ದೆಹಲಿಯಲ್ಲಿ ಎರಡು ಗಂಟೆಗಳಲ್ಲೇ ಭಾರಿ ಮಳೆಯ ಮುನ್ಸೂಚನೆ

ನವದೆಹಲಿ, ಆಗಸ್ಟ್.24: ರಾಷ್ಟ್ರ ರಾಜಧಾನಿಯಲ್ಲಿ ಮಳೆರಾಯ ಈಗಾಗಲೇ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಇದರ ನಡುವೆ ಮುಂದಿನ ಎರಡು ಗಂಟೆಗಳಲ್ಲಿ ದಕ್ಷಿಣ ದೆಹಲಿ, ದಾದ್ರಿ ಮತ್ತು ಕೊಸಾಲಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದರ ಜೊತೆಗೆ ಪಲ್ವಾಲಾ, ಬಲ್ಲಭ್ ಘರ್, ಫಾರೂಕ್ ನಗರ್ ಸೇರಿದಂತೆ ನವದೆಹಲಿ ಬಹುತೇಕ ಪ್ರದೇಶಗಳಲ್ಲಿ ಅಲ್ಪ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ನವದೆಹಲಿಯ ಹಲವು ಪ್ರದೇಶಗಳಲ್ಲಿ ಈಗಾಗಲೇ ಸುರಿದಿರುವ ಮಳೆಗೆ ಜನರು ಹೈರಾಣಾಗಿದ್ದಾರೆ. ನಗರದಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತಗೊಂಡಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Rain Update: Rain Continued In Several Parts Of South-Delhi, Dadri And Kosali

ಉತ್ತರ ಭಾರತದಲ್ಲಿ ವರುಣನ ಅಬ್ಬರ:

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ ರಾಜ್ಯಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+