• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: ಎಲ್ಲೆಲ್ಲಿ ಮಳೆ ಸಾಧ್ಯತೆ ತಿಳಿಯಿರಿ

|
Google Oneindia Kannada News

ಬೆಂಗಳೂರು ಸೆಪ್ಟೆಂಬರ್ 26: ಕೆಲ ದಿನಗಳಿಂದ ಬ್ರೇಕ್ ನೀಡಿದ್ದ ಮಳೆರಾಯ ಕರ್ನಾಟಕದಲ್ಲಿ ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ಸಿಲಿಕಾನ್ ಸಿಟಿ ಹಲವು ಭಾಗಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇದೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ಕರ್ನಾಟಕದಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದ ಹಲವು ರಾಜ್ಯಗಳಲ್ಲಿ ಮಳೆ ಅನಾಹುತ ಸೃಷ್ಟಿಸಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ಮಳೆ ಇಂದೂ ಸಹ ದೆಹಲಿಯಲ್ಲಿ ಸುರಿಯಲಿದೆ. ದೆಹಲಿ ಮಾತ್ರವಲ್ಲದೆ ಹತ್ತಿರದ ರಾಜ್ಯಗಳು ಸಹ ಮಳೆಯನ್ನು ಕಾಣಲಿವೆ. ಇಂದು ಈಶಾನ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಅರುಣಾಚಲ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಅಧಿಕ ಮಳೆಯಾಗುವ ಎಚ್ಚರಿಕೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಸ್ಕೈಬಸ್, ಟ್ರಾಲಿ ಬಸ್ ಸೇವೆ ಆರಂಭ: ಗಡ್ಕರಿಸಿಲಿಕಾನ್ ಸಿಟಿಯಲ್ಲಿ ಸ್ಕೈಬಸ್, ಟ್ರಾಲಿ ಬಸ್ ಸೇವೆ ಆರಂಭ: ಗಡ್ಕರಿ

ದೇಶದ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳ ಕಾಲ ಪಶ್ಚಿಮ ಯುಪಿ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಬಹುದು. ಹರಿಯಾಣ, ಚಂಡೀಗಢ, ಗುಜರಾತ್, ಪೂರ್ವ ರಾಜಸ್ಥಾನದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೊಂದೆಡೆ ಕರ್ನಾಟಕ, ತಮಿಳುನಾಡು, ಕೇರಳದಲ್ಲಿಯೂ ಲಘು ಮಳೆಯಾಗಿರುವುದನ್ನು ಕಾಣಬಹುದು.

ಇದಲ್ಲದೇ ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರ, ಉತ್ತರ ಪಂಜಾಬ್, ಈಶಾನ್ಯ ಹರಿಯಾಣದಲ್ಲಿ ಸಾಧಾರಣದಿಂದ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸೋಮವಾರದಿಂದ ಬುಧವಾರದವರೆಗೆ ಮಳೆ ಮುಂದುವರಿಯಬಹುದು, ಒಡಿಶಾದಲ್ಲಿಯೂ ಸಹ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಲ್ಲಿ ಸೆಪ್ಟೆಂಬರ್ 27ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಮತ್ತೊಂದೆಡೆ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಮುಂದಿನ 24 ಗಂಟೆಗಳ ಅವಧಿಯಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢದ ಕೆಲವು ಭಾಗಗಳು, ಉತ್ತರಾಖಂಡ, ಹಿಮಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಲೈಟ್‌ನಿಂದ ಸಾಧಾರಣವಾಗಿ ಪ್ರತ್ಯೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Rain is likely in many parts of the country including Bengaluru and Delhi

ಇಂದು ಹಲವೆಡೆ ಮೋಡ ಕವಿದ ವಾತಾವರಣವಿದೆ. ಪಂಜಾಬ್, ಹರಿಯಾಣ, ದೆಹಲಿ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ, ಮರಾಠವಾಡ, ಉತ್ತರ ಮಧ್ಯ ಮಹಾರಾಷ್ಟ್ರ, ಉತ್ತರ ಕೊಂಕಣ ಮತ್ತು ಗೋವಾ, ಸಿಕ್ಕಿಂ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಲಘು ಮಳೆಯಾಗಲಿದೆ.

English summary
Meteorological Department has issued a warning for rain in many parts of the country today(Sep 26) including Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X