Rajasthan Election 2023: ಟೈಮ್ಸ್ ನೌ- ನವಭಾರತ್ ಸಮೀಕ್ಷೆ ಹೇಳುವುದೇನು? ಮಹತ್ವದ ಮಾಹಿತಿ, ಅಂಕಿಅಂಶ
ನವದೆಹಲಿ, ಸೆಪ್ಟೆಂಬರ್ 30: ಇದೇ ವರ್ಷದ ಕೊನೆಯಲ್ಲಿ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ( Rajasthan Assembly Elections 2023 ) ನಡೆಯಲಿದೆ. ಅಧಿಕಾರದ ಗದ್ದುಗೆ ಹಿಡಿಯಲು ಪಕ್ಷಗಳು ಈಗಾಗಲೇ ಸಿದ್ದತೆ ನಡೆಸುತ್ತಿವೆ. ಗೆಲುವು ಸಾಧಿಸಲು ಆಡಳಿತಾರೂಢ ಕಾಂಗ್ರೆಸ್ ( Congress ) ಮತ್ತು ಬಿಜೆಪಿ ( BJP ) ತೀವ್ರ ಪೈಪೋಟಿ ನಡೆಸುತ್ತಿವೆ ಎಂದು ಟೈಮ್ಸ್ ನೌ ನವಭಾರತ್ ಸಮೀಕ್ಷೆ ಹೇಳಿದೆ.
ರಾಜಸ್ಥಾನದ ಜನರು ಕಳೆದ ಮೂವತ್ತು ವರ್ಷಗಳಿಂದ ಆಡಳಿತ ಪಕ್ಷಕ್ಕೆ ಎರಡನೇ ಬಾರೀ ಅವಕಾಶವನ್ನು ನೀಡಿಲ್ಲ. ಆದರೆ ಈ ಬಾರಿ ಕಾಂಗ್ರೆಸ್ ಜಯಗಳಿಸಿದರೆ, ಇದೊಂದು ಐತಿಹಾಸಿಕ ಮೈಲುಗಲ್ಲಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ, ಸಮೀಕ್ಷೆಯ ಫಲಿತಾಂಶಗಳು ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ತೀವ್ರ ಹಣಾಹಣಿ ಇರುವುದನ್ನು ತೋರಿಸಿವೆ.

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಹೊಂದಿವೆ ಎಂದು ಟೈಮ್ಸ್ ನೌ ನವಭಾರತ್ ಸಮೀಕ್ಷೆ ಹೇಳಿದೆ. ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 20 ರ ವರೆಗೆ ಎರಡು ತಿಂಗಳ ಸರ್ವೇಯನ್ನು ಟೈಮ್ಸ್ ನೌ ನವಭಾರತ್ ನಡೆಸಿದೆ. ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 95 ರಿಂದ 105 ಸ್ಥಾನಗಳನ್ನು ಗಳಿಸಬಹುದು ಎಂದು ತಿಳಿದುಬಂದಿದೆ.
ಮತ್ತೊಂದೆಡೆ, ಕಾಂಗ್ರೆಸ್ 91 ರಿಂದ 101 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಇತರೆ ಪಕ್ಷಗಳು 3 ರಿಂದ 6 ಸ್ಥಾನಗಳನ್ನು ಪಡೆದುಕೊಳ್ಳಬಹುದು ಎಂದು ಸಮೀಕ್ಷೆ ಹೇಳಿದೆ.

2018 ರ ಚುನಾವಣೆಯಲ್ಲಿ ಬಿಜೆಪಿ 73 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 100 ಸ್ಥಾನಗಳನ್ನು ಪಡೆದುಕೊಂಡಿತ್ತು.
ಕುತೂಹಲಕಾರಿಯಾಗಿ, 2018ರಲ್ಲಿ ಬಹುಜನ ಸಮಾಜ ಪಕ್ಷ ( ಬಿಎಸ್‌ಪಿ ) ಬಿಜೆಪಿಯನ್ನು ಮೂರು ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ಅನ್ನು ಎರಡು ಸ್ಥಾನಗಳಲ್ಲಿ ಸೋಲಿಸಿತ್ತು. ಒಂದು ಸ್ಥಾನದಲ್ಲಿ ಬಿಎಸ್‌ಪಿ ಮತ್ತು ಎಸ್‌ಪಿ ನಡುವೆ ಪೈಪೋಟಿಯೂ ಏರ್ಪಟ್ಟಿತ್ತು.
ಈ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನ ಗಳಿಸಿದರೆ, ಕಾಂಗ್ರೆಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು. ಉದಯಪುರವತಿ, ಕಿಶನ್‌ಗಢ್ ಬಾಸ್, ನಾದ್‌ಬಾಯಿ, ಕರೌಲಿ ಮತ್ತು ತಿಜಾರಾದಲ್ಲಿ ಬಿಎಸ್‌ಪಿ ಜಯಭೇರಿ ಬಾರಿಸಿದೆ. ಭರತ್‌ಪುರ ಜಿಲ್ಲೆ ನಗರ ವಿಧಾನಸಭಾ ಕ್ಷೇತ್ರವು ಬಿಎಸ್‌ಪಿ ಮತ್ತು ಎಸ್‌ಪಿ ನಡುವಿನ ಸ್ಪರ್ಧೆಗೆ ಸಾಕ್ಷಿಯಾಗಿತ್ತು.
ಗ್ಯಾರಂಟಿಗಳಿಗೆ ಕಾಂಗ್ರೆಸ್ ಮಣೆ
ಕರ್ನಾಟಕದಂತೆಯೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳಿಗೆ ಮೊರೆ ಹೋಗಿದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆ ಸೇವೆ, ಉಚಿತ ಪಡಿತರ, ರೈತರಿಗೆ ಬಡ್ಡಿ ರಹಿತ ಸಾಲ ಸೇರಿದಂತೆ ಹಲವಾರು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಇದು ಕಾಂಗ್ರೆಸ್‌ಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ಬಿಜೆಪಿಯಲ್ಲಿ ಬಣ ಜಗಳ
ಬಿಜೆಪಿಯಲ್ಲಿ ಮುಖ್ಯಮಂತ್ರಿ ಗದ್ದುಗೆಗಾಗಿ ಬಣ ಜಗಳ ಆರಂಭವಾಗಿದೆ. ಮಾಜಿ ಸಿಎಂ ವಸುಂದರಾ ರಾಜೇ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಸಾಮಾಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸಬೇಕೆಂಬುದು ಬಿಜೆಪಿ ಹೈಕಮಾಂಡ್ ಸೂಚನೆಯಾಗಿದೆ.
ಸಂಸದರಾದ ದಿಯಾ ಕುಮಾರ್, ರಾಜ್ಯವರ್ಧನ್ ರಾಥೋಡ್ ಮತ್ತು ಸುಖವೀರ್ ಸಿಂಗ್ ಜೌನ್‌ಪುರಿಯಾ ಹಾಗೂ ರಾಜ್ಯಸಭಾ ಸದಸ್ಯ ಡಾ. ಕಿರೋಡಿ ಲಾಲ್ ಮೀನಾ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications