ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಪುಲ್ವಾಮಾ ಭಯೋತ್ಪಾದಕ ದಾಳಿಯ ಸ್ಥಳಕ್ಕೆ ಭೇಟಿ ನೀಡಿದರು.

|
Google Oneindia Kannada News

ಶ್ರೀನಗರ, ಜನವರಿ 28: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಪುಲ್ವಾಮಾ ಭಯೋತ್ಪಾದಕ ದಾಳಿಯ ಸ್ಥಳದಲ್ಲಿ ನಿಂತು ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು.

2019ರ ಫೆಬ್ರವರಿ 14 ರಂದು ಕಾಶ್ಮೀರದಲ್ಲಿ ಭಯೋತ್ಪಾದಕರು ಸಿಆರ್‌ಪಿಎಫ್‌ ಬೆಂಗಾವಲು ಪಡೆ ಮೇಲೆ ದಾಳಿ ಮಾಡಿದಾಗ 40 ಯೋಧರು ಪುಲ್ವಾಮಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದರು. ಶನಿವಾರ ಅವಂತಿಪೋರಾದಿಂದ ಕಾಂಗ್ರೆಸ್ ತನ್ನ ಯಾತ್ರೆಯನ್ನು ಪುನರಾರಂಭಿಸಿತು. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತ್‌ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತೆ ಲೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತೆ ಲೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

ಯಾತ್ರೆಯು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಮೂಲಕ ಹಾದುಹೋಗುತ್ತಿದ್ದು, ಜನವರಿ 30 ರಂದು ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಜನವರಿ 27 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತಾ ಲೋಪ ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು, ತಾವು ಇದರ ಮಧ್ಯಸ್ಥಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

Rahul Gandhi visited Pulwama during Bharat Jodo Yatra

ಮುಂದಿನ ಎರಡು ದಿನಗಳಲ್ಲಿ ಯಾತ್ರೆ ಮತ್ತು ಜನವರಿ 30ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬೃಹತ್ ಸಮಾವೇಶವನ್ನು ನಾವು ಹಮ್ಮಿಕೊಂಡಿದ್ದೇವೆ. ಜನವರಿ 30ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಮತ್ತು ಇತರ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸುತ್ತಿದ್ದಾರೆ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

Fact check: ರಾಹುಲ್ ಗಾಂಧಿ ಜೊತೆಗೆ ಬಿಬಿಸಿ ಸಾಕ್ಷ್ಯಚಿತ್ರದ ನಿರ್ಮಾಪಕರು ಫೋಟೋ ತೆಗೆಸಿಕೊಂಡಿದ್ದು ನಿಜವೇ?Fact check: ರಾಹುಲ್ ಗಾಂಧಿ ಜೊತೆಗೆ ಬಿಬಿಸಿ ಸಾಕ್ಷ್ಯಚಿತ್ರದ ನಿರ್ಮಾಪಕರು ಫೋಟೋ ತೆಗೆಸಿಕೊಂಡಿದ್ದು ನಿಜವೇ?

ನೀವು ಈ ವಿಷಯದಲ್ಲಿ ವೈಯಕ್ತಿಕವಾಗಿ ಮಧ್ಯಪ್ರವೇಶಿಸಿದರೆ ಮತ್ತು ಜನವರಿ 30 ರಂದು ಶ್ರೀನಗರದಲ್ಲಿ ನಡೆಯುವ ಯಾತ್ರೆ ಮತ್ತು ಕಾರ್ಯಕ್ರಮದ ಪರಾಕಾಷ್ಠೆಯವರೆಗೆ ಸೂಕ್ತ ಭದ್ರತೆಯನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರೆ ನಾನು ಕೃತಜ್ಞನಾಗಿದ್ದೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಮಿತ್‌ ಶಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಶುಕ್ರವಾರ ಬೆಳಿಗ್ಗೆ ಯಾತ್ರೆಯ ಸಮಯದಲ್ಲಿ ಭದ್ರತಾ ವ್ಯವಸ್ಥೆಯು ಸಂಪೂರ್ಣವಾಗಿ ಕುಸಿದಿದೆ. ಇಂದು ಬೆಳಿಗ್ಗೆ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ, ದುರದೃಷ್ಟವಶಾತ್, ಪೊಲೀಸ್ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಜನಸಂದಣಿಯನ್ನು ನಿರ್ವಹಿಸಬೇಕಾದ ಪೊಲೀಸರು ಎಲ್ಲಿಯೂ ಕಾಣಲಿಲ್ಲ. ನಾನು ಯಾತ್ರೆಯಲ್ಲಿ ಮುಂದೆ ನಡೆಯಲು ನನ್ನ ಭದ್ರತಾ ಸಿಬ್ಬಂದಿ ತುಂಬಾ ಜನ ಇದ್ದರಿಂದ ಎಚ್ಚರಿಕೆ ನೀಡಿದರು. ಆದ್ದರಿಂದ ನಾನು ರದ್ದುಗೊಳಿಸಬೇಕಾಯಿತು ಎಂದು ಹೇಳಿದ್ದರು.

English summary
During the Bharat Jodo Yatra, Congress leader Rahul Gandhi stood at the site of the Pulwama terror attack on Saturday and paid homage to the martyrs of the Pulwama terror attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X