ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.20 ರವರೆಗೆ ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ

|
Google Oneindia Kannada News

ನವದೆಹಲಿ ಫೆಬ್ರವರಿ 15: ಮುಂದಿನ 5 ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಸಿಡಿಲು ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಐಎಂಡಿ ಪ್ರಕಾರ, ಮುಂದಿನ ಐದು ದಿನಗಳಲ್ಲಿ ಅಂಡಮಾನ್-ನಿಕೋಬಾರ್ ದ್ವೀಪಗಳು, ತಮಿಳುನಾಡು, ಕೇರಳದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಮತ್ತು ಈ ಕಾರಣದಿಂದಾಗಿ ಇಲ್ಲಿ ಎಚ್ಚರಿಕೆ ನೀಡಲಾಗಿದೆ.

ಪ್ರಸ್ತುತ ಹಿಮಾಲಯ ಪ್ರದೇಶದಲ್ಲಿ ಮೋಡಗಳು ದಟ್ಟಣೆಯು ಸಕ್ರಿಯವಾಗಿದೆ. ಇದರಿಂದಾಗಿ ಮುಂದಿನ 5 ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ಜೊತೆಗೆ ಗುಡ್ಡಗಾಡು ಪ್ರದೇಶಗಳಲ್ಲಿ ಲಘು ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಹಾಗಾಗಿ ಗುಡ್ಡಗಾಡು ಪ್ರದೇಶಗಳಲ್ಲೂ ಲಘು ಮಳೆ ಹಾಗೂ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹಿಮಾಚಲ ಮತ್ತು ಕಾಶ್ಮೀರದ ಕೆಲ ಪ್ರದೇಶಗಳಲ್ಲಿ ಲಘು ಮಳೆಯೊಂದಿಗೆ ಹಿಮವೂ ಬೀಳಬಹುದು. ಜಮ್ಮುವಿನ ಕನಿಷ್ಠ ತಾಪಮಾನ 8 ಡಿಗ್ರಿ ಮತ್ತು ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಲೇಹ್-ಲಡಾಖ್‌ನಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ.

ಗೋಚರತೆಗೆ ತೊಂದರೆ

ಗೋಚರತೆಗೆ ತೊಂದರೆ

ಆದ್ದರಿಂದ ಉತ್ತರ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಹೆಚ್ಚಳ ಕಂಡುಬರುತ್ತದೆ. ಆದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಉತ್ತರ ಭಾಗಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಮಂಜು ಕವಿದ ವಾತಾವರಣ ಉಂಟಾಗಲಿದೆ. ಇದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಮನ್ಸೂಚನೆ ನೀಡಲಾಗಿದೆ.

ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆ

ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆ

ಖಾಸಗಿ ಹವಾಮಾನ ಮಾಹಿತಿ ಸಂಸ್ಥೆ ಸ್ಕೈಮೆಟ್ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಬಿಹಾರ, ಜಾರ್ಖಂಡ್, ಯುಪಿ, ಎಂಪಿ, ಛತ್ತೀಸ್‌ಗಢ, ಬಿಹಾರ, ಪಶ್ಚಿಮ ಬಂಗಾಳದಲ್ಲಿ ದಟ್ಟವಾದ ಮಂಜು ಇರುತ್ತದೆ. ಅಸ್ಸಾಂ, ಮೇಘಾಲಯ ಮತ್ತು ತ್ರಿಪುರದಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆ ಬೀಳಲಿದೆ.
ಇಂದು ಬೆಳಗ್ಗೆ ದೆಹಲಿಯಲ್ಲಿ ಗಾಳಿಯ ಗುಣಮಟ್ಟ

ಪುಸಾ, ದೆಹಲಿ - 212 AQI ತುಂಬಾ ಕೆಟ್ಟದಾಗಿದೆ

ಪಂಜಾಬಿ ಬಾಗ್ - 243 AQI ತುಂಬಾ ಕೆಟ್ಟದಾಗಿದೆ

ಶಾದಿಪುರ್, ದೆಹಲಿ-245 AQI ತುಂಬಾ ಕೆಟ್ಟದು

ದೆಹಲಿ ಹಾಲು ಯೋಜನೆ ಕಾಲೋನಿ-251 AQI ತುಂಬಾ ಕೆಟ್ಟದು

ಅಶೋಕ್ ವಿಹಾರ್ ದೆಹಲಿ 238 AQI ತುಂಬಾ ಕೆಟ್ಟದು

NSIT ದ್ವಾರಕಾ, 241 QI ತುಂಬಾ ಕೆಟ್ಟದು

ಲೋಧಿ ರಸ್ತೆ, 245 AQI ತುಂಬಾ ಕೆಟ್ಟದು

ಕಳಪೆ ಗಾಳಿಯನ್ನು ಗುರುತಿಸುವುದೇ ಹೇಗೆ?

ಕಳಪೆ ಗಾಳಿಯನ್ನು ಗುರುತಿಸುವುದೇ ಹೇಗೆ?

ಗಾಳಿಯ ಗುಣಮಟ್ಟವನ್ನು ಈ ರೀತಿ ಪರಿಗಣಿಸಲಾಗುತ್ತದೆ. ಸೊನ್ನೆ ಮತ್ತು 50 ರ ನಡುವಿನ (AQI) ಸೂಚ್ಯಂಕವನ್ನು 'ಉತ್ತಮ' ಎಂದು ಪರಿಗಣಿಸಲಾಗುತ್ತದೆ, 51 ಮತ್ತು 100 ನಡುವಿನ (AQI) ಸೂಚ್ಯಂಕವನ್ನು 'ತೃಪ್ತಿಕರ' ಎನ್ನಲಾದರೆ, 101 ಮತ್ತು 200 ನಡುವಿನ (AQI) ಸೂಚ್ಯಂಕವನ್ನು 'ಮಧ್ಯಮ' ಎಂದು ಪರಿಗಣಿಸಲಾಗುತ್ತದೆ. ಇನ್ನೂ 201 ಮತ್ತು 300 'ಕಳಪೆ' ಹಾಗೂ 301 ಮತ್ತು 400 ನಡುವಿನ (AQI) ಸೂಚ್ಯಂಕವನ್ನು 'ಅತ್ಯಂತ ಕಳಪೆ' ಮತ್ತು 401- 500 ನಡುವಿನ (AQI) ಸೂಚ್ಯಂಕವನ್ನು 'ತೀವ್ರ' ಎಂದು ಪರಿಗಣಿಸಲಾಗುತ್ತದೆ.

English summary
The Indian Meteorological Department has said in its latest update that at present a Western Disturbance has become active in the Himalayan region, due to which there is a possibility of light to moderate rain and lightning in many states of the country in the next 5 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X