ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನಲ್ಲಿ ಪ್ರಬಲ ಹಿಂಗಾರು: ಕರ್ನಾಟಕದ ಮೇಲೂ ಪ್ರಭಾವ

|
Google Oneindia Kannada News

ಚೆನ್ನೈ, ನವೆಂಬರ್ 13: ಚೆನ್ನೈಗೆ ಹಿಂಗಾರು ಪ್ರವೇಶಿಸಿದ್ದು, ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದು ಕರ್ನಾಟಕದ ವಿವಿಧ ಭಾಗಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬುಧವಾರದಿಂದಲೇ ಮಳೆ ಆರಂಭವಾಗಿದ್ದು, ಮುಂದಿನ ಎರಡು ದಿನ ಮಳೆ ಇರಲಿದ್ದು, ದೀಪಾವಳಿ ವೇಳೆಗೆ ಕಡಿಮೆಯಾಗುವ ನಿರೀಕ್ಷೆ ಇದೆ.

ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಶುಕ್ರವಾರದ ವೇಳೆಗೆ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ವಿವಿಧೆಡೆ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಇಲಾಖೆ ಹೇಳಿದೆ.

Rain To Continue In Chennai Till November 16

ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳಲ್ಲಿ ಚೆನ್ನೈ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.

ನವೆಂಬರ್ 13 ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ತಿರುವಲ್ಲೂರು, ಕಾಂಚೀಪುರಂ ಹಾಗೂ ಚೆಂಗಲ್‌ಪೇಟ್‌ನಲ್ಲಿ ಮಳೆಯಾಗಲಿದೆ. ಸ್ಕೈಮೆಟ್ ವರದಿ ಪ್ರಕಾರ ನವೆಂಬರ್ 15-16ರಂದು ಭಾರಿ ಮಳೆ ಸುರಿಯಲಿದೆ.

ಕರ್ನಾಟಕದ ಮಲೆನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ನವೆಂಬರ್ 12 ರಿಂದ 14ರವರೆಗೆ ಮೋಡಕವಿದ ವಾತಾವರಣ ಇರಲಿದ್ದು, ಮಳೆ ಸುರಿಯಬಹುದು ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ಕೂಡ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

English summary
The Light morning spells and the occasional heavy showers in many parts of the city and suburbs on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X