ಬಳ್ಳಾರಿ ಜೀನ್ಸ್ ಘಟಕಗಳಿಗೆ ಸೌಲಭ್ಯ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ರಾಹುಲ್ ಗಾಂಧಿ

ಬೆಂಗಳೂರು, ಆಗಸ್ಟ್ 3: ಬಳ್ಳಾರಿಯ ಜೀನ್ಸ್ ಉತ್ಪಾದನಾ ಘಟಕಗಳ ಸೌಲಭ್ಯಗಳನ್ನು ಸುಧಾರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಹುಲ್ ಗಾಂಧಿ ಪತ್ರ ಬರೆದ ಬಳಿಕ ಬಳ್ಳಾರಿ ಜೀನ್ಸ್ ಉತ್ಪಾದನಾ ಘಟಕಗಳಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಅವರ ತಂಡವು ಕಾರ್ಯ ನಿರ್ವಹಿಸುತ್ತಿದೆ. ಬಳ್ಳಾರಿಯಲ್ಲಿ ಸುಮಾರು 300 ಸಣ್ಣ ಮತ್ತು ಮಧ್ಯಮ ಜೀನ್ಸ್ ಉತ್ಪಾದನಾ ಘಟಕಗಳಿದ್ದು ಸಾವಿರಾರು ಕುಟುಂಬಗಳಿಗೆ ಜೀವನಾಧಾರವಾಗಿದೆ.

Rahul Urges Karnataka Government to Prevent Decline of Ballari Jeans Units

ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಬಳ್ಳಾರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಬಳ್ಳಾರಿ ಜಿಲ್ಲೆಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವುದಾಗಿ ಮತ್ತು ಬಳ್ಳಾರಿಯನ್ನು 'ಜೀನ್ಸ್ ಕ್ಯಾಪಿಟಲ್' ಮಾಡುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತು ನೆನಪಿಟ್ಟುಕೊಂಡಿರುವ ರಾಹುಲ್ ಗಾಂಧಿ ಈ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಮೂಲ ಸೌಕರ್ಯಕ್ಕೆ ಬೇಡಿಕೆ

ಬಳ್ಳಾರಿ ಜೀನ್ಸ್ ತಯಾರಿಕಾ ಘಟಕಗಳು ಮೂಲ ಸೌಕರ್ಯದ ಕೊರತೆ ಅನುಭವಿಸುತ್ತಿವೆ. ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿರುವ ಜೀನ್ಸ್ ತಯಾರಕ ಭರತ್ ಮಾತನಾಡಿ, ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಳ್ಳಾರಿಯಲ್ಲಿ ಕಳೆದ 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅತ್ಯಂತ ಹಳೆಯ ಜೀನ್ಸ್ ತಯಾರಕರು ಎಂದು ಭರತ್ ಹೇಳಿಕೊಂಡಿದ್ದು. ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಕೇಳಿಕೊಂಡಿದ್ದಾರೆ. ಇಲ್ಲಿ ತಯಾರಾಗುವ ಬಟ್ಟೆಗಳು ಚೆನ್ನೈ, ಮುಂಬೈ ಮತ್ತು ಇತರ ನಗರಗಳಲ್ಲಿನ ಮಾರುಕಟ್ಟೆಗಳನ್ನು ತಲುಪಬೇಕು. ಆದರೆ ಬಟ್ಟೆಗಳನ್ನು ಸಾಗಿಸಲು ಇಲ್ಲಿನ ಉತ್ಪಾದಕರು ನೆರೆ ರಾಜ್ಯದ ರೈಲ್ವೆ ನಿಲ್ದಾಣಗಳನ್ನು ಅವಲಂಬಿಸಿದ್ದಾರೆ ಎಂದು ಹೇಳಿದರು.

ತ್ಯಾಜ್ಯ ಸಂಸ್ಕರಣಾ ಘಟಕ ಬೇಕು

ಬಟ್ಟೆಗಳನ್ನು ಸಾಗಾಟ ಮಾಡಲು ಆಂಧ್ರಪ್ರದೇಶದ ಗುಂತಕಲ್‌ನಂತಹ ನಗರಗಳಲ್ಲಿನ ರೈಲ್ವೆ ನಿಲ್ದಾಣಗಳನ್ನು ನಾವು ಅವಲಂಬಿಬೇಕು. ಬದಲಾಗಿ ಸ್ಥಳೀಯವಾಗಿ ರೈಲ್ವೆ, ಸಾರಿಗೆ ಸಂಪರ್ಕ ಒದಗಿಸಿದರೆ ಉದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಜೀನ್ಸ್ ತಯಾರಕರು ಬಟ್ಟೆಗಳನ್ನು ತೊಳೆಯಲು ರಾಸಾಯನಿಕಗಳನ್ನು ಬಳಸುತ್ತಿದ್ದು ಇದರಿಂದ ಮಾಲಿನ್ಯವಾಗುತ್ತಿದೆ ಎಂದು ನೋಟಿಸ್ ನೀಡಲಾಗಿದೆ. ಸರ್ಕಾರ ಬಳ್ಳಾರಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಬೇಕು ಎಂದು ಹೇಳಿದರು.

ಬಳ್ಳಾರಿಗೂ ವಿಮಾನ ಸಂಪರ್ಕದ ಅಗತ್ಯವಿದೆ ಎಂದು ಭರತ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆ ಅವ್ಯವಸ್ಥಿತವಾಗಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದರು. 10-15 ಜೀನ್ಸ್ ಘಟಕಗಳು ಅಹಮದಾಬಾದ್‌ಗೆ ಮತ್ತು 4-5 ಬೆಂಗಳೂರಿಗೆ ಸ್ಥಳಾಂತರಗೊಂಡಿವೆ. ಅಲ್ಲದೆ, 10-15 ಮಂದಿ ಅಂಗಡಿಗಳನ್ನು ಮುಚ್ಚಿದ್ದಾರೆ. ಗಂಭೀರ ಸಮಸ್ಯೆಗಳಿದ್ದರೆ ಯಾರಾದರೂ ಬಳ್ಳಾರಿಯಿಂದ ಏಕೆ ಹೋಗುತ್ತಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

ಸಚಿವರು ಹೇಳಿದ್ದೇನು?

ಈ ಹಿಂದೆ ಕೈಗಾರಿಕಾ ಸಚಿವರಾಗಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿ, ಜೀನ್ಸ್ ತಯಾರಕರಿಗೆ ಉತ್ತಮ ಸೌಲಭ್ಯ ಮತ್ತು ರಿಯಾಯಿತಿ ನೀಡಿದರೆ ಅವರಿಗೆ ಉತ್ತೇಜನ ನೀಡಿದಂತಾಗುತ್ತದೆ ಮತ್ತು ಜಿಲ್ಲೆಯಲ್ಲಿ ಹೂಡಿಕೆ ಮಾಡಲು ನಾವು ಕೆಲವು ಅಂತರರಾಷ್ಟ್ರೀಯ ಬ್ರಾಂಡ್‌ಗಳನ್ನು ಆಕರ್ಷಿಸಬಹುದು. ಇದು ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ' ಎಂದರು.

ಸಚಿವ ಎಂ.ಬಿ ಪಾಟೀಲ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿ, "ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು ಮತ್ತು ಅವರ ಕುಂದುಕೊರತೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ನಾವು ಬಳ್ಳಾರಿಯಲ್ಲಿ ಜವಳಿ ಕ್ಲಸ್ಟರ್ ಸ್ಥಾಪಿಸುವ ಪ್ರಯತ್ನ ವಿಫಲವಾಗಿದೆ. ವಾಸ್ತವವಾಗಿ ಜಿಲ್ಲೆಯು ಜವಳಿ ಕೇಂದ್ರವಾಗುವುದಕ್ಕಿಂತ ಉಕ್ಕಿನ ಹಬ್ ಆಗುತ್ತಿದೆ" ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+