ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.2ರವರೆಗೂ ಕರ್ನಾಟಕದಲ್ಲಿ ಮಳೆ: ಯಾವ ರಾಜ್ಯಗಳಲ್ಲಿ ಮಳೆ ಎಚ್ಚರಿಕೆ ಇದೆ ತಿಳಿಯಿರಿ

|
Google Oneindia Kannada News

ಭಾರತದ ಹಲವೆಡೆ ಕಳೆದ ದಿನ ಮತ್ತೆ ಧಾರಾಕಾರ ಮಳೆಯಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ಅ. 2ರವರೆಗೂ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು ಇಂದು ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆಯಾಗಬಹುದು.

infographics: ಕರ್ನಾಟಕದ ಒಳನಾಡು ಜಿಲ್ಲೆಗಳಿಗೆ 2 ದಿನ ಸಾಧಾರಣ ಮಳೆ ಮುನ್ಸೂಚನೆinfographics: ಕರ್ನಾಟಕದ ಒಳನಾಡು ಜಿಲ್ಲೆಗಳಿಗೆ 2 ದಿನ ಸಾಧಾರಣ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಮಳೆ ಸಾಧ್ಯತೆ

ಕಳೆದ ದಿನಗಳ ಹಿಂದೆ ಸಿಲಿಕಾನ್‌ ಸಿಟಿಯನ್ನು ಹಿಂಡಿ ಹಿಪ್ಪೆಯನ್ನಾಗಿಸಿದ್ದ ಮಳೆರಾಯ ಕೊಂಚ ಬ್ರೇಕ್ ತೆಗೆದುಕೊಂಡಿದ್ದ. ಆದರೆ ಬೆಂಗಳೂರಿನಲ್ಲಿ ಮತ್ತೆ ಮಳೆ ಚಳಿ ವಾತಾವರಣ ಕಂಡುಬಂದಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಭಾಗದಲ್ಲಿ ಸಾಧಾರಣವಾಗಿ ಕೆಲವೊಮ್ಮೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಹ ತುಂತುರು ಮಳೆಯಾಗಬಹುದು. ಬೆಳಗಾವಿ, ಹಾವೇರಿ, ಬಾಗಲಕೋಟೆ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳದಲ್ಲೂ ಮಳೆಯಾಗಲಿದೆ.

Rain in Karnataka till October 2: Know which states gets rain warning

ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕಲಬುರ್ಗಿ, ಬೀದರ್, ರಾಯಚೂರು, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ 28, 2022 ರಂದು ಬಿಡುಗಡೆ ಮಾಡಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ಮೂರು ದಿನಗಳಲ್ಲಿ ನೈಋತ್ಯ ಮಾನ್ಸೂನ್ ವಾಯುವ್ಯ ಭಾರತ ಮತ್ತು ನೆರೆಯ ಮಧ್ಯ ಭಾರತದ ಕೆಲವು ಪ್ರದೇಶಗಳಿಂದ ಹೊರಡುವ ನಿರೀಕ್ಷೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.

ನಾಳೆಯವರೆಗೆ ಕರಾವಳಿ ಆಂಧ್ರಪ್ರದೇಶದಲ್ಲಿ ಮಳೆ

ನಾಳೆಯವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಪ್ರತ್ಯೇಕವಾಗಿ ಧಾರಾಕಾರ ಮಳೆಯಾಗಲಿದೆ. ಗುಡುಗು/ಮಿಂಚು ಸಹಿತ ಸಾಕಷ್ಟು ವ್ಯಾಪಕವಾದ ಲಘು/ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ, ಇಂದು ಮತ್ತು ನಾಳೆ ಉತ್ತರ-ಮಧ್ಯ ಕರ್ನಾಟಕ, ಹಾಗೆಯೇ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮಳೆಯಾಗುವ ಭವಿಷ್ಯವನ್ನು ಹವಾಮಾನ ಇಲಾಖೆ ನುಡಿದಿದೆ.

Rain in Karnataka till October 2: Know which states gets rain warning

ಮುಂದಿನ ಮೂರು ದಿನಗಳವರೆಗೆ ಅಂದರೆ ಅಕ್ಟೋಬರ್ 2, 2022 ರವರೆಗೆ, ಒಡಿಶಾದಾದ್ಯಂತ, ಹಾಗೆಯೇ ಜಾರ್ಖಂಡ್, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಾದ್ಯಂತ ವ್ಯಾಪಕವಾಗಿ ಲಘು/ಮಧ್ಯಮ ಮಳೆಯ ಮುನ್ಸೂಚನೆ ಇದೆ. ಅಕ್ಟೋಬರ್ 2, 2022 ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಸೇರಿದಂತೆ ಹಲವಾರು ಈಶಾನ್ಯ ರಾಜ್ಯಗಳಲ್ಲಿ, ಪ್ರತ್ಯೇಕವಾದ ಭಾರೀ ಮಳೆ ಮತ್ತು ಗುಡುಗು/ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಲಿದೆ.

English summary
Heavy rains again last day in many parts of India. The India Meteorological Department (IMD) has issued a warning of heavy rainfall in several states and Union Territories over the next two to three days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X