ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ 21 ರಾಜ್ಯಗಳಲ್ಲಿ ಮುಂದಿನ 5 ದಿನ ಮಳೆಯೋ ಮಳೆ!

|
Google Oneindia Kannada News

ನವದೆಹಲಿ, ಮೇ 17: ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇದರ ಮಧ್ಯೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂದಿನ 5 ದಿನಗಳವರೆಗೂ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕೇರಳದ ದಕ್ಷಿಣ, ಮೇಘಾಲಯದ ಈಶಾನ್ಯ ಮತ್ತು ಪ್ರವಾಹ ಪೀಡಿತ ಮೇಘಾಲಯ ಹಾಗೂ ಅರುಣಾಚಲ ಪ್ರದೇಶದಲ್ಲಿ ಧಾರಾಕಾರ ಮಳೆ ಆಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಉಪ-ಹಿಮಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿಯೂ ತೀವ್ರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರದ ರಾಜ್ಯಗಳಲ್ಲೂ ಈ ವಾರದ ಕೊನೆಯಲ್ಲಿ ಮಳೆ ಬೀಳಲಿದೆ.

Breaking: ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ, ವಾಹನ ಸವಾರರು ಹೈರಾಣ Breaking: ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ, ವಾಹನ ಸವಾರರು ಹೈರಾಣ

ನೈಋತ್ಯ ಮಾನ್ಸೂನ್‌ನ ಪ್ರಗತಿಯಿಂದಾಗಿ ಕೇರಳ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ 3 ದಿನಗಳ ಕಾಲ ಇದೇ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆ ಆಗಲಿದೆ. ಇದು ಮುಂದಿನ 3 ದಿನಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ.

Rain fall in Next 5 Days: Indian Meteorological Department alert for 21 states and UT

ಮೂರು ದಿನ ಭಾರೀ ಮಳೆ: ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳಭಾಗಗಳಲ್ಲಿ ಮುಂದಿನ 3 ದಿನಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ನಂತರ ಎರಡು ದಿನವೂ ಮಳೆಯಾಗಲಿದೆ. ಲಕ್ಷದ್ವೀಪದಲ್ಲಿ ಬುಧವಾರ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ ಬೀಳಲಿದೆ. ಮೇಘಾಲಯದಲ್ಲಿ ಭಾರೀ ಮಳೆಯು ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಿಜೋರಾಂ ಮತ್ತು ತ್ರಿಪುರಾದಲ್ಲಿ ಲಘು ಮತ್ತು ಮಧ್ಯಮ ಪ್ರಮಾಣದ ಮಳೆಯು ಮುಂದುವರಿಯುವ ಸಾಧ್ಯತೆಯಿದೆ.

ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳದ ಗಂಗಾನದಿ ಭಾಗ ಮತ್ತು ಒಡಿಶಾ ರಾಜ್ಯಗಳಲ್ಲಿ ಮುಂದಿನ 4 ದಿನಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಆಗಲಿದೆ. ಅದೇ ರೀತಿ ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಬಹುದು.

Rain fall in Next 5 Days: Indian Meteorological Department alert for 21 states and UT

ಜಮ್ಮು ಕಾಶ್ಮೀರದಲ್ಲಿ ಅಲಿಕಲ್ಲು ಮಳೆ: ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ತಾಜಾ ಪಾಶ್ಚಾತ್ಯ ವಾತಾವರಣವು ಪರಿಣಾಮ ಬೀರಲಿದೆ. ಮೇ 19 ರಿಂದ 21ರವರೆಗೆ ಜಮ್ಮು-ಕಾಶ್ಮೀರದಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಆಗಲಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಮೇ 20 ಮತ್ತು 21ರಂದು ಇದೇ ರೀತಿಯ ಹವಾಮಾನಕ್ಕೆ ಸಾಕ್ಷಿಯಾಗಲಿದೆ.

ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳು ಮೇ 20 ಮತ್ತು 21ರಂದು ಗುಡುಗು, ಮಿಂಚು, ಬಿರುಗಾಳಿ ಸಹಿತ ಪ್ರತ್ಯೇಕವಾದ ಲಘು ಮಳೆಗೆ ಸಾಕ್ಷಿಯಾಗಲಿವೆ. ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ರಾಜಸ್ಥಾನದ ಪ್ರತ್ಯೇಕ ಭಾಗಗಳು ಅದೇ ದಿನಾಂಕಗಳಲ್ಲಿ ಧೂಳಿನ ಚಂಡಮಾರುತದ ಜೊತೆ ಗುಡುಗು ಸಹಿತ ಮಳೆ ಆಗುತ್ತದೆ.

Recommended Video

ಬೆಂಗಳೂರಲ್ಲಿ‌ ಮಹಾಮಳೆ:ಮನೆಗಳಿಗೆ ನುಗ್ಗಿದ‌ ನೀರು,ಜನಜೀವನ ಅಸ್ತವ್ಯಸ್ತ | Oneindia Kannada

English summary
Rain fall in Next 5 Days: Indian Meteorological Department rain alert for 21 states and Union Territory.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X