Viral Video: ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಬೈಕ್ ಸವಾರಿ
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ಸುದ್ದಿ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಕೋಲ್ಕತ್ತಾಗೆ ಹೋಗುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್ ಬಂಗಾಳದ ಸಿಲಿಗುರಿಯಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಇಲ್ಲಿಯವರೆಗೆ 9 ಮಂದಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಅಪಘಾತದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. 'ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ನಾನು ಆಘಾತಕ್ಕೊಳಗಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರೈಲ್ವೆ ಸಚಿವರು ಮತ್ತು ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಬೈಕ್‌ನಲ್ಲಿ ಹೋದ ಸಚಿವರು
ಇಲ್ಲಿಯವರೆಗೆ, ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ ಸುದ್ದಿ ಬೆಳಕಿಗೆ ಬಂದಿದ್ದು, ಹೆಚ್ಚಿನ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ. ಇದೀಗ ಈ ಅಪಘಾತದ ಬಗ್ಗೆ ಮಾಹಿತಿ ಪಡೆಯಲು ಮತ್ತು ಇತ್ತೀಚಿನ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಸ್ವತಃ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತ ಸ್ಥಳಕ್ಕೆ ಬೈಕ್ ಮೂಲಕ ತಲುಪಿದ್ದಾರೆ.
ವೈರಲ್ ಆಗುತ್ತಿದೆ ವಿಡಿಯೋ
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಸೋಮವಾರ ಸಂಜೆ ಅಶ್ವಿನಿ ವೈಷ್ಣವ್ ಬಾಗ್ಡೋಗ್ರಾ ವಿಮಾನ ನಿಲ್ದಾಣ ಬಂದು, ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿನ ಅಪಘಾತ ನಡೆದ ಸ್ಥಳಕ್ಕೆ ಬೈಕ್‌ನಲ್ಲಿ ತೆರಳಿದ್ದಾರೆ. ಅಶ್ವಿನಿ ವೈಷ್ಣವ್ ಬೈಕ್ ನಲ್ಲಿ ಹೋಗುತ್ತಿರುವ ವಿಡಿಯೋ ಕೂಡ ಹೊರಬಿದ್ದಿದೆ. ಈ ವಿಡಿಯೋ ಈಗ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಅಶ್ವಿನಿ ವೈಷ್ಣವ್ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಗಾಯಾಳುಗಳನ್ನು ಭೇಟಿಮಾಡಿ ಸಾಂತ್ವಾನ ಹೇಳಿದ್ದಾರೆ. ವೈದ್ಯರು, ರೈಲ್ವೆ ಸಿಬ್ಬಂದಿ, ಎನ್‌ಡಿಆರ್‌ಎಫ್ ಮತ್ತು ಗ್ರಾಮದ ಜನರು ಸಹ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದರ ಬಗ್ಗೆ ಸಚಿವರು ಶ್ಲಾಘಿಸಿದ್ದಾರೆ. ಈ ಕುರಿತು ತನಿಖೆ ಆರಂಭವಾಗಿದೆ. ಎಲ್ಲವನ್ನೂ ತನಿಖೆ ನಡೆಸಲಾಗುತ್ತಿದೆ. ಗಾಯಾಳುಗಳ ಚೇತರಿಕೆ ಮತ್ತು ಪರಿಹಾರದ ಮೇಲೆ ಸಂಪೂರ್ಣ ಗಮನ ಹರಿಸಲಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ.












Click it and Unblock the Notifications