ಎ. 23ರಂದು ಕಾಂಗ್ರೆಸ್ ನಿಂದ 'ಸಂವಿಧಾನ ಉಳಿಸಿ' ಅಭಿಯಾನಕ್ಕೆ ಚಾಲನೆ

Subscribe to Oneindia Kannada

ನವದೆಹಲಿ, ಏಪ್ರಿಲ್ 15: ಏಪ್ರಿಲ್ 23ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 'ಸಂವಿಧಾನ ಉಳಿಸಿ' ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಂವಿಧಾನದ ಮೇಲಿನ ಆಕ್ರಮಣ ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್ ಪಕ್ಷದ ಹಾಲಿ ಮತ್ತು ಮಾಜಿ ಜನಪ್ರಿನಿಧಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕರು, ಸಂಸದರು, ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇವರಲ್ಲದೆ ಯುವಕರು, ಮಹಿಳೆಯರು ಮತ್ತು ಸೇವಾ ದಳದ ಸದಸ್ಯರು ಕೂಡ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಕಾರ್ಯಕ್ರಮ ದೆಹಲಿಯ ತಲ್ಕಟೋರಾ ಸ್ಟೇಡಿಯಂನಲ್ಲಿ ನಡೆಯಲಿದೆ.

Rahul to launch save the Constitution drive next week

ಇಲ್ಲಿ ಭಾಗವಹಿಸಿದ ಪ್ರತಿನಿಧಿಗಳು ಈ ವಿಚಾರವನ್ನು ದೇಶದಾದ್ಯಂತ ಹರಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮತ್ತು ಕಾರ್ಯಕ್ರಮದ ಆಯೋಜಕ ನಿತಿನ್ ರಾವತ್ ಹೇಳಿದ್ದಾರೆ.

ಬಿಜೆಪಿ ಆಡಳಿತಾವಧಿಯಲ್ಲಿ ಸಂವಿಧಾನಕ್ಕೆ ಆಪತ್ತು ಎದುರಾಗಿದೆ. ಸಮುದಾಯಕ್ಕೆ ಶೈಕ್ಷಣಿಕ ಮತ್ತು ಔದ್ಯೋಗಿಕ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ಸಮಾಜದಲ್ಲಿ ಹಲವು ವಿಷಯಗಳ ಬಗ್ಗೆ ಆಕ್ರೋಶವಿದೆ. ಸಭೆಯಲ್ಲಿ ಈ ಬಗ್ಗೆ ಗಮನಹರಿಸಲಾಗುತ್ತದೆ ಎಂದು ಅವರು ವಿವರ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Seeking to reach out to Dalits, Congress president Rahul Gandhi will on April 23 launch his party's nationwide save the constitution' campaign, aimed at highlighting alleged attacks on the Constitution and the community.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ