ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ: IMD ಮುನ್ಸೂಚನೆ

ಬೇಸಿಗೆ ಶಾಖಕ್ಕೆ ಹೈರಾಣಾಗಿದ್ದ ಜನರಿಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ಇದರಿಂದ ಬೇಸಿಗೆ ಬಿಸಿ ಶಾಖದಿಂದ ದೇಶದ ಹಲವು ಭಾಗಗಳಲ್ಲಿ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ (IMD)ದೇಶದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆ ಕಡಿಮೆಯಾಗಿದೆ ಎಂದು ತಿಳಿಸಿದೆ. ಜೊತೆಗೆ ಕೆಲವೆಡೆ ಮಳೆಯ ಮುನ್ಸೂಚನೆಯನ್ನು ನೀಡಿದ್ದು ಚಂಡಮಾರುತದ ಎಚ್ಚರಿಕೆಯನ್ನು ನೀಡಿದೆ. ಹವಾಮಾನ ಇಲಾಖೆಯು ನಾಳೆಯಿಂದ ಶುಕ್ರವಾರದವರೆಗೆ ಪೂರ್ವ ಮತ್ತು ದಕ್ಷಿಣ ಪರ್ಯಾಯದ್ವೀಪದ ಮೇಲೆ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಿದೆ.

"ದೆಹಲಿ, ಪಂಜಾಬ್, ಹರಿಯಾಣ ಮತ್ತು ಯುಪಿ ಸೇರಿದಂತೆ ಭಾರತದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಮುಗಿದಿದೆ. ಮುಂದಿನ 6-7 ದಿನಗಳವರೆಗೆ ತಾಪಮಾನ ಹೆಚ್ಚಾಗುವುದಿಲ್ಲ. ಆದರೆ ವಾಯುವ್ಯ ಭಾರತದಲ್ಲಿ ಗುಡುಗು ಸಹಿತ ಮಳೆ ಬೀಳಲಿದ್ದು ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ. ಮೇ 3 ರಂದು ದೆಹಲಿಯಲ್ಲಿ ಮಳೆಯಾಗಲಿದೆ" ಎಂದು IMD ಯ ಹಿರಿಯ ವಿಜ್ಞಾನಿ ಆರ್‌ಕೆ ಜೆನಮಣಿ ಎಎನ್‌ಐಗೆ ತಿಳಿಸಿದ್ದಾರೆ.

ದೇಶದ ಪ್ರಸ್ತುತ ಹವಾಮಾನ ಪರಿಸ್ಥಿತಿಯ ಕುರಿತು ಹವಾಮಾನ ಇಲಾಖೆಯಿಂದ ಐದು ದೊಡ್ಡ ಮುನ್ನೋಟಗಳು ಇಲ್ಲಿವೆ.

Rainfall in Delhi on May 3, says IMD

1. ಮೇ 4 ಮತ್ತು 5 ರಂದು ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಉತ್ತರ ಅಂಡಮಾನ್ ಸಮುದ್ರ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಗಂಟೆಗೆ 40-60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2. ಮೇ 06 ರಂದು ಪೂರ್ವಕೇಂದ್ರ ಮತ್ತು ಆಗ್ನೇಯ ಬಂಗಾಳ ಕೊಲ್ಲಿಗೆ ಹೊಂದಿಕೊಂಡಿರುವ ಅಂಡಮಾನ್ ಸಮುದ್ರದ ಮೇಲೆ 50-60 ಕಿಮೀ ವೇಗದಲ್ಲಿ ಚಂಡಮಾರುತದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಹವಾಮಾನ ಇಲಾಖೆ ಸೂಚಿಸಿದೆ.

3. ಮುಂದಿನ 5 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಮತ್ತು ರಭಸದ ಗಾಳಿ (40-50 kmph ತಲುಪುವ ವೇಗ) ಜೊತೆಗೆ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

Rainfall in Delhi on May 3, says IMD

4. ಸೋಮವಾರದಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಉಪ-ಹಿಮಾಲಯನ್ ಪ್ರದೇಶಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಸೋಮವಾರ ಮತ್ತು ಮಂಗಳವಾರ ಅರುಣಾಚಲ ಪ್ರದೇಶದಲ್ಲಿ ಮಳೆಯಾಗಲಿದೆ.

5. ಸೋಮವಾರ ಮತ್ತು ಬುಧವಾರದ ನಡುವೆ ಅಸ್ಸಾಂ-ಮೇಘಾಲಯ ಮತ್ತು ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಿದೆ. ಮಂಗಳವಾರ ಅಸ್ಸಾಂ-ಮೇಘಾಲಯ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಭವಿಷ್ಯ ನುಡಿದಿದೆ.

ಕಳೆದ ಕೆಲವು ವಾರಗಳಿಂದ, ಕೆಲವು ನಗರಗಳಲ್ಲಿ ಗರಿಷ್ಠ ತಾಪಮಾನ 50 ಡಿಗ್ರಿ ಸೆಲ್ಸಿಯಸ್‌ಗೆ ಸಮೀಪಿಸುವುದರೊಂದಿಗೆ ಹಲವಾರು ರಾಜ್ಯಗಳು ತೀವ್ರವಾದ ಶಾಖದ ಅಲೆಯನ್ನು ಅನುಭವಿಸುತ್ತಿವೆ. ಬಿಸಿಲಿನ ತಾಪವು ದೇಶದಲ್ಲಿ ವಿದ್ಯುತ್ ಬೇಡಿಕೆಯನ್ನು ಹೆಚ್ಚಿಸಿದ್ದು ಈ ನಡುವೆ ಹಲವಾರು ರಾಜ್ಯಗಳಿಂದ ವಿದ್ಯುತ್ ಕಡಿತ ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+