ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಲಾಕ್‌ ಫಂಗಸ್ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜಸ್ಥಾನ

|
Google Oneindia Kannada News

ಜೈಪುರ, ಮೇ 19: ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಸಮಸ್ಯೆಯನ್ನು ರಾಜಸ್ಥಾನ ಸರ್ಕಾರ ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿದೆ.

ರಾಜಸ್ಥಾನ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯಲ್ಲಿ ಮ್ಯೂಕರ್ ಮೈಕೊಸಿಸ್ - ಕಪ್ಪು ಶಿಲೀಂಧ್ರ ರೋಗವನ್ನು ಸಾಂಕ್ರಾಮಿಕ ರೋಗ ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅಖಿಲ್ ಅರೋರಾ ಅಧಿಸೂಚನೆ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹಾಗೂ ಕಪ್ಪು ಶಿಲೀಂಧ್ರ ಎರಡೂ ರೋಗಗಳಿಗೆ ಸಮಗ್ರ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಧೈರ್ಯವಾಗಿರಿ, ಬ್ಲ್ಯಾಕ್ ಫಂಗಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸೋಂಕಲ್ಲ ಧೈರ್ಯವಾಗಿರಿ, ಬ್ಲ್ಯಾಕ್ ಫಂಗಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸೋಂಕಲ್ಲ

ರಾಜಸ್ಥಾನದಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಸುಮಾರು ನೂರು ಮಂದಿ ಒಳಗಾಗಿದ್ದಾರೆ. ಈ ಸಮಸ್ಯೆಗಾಗಿ ಪ್ರತ್ಯೇಕ ವಾರ್ಡ್‌ ಆರಂಭಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Rajasthan Declares Black Fungus As An Epidemic

ಹಲವು ರಾಜ್ಯಗಳಲ್ಲಿ ಮ್ಯೂಕರ್ ಮೈಕೋಸಿಸ್ ಫಂಗಸ್ ಪ್ರಕರಣಗಳು ವರದಿಗಳಾಗುತ್ತಿದ್ದು, ಈ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಕಳೆದ ವಾರ ಸೋಂಕಿನ ಬಗ್ಗೆ ವಿವರ ಹಂಚಿಕೊಂಡಿದ್ದರು. ಈ ಮಾದರಿಯ ಸೋಂಕಿಗೆ ಚಿಕಿತ್ಸೆ ನೀಡುವುದಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದರು.

ಈಚೆಗೆ ಈ ಸೋಂಕಿನ ಕುರಿತು ಕೆಲವು ವೈದ್ಯರು ವಿಶ್ಲೇಷಣೆ ನಡೆಸಿದ್ದು, ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಲ್ಲ. ಹೀಗಾಗಿ ಯಾರೂ ಹೆದರುವ ಅವಶ್ಯಕತೆ ಇಲ್ಲ. ಕೋವಿಡ್ ಸೋಂಕು ತಗುಲಿದ ಮಧುಮೇಹಿಗಳಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆಯಿಂದಾಗಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಆದರೆ ಇದು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸೋಂಕಲ್ಲ ಎಂದು ಹೇಳಿದ್ದರು.

English summary
Rajasthan state has declared Black Fungus as an epidemic under rajasthan epidemic act 2020,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X