Rain Forecast: ಈ ರಾಜ್ಯದ ಹಲವು ಜಿಲ್ಲೆಗಳಿಗೆ ತಣ್ಣನೆಯ ಸೂಚನೆ ನೀಡಿದ IMD..

ದೇಶದಾದ್ಯಂಂತ ಬಿಸಿಲ ಬಿಸಿ ಹೆಚ್ಚಾಗುತ್ತಿರುವ ನಡುವೆ ಕೆಲ ರಾಜ್ಯಗಳ ಜನರಿಗೆ ಐಎಂಡಿ ತಣ್ಣನೆಯ ಸೂಚನೆ ನೀಡಿದೆ. ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ ಆರಂಭದಿಂದಲೇ ಎರಡು ತೆಲುಗು ರಾಜ್ಯಗಳಲ್ಲಿ ಬಿಸಿಲು ಸುಡುತ್ತಿದೆ. ಇಂತಹ ಸಂದರ್ಭದಲ್ಲಿ ಹವಾಮಾನ ಇಲಾಖೆ ಮಳೆ ಮಾತನಾಡಿದೆ.

ಇಂದು ಆಂಧ್ರಪ್ರದೇಶದ ಉತ್ತರ ಕರಾವಳಿಯಲ್ಲಿ ಎರಡು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಲಘು ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇದರಿಂದ ಆಂದ್ರಪ್ರದೇಶದಲ್ಲಿ ಬಿಸಿಲ ಬೇಗೆಯೀಮದ ಬಸವಳಿದ ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

Rain forecast for many districts of this state IMD warning

ಇಂದು ಮರಾಠವಾಡದಿಂದ ಉತ್ತರ ಕೇರಳದವರೆಗೂ ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಳೆ ಮೋಡಗಳು ಕರ್ನಾಟಕದಾದ್ಯಂತ ಮತ್ತು ಉತ್ತರ ಕೇರಳದವರೆಗೆ ವ್ಯಾಪಿಸಿವೆ ಎಂದು ಐಎಂಡಿ ಹೇಳುತ್ತದೆ.

ಉತ್ತರ ಕರಾವಳಿಯಲ್ಲಿ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭಾಗದಲ್ಲಿ ಇಂದು ಮತ್ತು ನಾಳೆಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆ ಆಂಧ್ರಪ್ರದೇಶ ರಾಯಲಸೀಮಾದಲ್ಲಿ ಶುಷ್ಕ ಹವಾಮಾನವನ್ನು ಅಧಿಕಾರಿಗಳು ನಿರೀಕ್ಷಿಸಿದ್ದಾರೆ.

Rain forecast for many districts of this state IMD warning

ಉತ್ತರ ಕರಾವಳಿಯ ಅಲ್ಲೂರಿ ಸೀತಾಮರಾಜು, ಪಾರ್ವತಿಪುರಂ ಮಾನ್ಯಂ, ಶ್ರೀಕಾಕುಳಂ, ವಿಜಯನಗರಂ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು ದಕ್ಷಿಣ ಕರಾವಳಿಯ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮಳೆ:

ಬಿಸಿಲಿನಿಂದ ಬೇಸತ್ತ ಸಿಲಿಕಾನ್ ಸಿಟಿ ಮಂದಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಬರುವ ಶುಕ್ರವಾರ ಅಂದ್ರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಲುಬುರಗಿ ಸೇರಿ ಕೆಲವೆಡೆ ಹೆಚ್ಚಿನ ತಾಪಮಾನ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮಾರ್ಚ್ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಟಿವಿ9 ಕನ್ನಡ ವೆಬ್ ಸೈಟ್ ವರದಿ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ತುಮಕೂರಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.

ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಇನ್ನು ಕೆಲವೆಡೆ ವರುಣ ತಂಪೆರೆಯಲಿದ್ದಾನೆ ಎಂದು ಸೂಚನೆ ಸಿಕ್ಕಿದೆ.ಇನ್ನು ರಾಜ್ಯದ ಅರಣ್ಯ ಪ್ರದೇಶ ಹೊಂದಿರುವ ಕೆಲವು ಕಡೆ ಮಳೆ ನಿರೀಕ್ಷಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+