Rahul Gandhi: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ನ ಸೈಡ್‌ಗೆ ತಳ್ಳಿದ್ರಾ ರಾಹುಲ್; ಕನ್ನಡಿಗರ ಆಕ್ರೋಶ, ಇಲ್ಲಿದೆ ವೈರಲ್ ವಿಡಿಯೋ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರತಿಭಟನಾ ರ‍್ಯಾಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸೈಡ್‌ಗೆ ತಳ್ಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ರಾಹುಲ್ ಗಾಂಧಿ ಅವರು ಕಾರ್ಯಕರ್ತರೊಬ್ಬರಿಗೆ ಕೈಯಿಂದ ಗುದ್ದದಾರೆ ಎನ್ನಲಾದ ವಿಡಿಯೋ ಸಹ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ನಡೆದಿರುವ ಲೋಪ ಹಾಗೂ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಕಾಕ್ರೋಚ್ ಜನತಾ ಪಾರ್ಟಿಯಿಂದ ಪ್ರತ್ಯೇಕವಾಗಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ರಾಹುಲ್ ಗಾಂಧಿ ಅವರು ಪ್ರತಿಭಟನಾ​ ರ‍್ಯಾಲಿಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಪಕ್ಕಕ್ಕೆ ತಳ್ಳಿದ್ದಾರೆ / ಸರಿಸಿದ್ದಾರೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Rahul Gandhi Viral Video Did He Push Karnataka Deputy CM D K Shivakumar Aside Kannadigas React

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಆಗಿರುವ ಲೋಪಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಪ್ರತಿಭಟನೆಯಲ್ಲಿನ ಹಲವು ವಿಚಾರಗಳು ವಿವಾದಕ್ಕೆ ಕಾರಣವಾಗಿದೆ.

ಸುಪ್ರೀಂಕೋರ್ಟ್ಂ ಚಲೋದಲ್ಲಿ ಡಿ.ಕೆ ಶಿವಕುಮಾರ್‌ನ ಪಕ್ಕಕ್ಕೆ ತಳ್ಳಿದರೇ ರಾಹುಲ್ ಗಾಂಧಿ ?

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ INDIA ಒಕ್ಕೂಟದ ನಾಯಕರು ಅಕ್ಟೋಬರ್ 12ರ ಸೋಮವಾರ ಸುಪ್ರೀಂಕೋರ್ಟ್ ಚಲೋ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದಾರೆ.

ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಸೇರಿದಂತೆ ಹಲವು ವಿಪಕ್ಷ ನಾಯಕರು ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಸುತ್ತ ಜನಸಂದಣಿ ಹೆಚ್ಚಾಗಿ ನೂಕಾಟ ಉಂಟಾಗಿತ್ತು. ಡಿ.ಕೆ. ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಅವರು ಪಕ್ಕಕ್ಕೆ ತಳ್ಳಿದಂತೆ ಕಾಣಿಸುವ ದೃಶ್ಯಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರ ವಿರೋಧ

ಇನ್ನು ಈ ವಿಡಿಯೋಗೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರಿಂದ ವಿರೋಧ ವ್ಯಕ್ತವಾಗಿದೆ. ಬಿಜೆಪಿ ನಾಯಕ ಅರವಿಂದ ಬೆಲ್ಲದ ಅವರು, ನಮ್ಮ ರಾಜ್ಯದ ಮುಖ್ಯಮಂತ್ರಿಗಳಿಗೆ ಎಂಥ ಗತಿ ಬಂತು ನೋಡಿ! ಇದು ನಮ್ಮ ರಾಜ್ಯದ ಜನರ ದೌರ್ಭಾಗ್ಯ. ರಾಹುಲ್ ಗಾಂಧಿ ಅವರ ಮುಂದೆ ಮುಖ್ಯಮಂತ್ರಿಗಳ ಬೆಲೆ ಎಷ್ಟು ಅನ್ನೋದಕ್ಕೆ ಇದೇ ಒಂದು ನಿದರ್ಶನ. ಚುನಾವಣಾ ಆಯೋಗದ ಮುಖ್ಯ ಆಯುಕ್ತರ ರಾಜೀನಾಮೆ ಕೇಳುವ ನೈತಿಕತೆಯೂ ಇಲ್ಲ, ನ್ಯಾಯಾಲಯದ ಮುಂದೆ ಇಡಲು ಸಾಕ್ಷಿಯೂ ಇಲ್ಲ. ಇದೊಂದು ಹೋರಾಟನಾ ಎಂದು ಪ್ರಶ್ನೆ ಮಾಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟ್ವೀಟ್

ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ಸಾವಿರಾರು ಭಾರತೀಯರು ಒಗ್ಗೂಡುವುದನ್ನು ದೆಹಲಿಯ ಬೀದಿಗಳು ಕಂಡಿವೆ. ಸಂವಿಧಾನವನ್ನು ರಕ್ಷಿಸಲು ಮತ್ತು ಪ್ರತಿ ಮತದ ಪಾವಿತ್ರ್ಯವನ್ನು ಕಾಪಾಡುವ ಹಂಚಿಕೆಯ ಸಂಕಲ್ಪದೊಂದಿಗೆ ಈ ಆಂದೋಲನಕ್ಕೆ ಸೇರಿದ ಎಲ್ಲರೊಂದಿಗೆ ನಾನು ನಿಲ್ಲುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇದು ಯಾವುದೇ ಒಬ್ಬ ವ್ಯಕ್ತಿ ಅಥವಾ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ಹೋರಾಟವಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಪ್ರಜಾಪ್ರಭುತ್ವ ಗಣರಾಜ್ಯವನ್ನು ನಿರ್ಮಿಸಲು ಒಂದಾದ ಜನರ ಧ್ವನಿಯಾಗಿದೆ. ಇಂದು ನಮ್ಮ ಪ್ರಜಾಪ್ರಭುತ್ವ ಸಂಸ್ಥೆಗಳಿಗೆ ಬೆದರಿಕೆ ಎದುರಾಗುತ್ತಿರುವಾಗ, ಅದೇ ಒಗ್ಗಟ್ಟಿನ ಮನೋಭಾವ ನಮಗೆ ದಾರಿ ತೋರಿಸಬೇಕು. ನಮ್ಮ ಬೇಡಿಕೆಗಳು ಸ್ಪಷ್ಟವಾಗಿವೆ: ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಿಲ್ಲಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಮತ್ತು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು.

ಸುಪ್ರೀಂ ಕೋರ್ಟ್ ಚಲೋ ನಮ್ಮ ಮೆರವಣಿಗೆ ಈ ಸಾಮೂಹಿಕ ಸಂಕಲ್ಪವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ನಾವು ಸೂಕ್ತ ಪ್ರಕ್ರಿಯೆಯ ಮೂಲಕ ನ್ಯಾಯಾಲಯದ ಮುಂದೆ ನಮ್ಮ ಕಳವಳಗಳನ್ನು ಇಡುತ್ತೇವೆ ಮತ್ತು ಸಂವಿಧಾನವನ್ನು ಎತ್ತಿಹಿಡಿಯಲು, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರತಿಯೊಬ್ಬ ನಾಗರಿಕರ ಮತವನ್ನು ಗೌರವಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಈ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+