ಸೆಕ್ಸ್ ಹಗರಣದಿ ರಾಜಸ್ಥಾನದ ಮತ್ತೊಬ್ಬ ಶಾಸಕ

Rajasthan Congress MLA accused of sexually assaulting married woman
ಜೈಪುರ,ಸೆ.21: ರಾಜಸ್ಥಾನದ ಸಚಿವ ಬಾಬು ಲಾಲ್ ನಗರ್ ಅತ್ಯಾಚಾರ ಆರೋಪ ಹೊತ್ತು ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಉದಯ್ ಲಾಲ್ ಅಂಜನಾ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.

ಈಗ ಶಾಸಕ ಉದಯ್ ಲಾಲ್ ಅವರು ವಿವಾಹಿತ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಾಗೌರ್ ಜಿಲ್ಲೆಯ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿದ ಶಾಸಕ ಉದಯ್ ಅವರು ದೈಹಿಕ ಸುಖ ಪಡೆದು ನಂತರ ದೂರ ತಳ್ಳಿದ್ದಾರೆ.

ನಾನು ಗರ್ಭಿಣಿಯಾಗಿದ್ದೇನೆ ಎಂದು ಶಾಸಕರ ಬಳಿ ಹೇಳಿದಾಗ ಬಲವಂತವಾಗಿ ನನಗೆ ಗರ್ಭಪಾತ ಮಾಡಿಸಿದ್ದಾರೆ. ಒಂದಲ್ಲ ಎರಡಲ್ಲ ಮೂರು ಬಾರಿ ನನಗೆ ಗರ್ಭಪಾತವಾಗಿದೆ. ಪತ್ನಿ ಸ್ನಾನ ನೀಡುತ್ತೇನೆ ಮದುವೆಯಾಗುತ್ತೇನೆ ಎಂದು ಭರವಸೆ ನೀಡಿದ್ದರು ಎಂದು ಮಹಿಳೆ ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಖಾದಿ ಹಾಗೂ ಗ್ರಾಮೀಣ ಕೈಗಾರಿಕಾ ಮತ್ತು ಡೈರಿ ಖಾತೆ ಸಚಿವರಾಗಿದ್ದ ಬಾಬು ಲಾಲ್, ಕಳೆದ ಗುರುವಾರ ಮುಖ್ಯಮಂತ್ರಿ ಕಚೇರಿಗೆ ತೆರಳಿ ತಮ್ಮ ರಾಜೀನಾಮೆ ನೀಡಿದ್ದರು. ಇದರಿಂದ ಕಾಂಗ್ರೆಸ್ ಸರ್ಕಾರ ಭಾರಿ ಮುಖಭಂಗ ಅನುಭವಿಸಿತ್ತು.

ಸೆ.11ರಂದು ಮಹಿಳೆಯೊಬ್ಬಳನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತನ್ನ ಅಧಿಕೃತ ನಿವಾಸಕ್ಕೆ ಕರೆದು, ಬೆದರಿಸಿ, ಥಳಿಸಿ ಅತ್ಯಾಚಾರವೆಸಗಿದ್ದರು ಎಂಬ ಆರೋಪ ಸಚಿವ ಲಾಲ್ ನಗರ್ ಮೇಲೆ ಬಂದಿತ್ತು. ಈ ಪ್ರಕರಣ ಕುರಿತು ಸಿಐಡಿ ತನಿಖೆ ಆರಂಭವಾಗಿದೆ.

ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯದ ಒತ್ತಡದ ಕಾರಣದಿಂದಾಗಿ ನನ್ನ ಮೇಲೆ ದೂರು ದಾಖಲಾಗಿದೆ ಎಂದು ಲಾಲ್ ನಗರ್ ಹೇಳಿದ್ದರು. ಜೈಪುರ ನ್ಯಾಯಾಲಯ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಆದೇಶ ನೀಡಿತ್ತು. (ಪಿಟಿಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+