ಅಜ್ಮೇರ್ : ಭೀಕರ ಅಪಘಾತದಲ್ಲಿ 12 ಮಂದಿ ದುರ್ಮರಣ

ಅಜ್ಮೇರ್(ರಾಜಸ್ಥಾನ), ಜುಲೈ 08: ರಾಜಸ್ಥಾನ ಅಜ್ಮೇರ್ ಬಳಿ ಭಾನುವಾರದಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟು, 21 ಮಂದಿ ಗಾಯಗೊಂಡಿದ್ದಾರೆ. ಬಸ್‌ ಮತ್ತು ಟ್ರಕ್‌ ನಡುವೆ ಡಿಕ್ಕಿ ಹೊಡೆದಿದ್ದು, ಎರಡು ವಾಹನಗಳು ನಜ್ಜುಗುಜ್ಜಾಗಿವೆ.

ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಗಾಯಗೊಂಡವರನ್ನು ಜೆಎಲ್ಎನ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.

Rajasthan: 12 killed, 21 injured as bus collides with truck in Ajmer

ಅಜ್ಮೀರ್‌ನ ತಬಿಜಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯಿಂದಾಗಿ ಬಸ್‌ನ ಒಂದು ಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ಅಪಘಾತದ ಬಗ್ಗೆ ತಿಳಿದ ತಕ್ಷಣ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು, ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+