ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ

|
Google Oneindia Kannada News

Recommended Video

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ | Oneindia Kannada

ಲಕ್ನೋ, ಮಾರ್ಚ್ 21: ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇತ್ತೀಚೆಗೆ ಉತ್ತರ ಪ್ರದೇಶದ ಗೋರಖ್ ಪುರ ಮತ್ತು ಫಲ್ಪುರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೀಡಿದ ಕಳಪೆ ಪ್ರದರ್ಶನದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಯುಪಿಯಲ್ಲಿ 'ಠೇವಣಿ' ಕಳೆದುಕೊಂಡ ಕಾಂಗ್ರೆಸ್ ಸಂಭ್ರಮಿಸುತ್ತಿರುವುದು ಯಾಕೆ?ಯುಪಿಯಲ್ಲಿ 'ಠೇವಣಿ' ಕಳೆದುಕೊಂಡ ಕಾಂಗ್ರೆಸ್ ಸಂಭ್ರಮಿಸುತ್ತಿರುವುದು ಯಾಕೆ?

ಗೋರಖ್ ಪುರ ಕ್ಷೇತ್ರವನ್ನು ಈ ಮೊದಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುತ್ತಿದ್ದರೆ, ಫಲ್ಪುರ ಕ್ಷೇತ್ರವನ್ನು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿನಿಧಿಸುತ್ತಿದ್ದರು. ಆದ್ದರಿಂದ ಈ ಎರಡೂ ಕ್ಷೇತ್ರಗಳೂ ಅತ್ಯಂತ ಮಹತ್ವದ್ದು ಎನ್ನಿಸಿತ್ತು. ಈ ಎರಡೂ ಕ್ಷೇತ್ರಗಳಲ್ಲಿ ಬಿಎಸ್ಪಿ(ಬಹುಜನ ಸಮಾಜವಾದಿ) ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಎಸ್ಪಿ(ಸಮಾಜವಾದಿ) ಪಕ್ಷದ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಗೆ ಮುಖಭಂಗವುಂಟಾಗುವಂತೆ ಮಾಡಿದ್ದರು.

Raj Babbar resigns as Congress UP president

ಈ ಹಿನ್ನೆಲೆಯಲ್ಲಿ ಅಧ್ಯಕ್ಷಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆ. ಕಳೆದ ಸೋಮವಾರವಷ್ಟೇ ಗೋವಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಾಂತಾರಾಮ್ ನಾಯ್ಕ್ ರಾಜೀನಾಮೆ ನೀದಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Raj Babbar on Wednesday resigned from the post of Uttar Pradesh Congress chief, a party source said.The development comes after the Congress' worst performance in recent Lok Sabha bypolls to Gorakhpur and Phulpur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X