ಉತ್ತರಾಖಂಡದಲ್ಲಿ ಮಳೆ, ಭೂಕುಸಿತ: ಆ.14-15 ರಂದು ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ರದ್ದು!
ಡೆಹ್ರಾಡೂನ್ ಆಗಸ್ಟ್ 14: ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ ಉತ್ತರಖಂಡದ ಚಾರ್ ಧಾಮ್ ಯಾತ್ರೆಯನ್ನು ಆಗಸ್ಟ್ 14 ಮತ್ತು 15 ರಂದು ತಾತ್ಕಾಲಿಕವಾಗಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ನಿರಂತರ ಧಾರಾಕಾರ ಮಳೆಯಿಂದಾಗಿ ಉತ್ತರಾಖಂಡದಲ್ಲಿ ಪ್ರಮುಖ ನದಿಗಳು ಮತ್ತು ಅವುಗಳ ಉಪನದಿಗಳು ಪ್ರವಾಹವನ್ನು ಸೃಷ್ಟಿ ಮಾಡಿವೆ. ಇದರಿಂದಾಗಿ ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಭೂಕುಸಿತ ಉಂಟಾಗಿದೆ. ಹೀಗಾಗಿ ಚಾರ್ ಧಾಮ್ ಯಾತ್ರೆಯನ್ನು ಆಗಸ್ಟ್ 14 ಮತ್ತು 15 ರಂದು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಕಳೆದ 24 ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಉತ್ತರಖಂಡ ನಲುಗಿ ಹೋಗಿದೆ. ಅಪಾಯದ ಮಟ್ಟ ಮೀರಿ ನದಿಗಳು ಉಕ್ಕಿ ಹರಿಯುತ್ತಿದ್ದು ದೇವಸ್ಥಾನ ಹಾಗೂ ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮಾಲ್‌ದೇವ್ತಾದಲ್ಲಿ ರಕ್ಷಣಾ ಕಾಲೇಜು ಕಟ್ಟಡವೊಂದು ಕುಸಿದು ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಪತ್ತು ನಿಯಂತ್ರಣ ಕೊಠಡಿ ಪ್ರಕಾರ, ರುದ್ರಪ್ರಯಾಗ, ಶ್ರೀನಗರ ಮತ್ತು ದೇವಪ್ರಯಾಗದಲ್ಲಿ ಅಲಕನಂದಾ, ಮಂದಾಕಿನಿ ಮತ್ತು ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ವರದಿಗಳ ಪ್ರಕಾರ, ಭೂಕುಸಿತದ ಅವಶೇಷಗಳಿಂದಾಗಿ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯ ಹಲವಾರು ಸ್ಥಳಗಳನ್ನು ನಿರ್ಬಂಧಿಸಲಾಗಿದೆ.
VIDEO | Dehradun Defence College building in Uttarakhand's Maldevta collapses amid incessant rainfall. More details are awaited.
— Press Trust of India (@PTI_News) August 14, 2023
(Source: Third Party) pic.twitter.com/YUZJozBkGz
ಚಮೋಲಿ ಜಿಲ್ಲೆಯ ಅಲಕನಂದಾ ಮತ್ತು ಅದರ ಉಪನದಿಗಳಾದ ಪಿಂಡಾರ್, ನಂದಾಕಿನಿ ಮತ್ತು ಬಿರ್ಹಿ ಸೇರಿದಂತೆ ಹತ್ತಾರು ನದಿಗಳ ದಡದಲ್ಲೂ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ವರದಿಗಳ ಪ್ರಕಾರ, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಪಾಲ್ಕೋಟಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕುಸಿತಗಳು ಹಾನಿಯನ್ನುಂಟುಮಾಡಿವೆ. ರಿಷಿಕೇಶದಲ್ಲಿ ಗಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ ಎಂದು ಕೇಂದ್ರ ಜಲ ಆಯೋಗದ ಜೂನಿಯರ್ ಎಂಜಿನಿಯರ್ ಸನ್ನಿ ವಿಷ್ಣೋಯ್ ಮಾಹಿತಿ ನೀಡಿದ್ದಾರೆ. ಭಾನುವಾರ ರಾತ್ರಿ ಋಷಿಕೇಶದಲ್ಲಿ 35 ಮಿ.ಮೀ ಮಳೆ ದಾಖಲಾಗಿದೆ. ಹೀಗಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಭಾರೀ ಮಳೆಯಿಂದಾಗಿ ಚಂದ್ರೇಶ್ವರ ನಗರ ಮತ್ತು ಶೀಶಮ್ ಜಾರಿ ಸೇರಿದಂತೆ ಋಷಿಕೇಶದ ವಿವಿಧ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದರೊಂದಿಗೆ ರಿಷಿಕೇಶ ಸಮೀಪದ ಗ್ರಾಮೀಣ ಪ್ರದೇಶಗಳು ಜಲಾವೃತಗೊಂಡಿವೆ. ಋಷಿಕೇಶ ಗ್ರಾಮಾಂತರ ಪ್ರದೇಶದಲ್ಲಿ ಬಂಗಾಲಾ ನಾಲಾ, ಸೌಂಗ್ ಮತ್ತು ಸುಸ್ವಾ ನದಿಗಳೂ ಉಕ್ಕಿ ಹರಿಯುತ್ತಿವೆ.
ಡೆಹ್ರಾಡೂನ್ ರೆಡ್ ಅಲರ್ಟ್
ಡೆಹ್ರಾಡೂನ್ ಮತ್ತು ನೈನಿತಾಲ್ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುಡ್ಡಗಾಡು ರಾಜ್ಯ ನಿರಂತರ ಮಾನ್ಸೂನ್ ಮಳೆಯಿಂದ ತತ್ತರಿಸಿ ಹೋಗಿದೆ. ಇದರಿಂದಾಗಿ 60 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಕಾಣೆಯಾಗಿದ್ದಾರೆ ಮತ್ತು ಸಾಮಾನ್ಯ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ.
ತೆಹ್ರಿ, ಡೆಹ್ರಾಡೂನ್, ಪೌರಿ, ಚಂಪಾವತ್, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಹರಿದ್ವಾರ ಜಿಲ್ಲೆಯಲ್ಲೂ ಎಚ್ಚರಿಕೆ ನೀಡಲಾಗಿದೆ.
ಯಾವುದೇ ತುರ್ತು ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು ಜಾಗರೂಕರಾಗಿರಲು ಸರ್ಕಾರವು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಗೆ ನಿರ್ದೇಶನ ನೀಡಿದೆ. ಹೀಗಾಗಿ ಡೆಹ್ರಾಡೂನ್ ಮತ್ತು ಚಂಪಾವತ್‌ನ ಅಧಿಕಾರಿಗಳು ಸೋಮವಾರ ಎರಡು ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications