ರಾಜಸ್ಥಾನದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ: 10 ಮಂದಿ ವಿರುದ್ಧ ಪ್ರಕರಣ, ಐವರ ಬಂಧನ
ಜೈಪುರ, ಆಗಸ್ಟ್. 05: ರಾಜಸ್ಥಾನದ ಭಿಲ್ವಾರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಬುಧವಾರ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿಯ ಮೃತದೇಹ ಭಿಲ್ವಾರಾ ಜಿಲ್ಲೆಯಲ್ಲಿ ಸುಟ್ಟು ಕರಕಲಾದ ಸ್ಥತಿಯಲ್ಲಿ ಪತ್ತೆಯಾದ್ದಾರೆ. ಆಕೆಯ ಸುಟ್ಟ ಅವಶೇಷಗಳು ಕಲ್ಲಿದ್ದಲು ಕುಲುಮೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪ್ರದೇಶದ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಅವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಅಪ್ರಾಪ್ತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಏನಿದು ಪ್ರಕರಣ..?
ಭಿಲ್ವಾರಾ ಜಿಲ್ಲೆಯ ಹಳ್ಳಿಯೊಂದರ ಕಲ್ಲಿದ್ದಲು ಕುಲುಮೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ನಂತರ ಸುಟ್ಟು ಹಾಕಲಾಗಿದೆ. ಸ್ಥಳೀಯರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಶೋಧ ಕಾರ್ಯಾಚರಣೆಯ ನಂತರ, ಶುಕ್ರವಾರ ಗ್ರಾಮದ ಕೆರೆಯಿಂದ ಅರ್ಧ ಸುಟ್ಟ ದೇಹದ ಭಾಗಗಳನ್ನು ಹೊರತೆಗೆದಿದ್ದು, ಬಾಲಕಿಯದ್ದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ದನ ಮೇಯಿಸಲು ಹೋಗಿದ್ದ ವೇಳೆ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದೇ ರಾತ್ರಿ ಆಕೆಯ ದೇಹವನ್ನು ಸುಟ್ಟು ಹಾಕಿದ್ದಾರೆ. ಅಪ್ರಾಪ್ತರ ದೇಹದ ಕೆಲವು ಭಾಗಗಳನ್ನು ಕುಲುಮೆಯಲ್ಲಿ ಸುಟ್ಟು ಹಾಕಲಾಗಿದೆ ಮತ್ತು ಇತರ ಭಾಗಗಳನ್ನು ಎಲ್ಲಾ ಸಾಕ್ಷ್ಯಗಳನ್ನು ನಾಶಪಡಿಸಲು ಹತ್ತಿರದ ಕೊಳದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯನ್ನು "ಅಪರೂಪದಲೇ ಅಪರೂಪದ ಪ್ರಕರಣ" ಎಂದು ಕರೆದ ಭಿಲ್ವಾರಾ ಎಸ್ಪಿ ಆದರ್ಶ್ ಸಿಧು, ಆರೋಪಿಗಳಿಗೆ ಮರಣದಂಡನೆ ವಿಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. "ನಾವು ತ್ವರಿತ ನ್ಯಾಯಾಲಯದ ಮೂಲಕ ಎಲ್ಲಾ ಆರೋಪಿಗಳಿಗೆ ಮರಣದಂಡನೆಯನ್ನು ಕೊಡಿಸಲು ಪ್ರಯತ್ನಿಸುತ್ತೇವೆ. ಇದು ಅಪರೂಪದ ಅಪರಾಧಗಳಲ್ಲಿ ಅಪರೂಪವಾಗಿದೆ. ಆರು ಪುರುಷರು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಆರೋಪಿಗಳು ಅಪರಾಧದಲ್ಲಿ ಭಾಗಿಯಾಗಿದ್ದಾರೆ " ಎಂದು ಎಸ್ಪಿ ಹೇಳಿದ್ದಾರೆ.

ಬಂಧಿತ ಆರೋಪಿಗಳನ್ನು ಕಲು ಲಾಲ್ (25) ಮತ್ತು ಕನ್ಹಾ (21), ಸಂಜಯ್ ಕುಮಾರ್ (20), ಮತ್ತು ಪಪ್ಪು (35) ಎಂದು ಗುರುತಿಸಲಾಗಿದೆ. ಬಂಧನದಲ್ಲಿರುವ ಅಪ್ರಾಪ್ತ ವಯಸ್ಕನ ವಯಸ್ಸನ್ನು ಮತ್ತೊಮ್ಮೆ ಕಂಡುಹಿಡಿಯಲಾಗುತ್ತಿದೆ. ಕನ್ಹಾ ಮತ್ತು ಕಾಲು ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಇಬ್ಬರು ಪುರುಷ ಆರೋಪಿಗಳ ಪತ್ನಿಯರು ಸೇರಿದಂತೆ ನಾಲ್ವರು ಮಹಿಳೆಯರೂ ಸಾಕ್ಷಿ ನಾಶದಲ್ಲಿ ಭಾಗಿಯಾಗಿದ್ದಾರೆ. ಇನ್ನು ಇಬ್ಬರು ಆರೋಪಿಗಳು ಆರೋಪಿಯ ತಾಯಿ ಹಾಗೂ ಮತ್ತೋರ್ವ ಆರೋಪಿಯ ಸಹೋದರಿ ಎಂದು ಎಸ್ಪಿ ತಿಳಿಸಿದ್ದಾರೆ. ಕುಲುಮೆಗೆ ಹಾಕಿದಾಗ ಬಾಲಕಿ ಜೀವಂತವಾಗಿದ್ದಳೋ ಅಥವಾ ಪ್ರಜ್ಞಾಹೀನಳಾಗಿದ್ದಳೋ, ದೇಹವನ್ನು ಕತ್ತರಿಸಿದ ನಂತರ ಕೆರೆಯಲ್ಲಿ ಎಸೆಯಲಾಗಿದೆಯೇ ಎಂಬುದನ್ನು ವಿಧಿವಿಜ್ಞಾನ ತಂಡವು ದೃಢಪಡಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಅಮಾನತು
ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಬುಧವಾರ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಗೆ ಆಗಮಿಸಿದಾಗ ತಕ್ಷಣ ಕ್ರಮ ಕೈಗೊಳ್ಳದ ಕಾರಣ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕೊಟ್ರಾ ಪೊಲೀಸ್ ಠಾಣೆಯ ಎಎಸ್‌ಐ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಮಹಿಳೆಯರು ಮತ್ತು ಬಾಲಕಿಯರ ಸುರಕ್ಷತೆಯುಲ್ಲ ಎಂದು ರಾಜಸ್ಥಾನದಲ್ಲಿ ಪ್ರತಿಪಕ್ಷಗಳು ಕಿಡಿಕಾರಿವೆ. ಶುಕ್ರವಾರದಂದು ರಾಜ್ಯಸಭೆಯಲ್ಲಿ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರವನ್ನು ಸಹ ಮುನ್ನಲೆಗೆ ತಂದು ಗದ್ದಲ ಮಾಡಲಾಗಿದೆ. ಭಿಲ್ವಾರಾದಲ್ಲಿ ಬಾಲಕಿಯ ಹತ್ಯೆಯನ್ನು ಬಿಜೆಪಿ ಉಲ್ಲೇಖಿಸಿದ್ದು, ರಾಜಸ್ಥಾನದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಚರ್ಚೆಯನ್ನು ಕೈಗೆತ್ತಿಕೊಳ್ಳುವಂತೆ ಸದನಕ್ಕೆ ಮನವಿ ಮಾಡಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications