Rahul Gandhi: ವಯನಾಡು ಜನತೆಗೆ ಭಾವನಾತ್ಮಕ ಪತ್ರ ಬರೆದ ರಾಹುಲ್ ಗಾಂಧಿ
ಲೋಕಸಭಾ ಚುನಾವಣೆಯಲ್ಲಿ ರಾಯ್‌ಬರೇಲಿ ಮತ್ತು ವಯನಾಡು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಈಗ ರಾಯ್‌ಬರೇಲಿ ಕ್ಷೇತ್ರದ ಸಂಸದರಾಗಿ ಮುಂದುವರೆಯಲಿದ್ದು, ವಯನಾಡು ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ.
ವಯನಾಡು ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ.

ರಾಹುಲ್ ಗಾಂಧಿ ವಯನಾಡು ಕ್ಷೇತ್ರದ ಜನರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. 2019 ಮತ್ತು 2024 ಚುನಾವಣೆಯಲ್ಲಿ ಗೆಲ್ಲಿಸಿದ ಜನರಿಗೆ ಧನ್ಯವಾದ ತಿಳಿಸಿದ್ದಾರೆ.
ಪತ್ರದಲ್ಲಿ ಅವರು ವಯನಾಡ್ ಜನರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ವಯನಾಡು ತಮ್ಮ ಮನೆ ಮತ್ತು ಅಲ್ಲಿನ ಜನ ನಮ್ಮ ಕುಟುಂಬ, ಅವರ ಜೊತೆ ಸದಾ ಇರುತ್ತೇನೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪತ್ರದಲ್ಲೇನಿದೆ?
ವಯನಾಡು ಕ್ಷೇತ್ರದ ಜನರನ್ನು ಸಹೋದರ ಸಹೋದರಿಯರೇ ಎಂದಿರುವ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡುವ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು ಎಂದು ಬೇಸರದಿಂದ ಹೇಳಿದ್ದಾರೆ. ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡ್‌ನಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ನನಗೆ ಸಾಂತ್ವನವಿದೆ ಎಂದಿದ್ದಾರೆ.
ಉತ್ತರ ಪ್ರದೇಶದ ಕಾಂಗ್ರೆಸ್‌ನ ಪ್ರಬಲ ಭದ್ರಕೋಟೆಗಳಾದ ರಾಯ್‌ಬರೇಲಿ ಮತ್ತು ಅಮೇಥಿಯನ್ನು ಬಿಜೆಪಿ ವಶಪಡಿಸಿಕೊಂಡ ನಂತರ ಅವರು ಐದು ವರ್ಷಗಳ ಹಿಂದೆ ಬೆಂಬಲ ಕೋರಿ ವಯನಾಡ್‌ಗೆ ಹೋದದ್ದನ್ನು ನೆನಪಿಸಿಕೊಂಡರು.
ನಾನು ನಿಮಗೆ ಅಪರಿಚಿತನಾಗಿದ್ದೆ, ಆದರೂ ನೀವು ನನ್ನನ್ನು ನಂಬಿದ್ದೀರಿ, ನೀವು ನನ್ನನ್ನು ಪ್ರೀತಿಯಿಂದ ಅಪ್ಪಿಕೊಂಡಿದ್ದೀರಿ, ಯಾವ ರಾಜಕೀಯ ರಚನೆ, ಧರ್ಮ, ಸಮುದಾಯ, ಭಾಷೆಯನ್ನು ನೋಡದೆ ನನ್ನನ್ನು ಗೆಲ್ಲಿಸಿದ್ದೀರಿ ಎಂದಿದ್ದಾರೆ.
ಪ್ರಿಯಾಂಕಾ ಗಾಂಧಿ ಇರುತ್ತಾರೆ
ಪ್ರಿಯಾಂಕಾ ಗಾಂಧಿಯವರು ಅಧಿಕಾರಕ್ಕೆ ಬಂದರೆ "ಅತ್ಯುತ್ತಮ ಕೆಲಸ" ಮಾಡುತ್ತಾರೆ ಎಂದು ವಯನಾಡ್ ಜನತೆಗೆ ಭರವಸೆ ನೀಡಿದ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಿರುವುದು ನಿಜವಾಗಿಯೂ ಸಂತೋಷ ಮತ್ತು ಗೌರವದ ವಿಚಾರ. ಬೇಸರದ ನಡುವೆಯೂ ನನಗೆ ಸಮಾಧಾನವಾಗಿದೆ ಏಕೆಂದರೆ ನನ್ನ ಸಹೋದರಿ ಪ್ರಿಯಾಂಕಾ ಅವರು ನಿಮ್ಮನ್ನು ಪ್ರತಿನಿಧಿಸಲು ಇರುತ್ತಾರೆ, ನೀವು ಅವರಿಗೆ ಅವಕಾಶ ನೀಡಲು ನಿರ್ಧರಿಸಿದರೆ ಅವರು ನಿಮ್ಮ ಸಂಸದರಾಗಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ತಮ್ಮ ನಿರ್ಧಾರವನ್ನು ಉಲ್ಲೇಖಿಸಿದ ಅವರು, ನನಗೆ ಸಮಾಧಾನವಾಗಿದೆ ಏಕೆಂದರೆ ನಾನು ರಾಯ್ ಬರೇಲಿಯ ಜನರಲ್ಲಿ ಪ್ರೀತಿಯ ಕುಟುಂಬವನ್ನು ಹೊಂದಿದ್ದೇನೆ ಮತ್ತು ಆಳವಾದ ಬಾಂಧವ್ಯವನ್ನು ಹೊಂದಿದ್ದೇನೆ. ನಿಮಗೆ ಮತ್ತು ರಾಯ್ ಬರೇಲಿಯ ಜನರಿಗೆ ಬದ್ಧವಾಗಿರುತ್ತೇನೆ. ದೇಶದಲ್ಲಿ ಹರಡುತ್ತಿರುವ ದ್ವೇಷ ಮತ್ತು ಹಿಂಸಾಚಾರವನ್ನು ಸೋಲಿಸಲು ನಾವು ಹೋರಾಡುತ್ತೇವೆ ಎಂದಿದ್ದಾರೆ.
ಪತ್ರದ ಕೊನೆಯಲ್ಲಿ, ರಾಹುಲ್ ಗಾಂಧಿ ವಯಂಡ್‌ನ ಜನರಿಗೆ ತನ್ನನ್ನು ನಂಬಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಅವರನ್ನು ತಮ್ಮ ಕುಟುಂಬ ಎಂದಿದ್ದಾರೆ.
ನೀವು ನನಗಾಗಿ ಮಾಡಿದ್ದಕ್ಕಾಗಿ ನಿಮಗೆ ಹೇಗೆ ಧನ್ಯವಾದ ಹೇಳಬೇಕೆಂದು ನನಗೆ ತಿಳಿದಿಲ್ಲ. ನನಗೆ ಹೆಚ್ಚು ಅಗತ್ಯವಿರುವಾಗ ನೀವು ನನಗೆ ನೀಡಿದ ಪ್ರೀತಿ ಮತ್ತು ರಕ್ಷಣೆಗಾಗಿ ತುಂಬಾ ಧನ್ಯವಾದಗಳು. ನೀವು ನನ್ನ ಕುಟುಂಬದ ಭಾಗವಾಗಿದ್ದೀರಿ, ನಿಮಗಾಗಿ ನಾನು ಯಾವಾಗಲೂ ಇರುತ್ತೇನೆ ಎಂದು ಬರೆದಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications