ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರಗಳ ಹಿಂದಷ್ಟೇ ತಮಿಳುನಾಡಿನ ತಿರುವಲ್ಲೂರ್, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಭಾರಿ ಪ್ರಮಾಣದ ಮಳೆಯಾಗಿತ್ತು. ಕರ್ನಾಟಕದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆ ಬಂದಿತ್ತು.

ಅಫ್ಘಾನಿಸ್ತಾನದ ಕಾಬುಲ್‌ನಲ್ಲಿ ಡಿಸೆಂಬರ್ 21ರಂದು 4.6 ತೀವ್ರತೆಯ ಭೂಕಂಪ ಸಂಭವಿಸಿದೆ. ಮಣಿಪುರದಲ್ಲಿ ಕೂಡ ಡಿಸೆಂಬರ್ 22ರಂದು 3.1 ತೀವ್ರತೆ ಭೂಕಂಪವಾಗಿದೆ.
ಶಂಕರಭರಣಿ ನದಿ ದಡದ ಊರುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಹೀಗಾಗಿ ಕೆಲವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಭಾಗದಲ್ಲಿ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಯೊಳಗಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನುಳಿದಂತೆ ಹಲವೆಡೆ ಒಣಹವೆ ಮುಂದುವರೆಯಲಿದೆ.

ಅತಿ ಕಡಿಮೆ ಉಷ್ಣಾಂಶ ದಾಖಲಾಗಿರುವ ಜಿಲ್ಲೆ

ಅತಿ ಕಡಿಮೆ ಉಷ್ಣಾಂಶ ದಾಖಲಾಗಿರುವ ಜಿಲ್ಲೆ

ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ಅಂದರೆ 14 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉತ್ತರ ಕರ್ನಾಟ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.1 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗುವ ಮುನ್ಸೂಚನೆ ಇದೆ

ಎಲ್ಲೆಲ್ಲಿ ಮಳೆಯಾಗುವ ಮುನ್ಸೂಚನೆ ಇದೆ

ಕೇವಲ ಕರ್ನಾಟಕದ ಕರಾವಳಿ ಭಾಗ ಮಾತ್ರವಲ್ಲದೆ ತಮಿಳುನಾಡಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಒಟ್ಟು ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಸಿಯಸ ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+