ರಾಹುಲ್ ಗಾಂಧಿ Vs ದೇವೇಂದ್ರ ಫಡ್ನವೀಸ್: ರಾಹುಲ್ ನಾಚಿಕೆಗೆಟ್ಟು ಸುಳ್ಳು ಹೇಳುತ್ತಿದ್ದಾರೆ ಎಂದ ಬಿಜೆಪಿ!
Rahul Gandhi vs Devendra Fadnavis: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ದೇಶದಲ್ಲಿ ಬಿಹಾರದ ವಿಧಾನಸಭೆ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಬಿಹಾರ ವಿಧಾನಸಭೆ ಚುನಾವಣೆಯು ಈ ವರ್ಷಾಂತ್ಯ ನಡೆಯಲಿದೆ. ಆದರೆ, ಚುನಾವಣೆ ಸಮೀಪಿಸುತ್ತಿರುವಾಗಲೇ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಗೆಪಾಟಲಿಗೆ ಗುರಿಯಾಗಿದ್ದಾರೆ. ಬಿಹಾರ ಚುನಾವಣೆಯ ಸಂದರ್ಭದಲ್ಲಿ ಅವರು ಮಹಾರಾಷ್ಟ್ರದ ಚುನಾವಣೆ ವಿಚಾರವನ್ನು ಎಳೆದುತಂದಿರುವುದನ್ನು ಯುದ್ಧಕ್ಕೆ ಮುಂಚೆಯೇ ಸೋಲು ಒಪ್ಪಿಕೊಂಡಂತೆ ಅಂತಲೇ ವಿಶ್ಲೇಷಿಸಲಾಗುತ್ತಿದೆ.
ಬಿಹಾರದ ವಿಧಾನಸಭೆ ಚುನಾವಣೆ ನಡೆಯುವುದಕ್ಕೂ ಮುಂಚೆಯೇ ರಾಹುಲ್ ಗಾಂಧಿ ಅವರು ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಅಮೋಘ ಯಶಸ್ಸು ಸಾಧಿಸಿವೆ. ಆದರೆ, ರಾಹುಲ್ ಗಾಂಧಿ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ಮ್ಯಾಚ್ ಫಿಕ್ಸಿಂಗ್‌ಗೆ ಹೋಲಿಕೆ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಹಾಗೂ ರಾಹುಲ್ ಗಾಂಧಿ ಅವರ ಲೇಖನವನ್ನು ಬಿಜೆಪಿಯ ನಾಯಕರು ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು, ನಾಚಿಕೆಗೆಟ್ಟು ಸುಳ್ಳು ಹೇಳುತ್ತಿದ್ದಾರೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.

ಇನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ದೇವೇಂದ್ರ ಫಡ್ನವೀಸ್ ಅವರು ರಾಹುಲ್ ಗಾಂಧಿ ಅವರ ಸುಳ್ಳುಗಳ ಬಗ್ಗೆ ಮಾತನಾಡಿದ್ದಾರೆ. ರಾಹುಲ್ ಅವರು ಜನರ ಜನಾದೇಶವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜನರಿಂದ ತಿರಸ್ಕರಿಸಲ್ಪಟ್ಟ ರಾಹುಲ್ ಗಾಂಧಿ ಅವರು ಈಗ ತಮ್ಮ ನಿರ್ಧಾರವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇನ್ನು ಬಿಜೆಪಿ ನಾಯಕರು ಸಹ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪವು ಮಹಾರಾಷ್ಟ್ರದ ಜನತೆಗೆ ಅದರಲ್ಲೂ ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಹಾಗೂ ಭಾರತೀಯ ಚುನಾವಣಾ ಆಯೋಗ ಸಹ ರಾಹುಲ್ ಗಾಂಧಿ ಅವರ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ತಳ್ಳಿ ಹಾಕಿದೆ. ರಾಹುಲ್ ಗಾಂಧಿ ಅವರು ವಿವಿಧ ಪತ್ರಿಕೆಗಳಿಗೆ ನೀಡಿರುವ ವಿಶೇಷ ಲೇಖನದ ಬಗ್ಗೆ ಮಾತನಾಡಿರುವ ದೇವೇಂದ್ರ ಫಡ್ನವೀಸ್ ಅವರು ರಾಹುಲ್ ಗಾಂಧಿ ಅವರ ಲೇಖನವನ್ನು ನಿರ್ಲಕ್ಷಿಸುವುದೇ ಉತ್ತಮ. ರಾಹುಲ್ ಗಾಂಧಿ ಅವರು ದೇಶದ ವಿಭಜನೆಯ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಗಳನ್ನು ಕಾಂಗ್ರೆಸ್ ನಿರ್ವಹಿಸಿದ್ದ ವಿಧಾನಕ್ಕೂ ಟೀಕಿಸಿದರು.
ರಾಹುಲ್ ಆರೋಪ ತಿರಸ್ಕರಿಸಿದ ದೇವೇಂದ್ರ ಫಡ್ನವೀಸ್
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಾಗೂ ಇತ್ತೀಚಿನ ಚುನಾವಣೆಗಳಲ್ಲಿ ನಕಲಿ ಮತದಾರರು / ಮತಗಳನ್ನು ಸೇರಿಸಲಾಗಿದೆ ಎನ್ನುವ ಗಂಭೀರ - ತರ್ಕವಿಲ್ಲದ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ದೇವೇಂದ್ರ ಫಡ್ನವೀಸ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮಹಾರಾಷ್ಟ್ರದ ಯುವ ಮತದಾರರ ಸಂಖ್ಯೆ ಹೆಚ್ಚಳವಾಗಿರುವುದರಿಂದ ಮತದಾರರ ಸಂಖ್ಯೆಯು ಅದಕ್ಕೆ ಅನುಗುಣವಾಗಿ ಹೆಚ್ಚಳವಾಗಿದೆ. 26 ಲಕ್ಷಕ್ಕೂ ಹೆಚ್ಚು ಯುವ ಮತದಾರರು ಸೇರ್ಪಡೆ ಆಗಿರುವ ಅಧಿಕೃತ ಮಾಹಿತಿಯನ್ನು ಅವರು ಒದಗಿಸಿದ್ದಾರೆ. ಚುನಾವಣಾ ಆಯೋಗದಿಂದ ಬಂದ ವಿವರವಾದ ಪತ್ರಗಳನ್ನು ಮೊದಲು ರಾಹುಲ್ ಗಾಂಧಿ ಅವರು ಓದಬೇಕು ಎಂದು ಮಹಾರಾಷ್ಟ್ರ ಸಿಎಂ ಅವರು ಒತ್ತಾಯಿಸಿದ್ದಾರೆ. ಫಡ್ನವೀಸ್ ಅವರ ಪ್ರಕಾರ, 2024 ರಲ್ಲಿ ಮತದಾರರ ಸಂಖ್ಯೆಗೆ ಸಂಬಂಧಿಸಿದಂತೆ ಅಸಾಮಾನ್ಯ ಅಥವಾ ರಾಹುಲ್ ಗಾಂಧಿ ಅವರು ಹೇಳುವಂತೆ ಯಾವುದೇ ಅಸಹಜ ಬೆಳವಣಿಗೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.
ಕೊನೆಯ ಕ್ಷಣದಲ್ಲಿ ಹೆಚ್ಚಿನ ಮತದಾನ ನಡೆಸಿರುವುದರಿಂದ ಎನ್‌ಡಿಎ (ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ) ಅಭ್ಯರ್ಥಿಗಳಿಗೆ ಅನುಕೂಲಕರವಾಗಿ ಬದಲಾಗಿದೆ ಎನ್ನುವ ರಾಹುಲ್ ಗಾಂಧಿ ಅವರ ಆರೋಪವನ್ನೂ ದೇವೇಂದ್ರ ಫಡ್ನವಿಸ್ ಅವರು ತಳ್ಳಿಹಾಕಿದ್ದಾರೆ. ಇದು ಅರ್ಧಸತ್ಯ ಮತ್ತು ನಗೆಪಾಟಲಿನ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ. ಕೊನೆಯ ಹಂತದಲ್ಲಿ ಹೆಚ್ಚಿನ ಮತದಾನ ನಡೆದಿರುವುದು ಹೇಗೆ ವಿರೋಧ ಪಕ್ಷದ ಅಭ್ಯರ್ಥಿಗಳಿಗೂ ಲಾಭವಾಗಿದೆ ಎನ್ನುವುದನ್ನೂ ದೇವೇಂದ್ರ ಫಡ್ನಿವೀಸ್ ಅವರು ವಿವರಿಸಿದ್ದಾರೆ. ಈ ರಾಹುಲ್ ಗಾಂಧಿಯವರ ವಾದವನ್ನು ಪ್ರಶ್ನಿಸಿದ್ದಾರೆ. ಸಾಕ್ಷ್ಯಗಳನ್ನು ಮರೆಮಾಚುವ ಹಾಗೂ ಸಾರ್ವಜನಿಕ ನಂಬಿಕೆಗೆ ಹಾನಿಯನ್ನುಂಟು ಮಾಡುವ ಕೆಲಸವನ್ನು ರಾಹುಲ್ ಗಾಂಧಿ ಅವರು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಏಕನಾಥ್ ಶಿಂಧೆ ಮತ್ತು ಜೆ.ಪಿ ನಡ್ಡಾ ಪ್ರತಿಕ್ರಿಯಿ
ಇನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿದೆ ಎನ್ನುವ ರಾಹುಲ್ ಗಾಂಧಿ ಅವರ ಆರೋಪವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಟೀಕಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟದ ಯಶಸ್ಸು ಅಮೋಘವಾಗಿತ್ತು ಎಂದಿರುವ ಅವರು, ಲೋಕಸಭಾ ಚುನಾವಣೆಗೆ ಮೊದಲು ಗಾಂಧಿಯವರ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದ ಮೂಲಕ ಹಾದುಹೋದರೂ, ಜನ ಅವರನ್ನು ಬೆಂಬಲಿಸಲಿಲ್ಲ ಎಂದು ಏಕನಾಥ್ ಶಿಂಧೆ ಅವರು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮೀಸಲಾತಿ ಹಾಗೂ ಸಂವಿಧಾನ ಬದಲಾವಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಜನರಿಗೆ ನೀಡಿತ್ತು ಎನ್ನುವ ವಿಚಾರವನ್ನೂ ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.
Rahul Gandhi’s latest article is a blueprint for manufacturing fake narratives, owing to his sadness and desperation of losing election after election.
— Jagat Prakash Nadda (@JPNadda) June 7, 2025
Read how Rahul Gandhi lied about Maharashtra:⁰https://t.co/xJjwLFdf6V
Here’s how he does it, step by step:
Step 1:…
ನಿರಂತರವಾಗಿ ಚುನಾವಣೆಗಳಲ್ಲಿ ಸೋತ ನಂತರ ರಾಹುಲ್ ಗಾಂಧಿ ಅವರು ಇದೀಗ ಹತಾಶೆಯಿಂದ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ದೂರಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 5 ಅಂಶಗಳ ಮೂಲಕ ರಾಹುಲ್ ಗಾಂಧಿಯ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಹೇಗೆ ಸುಳ್ಳು ಹೇಳಿದ್ದಾರೆಂದು ವಿವರಿಸಿದ್ದಾರೆ. ರಾಹುಲ್ ಗಾಂಧಿ ಅವರು ಆತ್ಮಾವಲೋಕನ ಮಾಡಿಕೊಳ್ಳುವ ಬದಲು, ಪಿತೂರಿ ನಡೆಸುತ್ತಿದ್ದಾರೆ. ಯಾವುದೇ ಸಾಕ್ಷಿಗಳು ಇಲ್ಲದೆ ಪ್ರಮುಖ ಸರ್ಕಾರಿ ಸಂಸ್ಥೆಗಳಿಗೆ ಅವಮಾನ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಚುನಾವಣಾ ಆಯೋಗದ ನಿಲುವು
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳ ಕುರಿತು ರಾಹುಲ್ ಗಾಂಧಿಯವರ ಆರೋಪಗಳನ್ನು ಆಧಾರರಹಿತ ಮತ್ತು ಕಾನೂನಿಗೆ ಮಾಡಿದ ಅವಮಾನ ಎಂದು ಚುನಾವಣಾ ಆಯೋಗ ಹೇಳಿದೆ. ಭಾರತೀಯ ಚುನಾವಣೆಗಳನ್ನು ಕಾನೂನಿನ ಪ್ರಕಾರ ನಡೆಸಲಾಗುತ್ತದೆ. ಭಾರತೀಯ ಚುನಾವಣಾ ಆಯೋಗದ ಕಾರ್ಯುವೈಖರಿಯನ್ನು ಜಾಗತಿಕವಾಗಿ ಗುರುತಿಸಲಾಗಿದೆ ಎಂದು ಆಯೋಗ ಹೇಳಿದೆ.
ಚುನಾವಣೆಗಳಲ್ಲಿ ಸರ್ಕಾರಿ ಸಿಬ್ಬಂದಿ ಮತ್ತು ರಾಜಕೀಯ ಪಕ್ಷಗಳ ಅಧಿಕೃತ ಪ್ರತಿನಿಧಿಗಳು ಅಥವಾ ಎಲ್ಲಾ ಹಂತಗಳ ಅಭ್ಯರ್ಥಿಗಳು ಭಾಗವಹಿಸುತ್ತಾರೆ ಎಂದು ಆಯೋಗವು ಹೇಳಿದೆ. ತಪ್ಪು ಮಾಹಿತಿ ಹರಡುವುದು ಕಾನೂನನ್ನು ಅಗೌರವಿಸಿದಂತೆ ಹಾಗೂ ಚುನಾವಣೆಯ ಸಮಯದಲ್ಲಿ ಶ್ರದ್ಧೆಯಿಂದ ಕೆಲಸ ಮಾಡುವ ಚುನಾವಣಾ ಸಿಬ್ಬಂದಿಯನ್ನು ಅಪಮಾನಿಸಿದಂತೆ ಅಂತ ಹೇಳಿದೆ.
ಪ್ರತಿಕೂಲವಾದ ಫಲಿತಾಂಶ ಪ್ರಕಟವಾದ ಮೇಲೆ ಈ ರೀತಿ ಮಾತನಾಡುವುದು ಅಸಂಬದ್ಧ ಮತ್ತು ರಾಜಕೀಯ ಪಕ್ಷಗಳೇ ನೇಮಿಸಿದ ಸಾವಿರಾರು ಪ್ರತಿನಿಧಿಗಳನ್ನು ಪ್ರಶ್ನೆ ಮಾಡಿದೆ ಎಂದೂ ಆಯೋಗ ಉಲ್ಲೇಖಿಸಿದೆ.
-
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications