ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡದಲ್ಲಿ ಭಾರಿ ಮಳೆ, ಹಲವೆಡೆ ಭೂಕುಸಿತ, ಜನಜೀವನ ಅಸ್ತವ್ಯಸ್ಥ

|
Google Oneindia Kannada News

ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ಸೇರುವೆಗಳು ಮುರಿದು ಬಿದ್ದಿವೆ, ರಸ್ತೆಗಳು ಕೊಚ್ಚಿ ಹೋಗಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಭಾರೀ ಮಳೆಯಿಂದಾಗಿ ರಸ್ತೆಯ ಮೇಲೆಲ್ಲಾ ಭಾರೀ ನೀರು ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಭಾರೀ ಪ್ರವಾಹದ ನೀರಿನಿಂದಾಗಿ ರಸ್ತೆಯ ಮೇಲೆ ಹಲವು ವಾಹನಗಳು ತೇಲಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಡೆಹ್ರಾಡೂನ್​ನಲ್ಲಿ ಸೋಮವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರಾಖಂಡ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದೆ. ಇದು ಈ ಪ್ರದೇಶದಲ್ಲಿ ವ್ಯಾಪಕ ಸಮಸ್ಯೆ ಉಂಟು ಮಾಡಿದೆ.

ರಾಜ್ಯದಲ್ಲಿ ಆಗಸ್ಟ್ 29, 30ರಂದು ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ರಾಜ್ಯದಲ್ಲಿ ಆಗಸ್ಟ್ 29, 30ರಂದು ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ತರವಾಗಿ ಸುರಿಯುತ್ತಿರುವ ಮಳೆಯು ಭಾರೀ ಅನಾಹುತ ಉಂಟು ಮಾಡಿದೆ. ಇದರಿಂದಾಗಿ ಮಾಲ್ದೇವತಾ-ಸಹಸ್ರಧಾರ ಸಂಪರ್ಕ ರಸ್ತೆ ನದಿಯಲ್ಲಿ ಹಲವು ಮೀಟರ್​ಗಳಷ್ಟು ಮುಳುಗಿದೆ.

Rain Blocks Highways, Ruins Roads In Uttarakhand

ರಿಷಿಕೇಶ-ಗಂಗೋತ್ರಿ ಹಾಗೂ ರಿಷಿಕೇಷ-ಬದ್ರಿನಾಥ ರಾಷ್ಟ್ರೀಯ ಹೆದ್ದಾರಿ ಬಹುತೇಕ ಹಾನಿಗೀಡಾಗಿದೆ. ಈ ಹೆದ್ದಾರಿಗಳು ಸಂಪೂರ್ಣ ದುರಸ್ತಿಗೊಳ್ಳುವವರೆಗೆ, ಪ್ರಯಾಣಿಕ ಸುರಕ್ಷತೆ ದೃಷ್ಟಿಯಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಫಾಕೋಟ್ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 94ರ ಬಹುಭಾಗವು ಕುಸಿದುಬಿದ್ದಿದ್ದು, ಹಲವಾರು ಕಡೆ ಭೂಕುಸಿತದ ಅವಶೇಷಗಳು, ದೊಡ್ಡ ಬಂಡೆಗಳು ರಸ್ತೆ ಮೇಲೆ ಉರುಳಿ ಬಿದ್ದು ತೊಂದರೆಯಾಗಿದೆ.

ಡೆಹ್ರಾಡೂನ್‌ನ ಸಹಸ್ರಧಾರಾ-ಮಾಲ್‌ದೇವತಾ ರಸ್ತೆಯೂ ಬಹುತೇಕ ಹಾಳಾಗಿದೆ. ಬೀಮುಂಡಾ ಮತ್ತು ಸೋನಿ ಗ್ರಾಮಗಳ ಬಳಿ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿವೆ.
ಇನ್ನು ಅರುಣುಚಾಲ ಪ್ರದೇಶದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿನಿ ನಿರ್ಮಾಣವಾಗಿದೆ.

ಸಿಯಾಂಗ್ ಜಿಲ್ಲೆಯಲ್ಲಿನ ಹಲವು ನದಿಗಳು ಈಗಾಗಲೇ ತುಂಬಿ ಹರಿಯುತ್ತಿವೆ, ರಸ್ತೆ, ಸೇತುವೆಗಳು ಹಾನಿಗೀಡಾಗಿವೆ. ಕೃಷಿ, ತೋಟಗಾರಿಕೆ ಬೆಳೆ ಹಾಗೂ ಬಿದಿರಿನ ತೋಪುಗಳಲ್ಲಿ ನೀರು ನಿಂತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ. ಆ. 28ರಿಂದ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.

ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ.

ಭಾರತೀಯ ಹವಾಮಾನ ಇಲಾಖೆಯಮಾಹಿತಿ ಪ್ರಕಾರ, ರಾಜ್ಯದ ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲೂ ಇಂದು ಮಳೆ ಮುಂದುವರೆಯಲಿದೆ.

English summary
After Heavy Rainfall Lashed Uttarakhand On Friday. recurring landslide blocked several highways and rivers rose dangerously close to warning levels.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X