ರಾಜಸ್ಥಾನ ವಿಧಾನಸಭಾ ಚುನಾವಣಾ ಫಲಿತಾಂಶ: ಸಮಬಲ ಕಾಯ್ದುಕೊಂಡ ಕಾಂಗ್ರೆಸ್ ಬಿಜೆಪಿ
ಜೈಪುರ, ಡಿಸೆಂಬರ್ 3: ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಬೆಳಗ್ಗೆ 8.30ಕ್ಕೆ ಲಭ್ಯವಾದ ಮಾಹಿತಿ ಪ್ರಕಾರ ಬಿಜೆಪಿ 55 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 52 ಸ್ಥಾನಗಳಲ್ಲಿ ಮುಂದಿದೆ.
ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಚಿತ್ರಣ ದೊರೆಯಲಿದ್ದು, ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾವಿನಿಂದ ಕರಣ್‌ಪುರ ಕ್ಷೇತ್ರಕ್ಕೆ ಮತದಾನವನ್ನು ಮುಂದೂಡಲಾಗಿದೆ. ಹಾಗಾಗಿ 199 ಸ್ಥಾನಗಳಿಗೆ ಮಾತ್ರ ಎಣಿಕೆ ನಡೆಯಲಿದೆ.

ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನವಾದ ಮತಗಳ ಎಣಿಕೆ ಇಂದು ರಾಜ್ಯದ 36 ಕೇಂದ್ರಗಳಲ್ಲಿ ನಡೆಯಲಿದೆ. 30 ಚುನಾವಣಾ ಜಿಲ್ಲೆಗಳು ಒಂದು ಎಣಿಕೆ ಕೇಂದ್ರವನ್ನು ಹೊಂದಿದ್ದರೆ, ಜೈಪುರ, ಜೋಧ್‌ಪುರ ಮತ್ತು ನಾಗೌರ್ ತಲಾ ಎರಡು ಕೇಂದ್ರಗಳನ್ನು ಹೊಂದಿವೆ.
ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರಣಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ಸ್ಥಳಗಳಿಗೆ ಪ್ರವೇಶಿಸಲು ಅವಕಾಶವಿರುತ್ತದೆ.
ಇಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿರುವ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಶಾಸಕಾಂಗ ಪಕ್ಷದ ಸಭೆಗಳನ್ನು ಸಂಘಟಿಸಲು ವೀಕ್ಷಕರನ್ನು ನೇಮಿಸಿದೆ. ರಾಜಸ್ಥಾನದಲ್ಲಿ ಪಕ್ಷವು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಮಧುಸೂದನ್ ಮಿಸ್ತ್ರಿ, ಮುಕುಲ್ ವಾಸ್ನಿಕ್ ಮತ್ತು ಶಕೀಲ್ ಅಹ್ಮದ್ ಖಾನ್ ಅವರನ್ನು ಎಐಸಿಸಿ ವೀಕ್ಷಕರನ್ನಾಗಿ ನೇಮಿಸಿದೆ ಎಂದು ಶನಿವಾರ ಅಧಿಕೃತ ಹೇಳಿಕೆ ತಿಳಿಸಿದೆ.
ಚುನಾವಣಾ ಆಯೋಗದ ಪ್ರಕಾರ, ಅಂಚೆ ಮತಗಳ ಎಣಿಕೆ ಟೇಬಲ್‌ನಲ್ಲಿ ಸಹಾಯಕ ಚುನಾವಣಾಧಿಕಾರಿ, ಎಣಿಕೆ ಮೇಲ್ವಿಚಾರಕರು, ಇಬ್ಬರು ಎಣಿಕೆ ಸಹಾಯಕರು ಮತ್ತು ಸೂಕ್ಷ್ಮ ವೀಕ್ಷಕರು ಇರುತ್ತಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications