Rajasthan Election: ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ಆಘಾತ! ಬಿಜೆಪಿಗೆ ಸರಳ ಬಹುಮತ: ಸಮೀಕ್ಷೆ

ದೇಶದಲ್ಲಿ ಪಂಚರಾಜ್ಯಗಳ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಈ ಐದು ರಾಜ್ಯಗಳ ಚುನಾವಣೆ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎನ್ನಲಾಗಿದ್ದು, ಪಂಚ ರಾಜ್ಯಗಳಲ್ಲಿ ಜಯ ಸಾಧಿಸಲು ವಿವಿಧ ರಾಜಕೀಯ ಪಕ್ಷಗಳು ಹಗಲಿರುಳು ಶ್ರಮಿಸುತ್ತಿವೆ.

ರಾಜಸ್ಥಾನ ಚುನಾವಣಾ ಅಖಾಡ ಕೂಡ ರಂಗೇರಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರಿ ಪೈಪೋಟಿ ಇದೆ. ಸದ್ಯ ಅಧಿಕಾರದಲ್ಲಿರುವ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿದ್ದರೆ, ಬಿಜೆಪಿ ರಾಜಸ್ಥಾನವನ್ನು ಗೆಲ್ಲಲು ರಣತಂತ್ರಗಳನ್ನು ರೂಪಿಸುತ್ತಿದೆ.

 Rajasthan Assembly Election 2023: BJP Will Win 96-108 Seats, Predicts Lok Poll Opinion Poll

ನವೆಂಬರ್ 25ರಂದು ರಾಜಸ್ಥಾನದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. ಇನ್ನು ಚುನಾವಣೆ ಸಂದರ್ಭದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸಹಜವಾಗಿ ನಡೆಯುತ್ತವೆ, ಇವು ರಾಜ್ಯದ ಮತದಾರರ ಒಲವು ಯಾರ ಕಡೆ ಇದೆ ಎನ್ನುವುದನ್ನು ಹೇಳುತ್ತವೆ.

ಕಾಂಗ್ರೆಸ್‌ಗೆ ಆಘಾತ! ಬಿಜೆಪಿಗೆ ಬಹುಮತ

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮೊದಲು ಲೋಕ್‌ ಪೋಲ್ ನಡೆಸಿರುವ ಸಮೀಕ್ಷೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಬಿಜೆಪಿ ಸರಳ ಬಹುಮತ ಪಡೆಯಲಿದೆ ಎಂದು ಹೇಳಿದೆ.

ಲೋಕ್ ಪೋಲ್ ಸಮೀಕ್ಷೆ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿ 96-108 ಸ್ಥಾನದಲ್ಲಿ ಜಯ ಸಾಧಿಸುವ ನಿರೀಕ್ಷೆಯಿದ್ದು, ಕಾಂಗ್ರೆಸ್ 80-92 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ, ಇತರೆ 12 ರಿಂದ 18 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಿದೆ. ಒಟ್ಟು 27,250 ಜನರಿಂದ ಅಭಿಪ್ರಾಯ ಸಂಗ್ರಹಿಸಿರುವುದಾಗಿ ಲೋಕ್‌ ಪೋಲ್ ಹೇಳಿದೆ.

ರಾಜಸ್ಥಾನದಲ್ಲಿ ಒಟ್ಟು 200 ವಿಧಾನಸಭಾ ಸ್ಥಾನಗಳಿದ್ದು, ಸರಳ ಬಹುಮತಕ್ಕೆ 100 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗುತ್ತದೆ. ಎರಡೂ ಪಕ್ಷಗಳ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದ್ದು ಕೊನೆಯ ಕ್ಷಣದಲ್ಲಿ ಯಾವುದೇ ಪಕ್ಷವಾದರೂ ಮೇಲುಗೈ ಸಾಧಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಪಂಚ ಗ್ಯಾರಂಟಿಗಳನ್ನು ನೀಡಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್, ರಾಜಸ್ಥಾನದಲ್ಲಿ ಕೂಡ ಮತದಾರರಿಗೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದೆ, ಅಧಿಕಾರಕ್ಕೆ ಬಂದರೆ 7 ಪ್ರಮುಖ ಕೊಡುಗೆಗಳನ್ನು ನೀಡುವುದಾಗಿ ಕಾಂಗ್ರೆಸ್ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+