿಯೋಗಳು ಸೋಮವಾರ ರಾತ್ರಿಯದ್ದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ದೆಹಲಿಯಿಂದ ಶಿಮ್ಲಾಕ್ಕೆ ತೆರಳುತ್ತಿದ್ದು, ಅಲ್ಲಿ ತಂಗಿ ಪ್ರಿಯಾಂಕ ಗಾಂಧಿ ವಾದ್ರಾ ಕುಟುಂಬದ ಜೊತೆ ಕೆಲ ದಿನಗಳು ಸಮಯ ಕಳೆಯಲಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಘರ್ಹಿ ಅವರು ಟ್ವಿಟರ್‌ನಲ್ಲಿ ರಾಹುಲ್ ಗಾಂಧಿ ಟ್ರಕ್‌ನೊಳಗೆ ಕುಳಿತಿರುವಾಗ ಬೆಂಬಲಿಗರತ್ತ ಕೈ ಬೀಸುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. "ರಾಹುಲ್ ಗಾಂಧಿ ಮಾತ್ರ ರಾಷ್ಟ್ರೀಯ ಹೆದ್ದಾರಿ 1ರಲ್ಲಿ ಟ್ರಕ್ ಸವಾರಿ ಮಾಡುವಾಗ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಟ್ರಕ್ ಚಾಲಕರ ಜೊತೆ ಸಮಯ ಕಳೆದಿದ್ದಾರೆ" ಎಂದು ಹೇಳಿದ್ದಾರೆ.
Rahul Gandhi travelled with Truck Drivers from Delhi to Chandigarh in a lorry to understand their issues!!!
— Sridhar Ramaswamy శ్రీధర్ రామస్వామి ✋🇮🇳 (@sridharramswamy) May 23, 2023
This simplicity and down to earth approach sets him apart from leaders of other parties!!! pic.twitter.com/3SZRagShQP
ಮತ್ತೊಬ್ಬ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಪ್ರತಿಕ್ರಿಯೆ ನೀಡಿ, "ರಾಹುಲ್ ಗಾಂಧಿ ಈ ರಾಷ್ಟ್ರದ ಜನರ ಮಾತುಗಳನ್ನು ಕೇಳಲು ಬಯಸುತ್ತಾರೆ ಮತ್ತು ದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಹೋರಾಟಗಳನ್ನು ಅರ್ಥಮಾಡಿಕೊಳ್ಳಲು ಬಯಸುತ್ತಾರೆ." ಎಂದು ಹೇಳಿದ್ದಾರೆ.
ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿ ಮನಗೆದ್ದಿದ್ದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ತಮ್ಮ ಸರಳತೆಯಿಂದ ಹಲವು ಬಾರಿ ಈ ರೀತಿ ಸುದ್ದಿಯಾಗಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಅವರು ಬೆಂಗಳೂರಿನಲ್ಲಿ ಬಿಬಿಎಂಪಿ ಬಸ್‌ನಲ್ಲಿ ಪ್ರಯಾಣಿಸಿ ಸುದ್ದಿಯಾಗಿದ್ದರು, ಈ ಸಂದರ್ಭದಲ್ಲಿ ಅವರು ಜನರ ಕಷ್ಟಗಳನ್ನು ಕೇಳಿದ್ದರು. ಅಲ್ಲದೆ, ಡೆಲಿವರಿ ಬಾಯ್ ಜೊತೆ ಕೂಡ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದ್ದು ಸಾಕಷ್ಟು ಗಮನ ಸೆಳೆದಿತ್ತು.
'ಭಾರತ್ ಜೋಡೊ ಯಾತ್ರೆ' ಹೆಸರಿನಲ್ಲಿ ಅವರು ದೇಶಾದ್ಯಂತ ಕಾಲ್ನಡಿಗೆಯಲ್ಲಿ ಜಾಥಾ ನಡೆಸಿದ್ದರು. ಕಾಂಗ್ರೆಸ್‌ನ ಪ್ರಮುಖರು ಈ ಯಾತ್ರೆಯಲ್ಲಿ ಭಾಗವಹಿಸಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಜಾಥಾ ಇಡೀ ಭಾರತವನ್ನು ಒಟ್ಟುಗೂಡಿಸಲು ಸಹಾಯಕವಾಗುತ್ತದೆ ಎಂದು ಕಾಂಗ್ರೆಸ್ ಹೇಳಿಕೊಂಡಿತ್ತು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications