ರಾಜಸ್ಥಾನ ವಿಧಾನಸಭಾ ಚುನಾವಣಾ ಫಲಿತಾಂಶ: ಬಿಜೆಪಿಗೆ ಭಾರೀ ಮುನ್ನಡೆ
ಜೈಪುರ, ಡಿಸೆಂಬರ್ 3: ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಚುನಾವಣಾ ಆಯೋಗದಿಂದ ದೊರೆತ ಮಾಹಿತಿಯ ಪ್ರಕಾರ ಬಿಜೆಪಿಗೆ ಭಾರೀ ಮುನ್ನಡೆ ಕಾಯ್ದುಕೊಂಡಿದೆ ಎಂದು ತಿಳಿದು ಬಂದಿದೆ. 10.20ಕ್ಕೆ ಬಿಜೆಪಿ 99, ಕಾಂಗ್ರೆಸ್ 73, ಪಕ್ಷೇತರರು 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಬಿಎಸ್‌ಪಿ 3, ಸಿಪಿಐ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಚಿತ್ರಣ ದೊರೆಯಲಿದ್ದು, ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾವಿನಿಂದ ಕರಣ್‌ಪುರ ಕ್ಷೇತ್ರಕ್ಕೆ ಮತದಾನ ನಡೆದಿಲ್ಲ. ಹಾಗಾಗಿ 199 ಸ್ಥಾನಗಳಿಗೆ ಮಾತ್ರ ಎಣಿಕೆ ನಡೆಯುತ್ತಿದೆ.

ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನವಾದ ಮತಗಳ ಎಣಿಕೆ ಇಂದು ರಾಜ್ಯದ 36 ಕೇಂದ್ರಗಳಲ್ಲಿ ನಡೆಯಲಿದೆ. 30 ಚುನಾವಣಾ ಜಿಲ್ಲೆಗಳು ಒಂದು ಎಣಿಕೆ ಕೇಂದ್ರವನ್ನು ಹೊಂದಿದ್ದರೆ, ಜೈಪುರ, ಜೋಧ್‌ಪುರ ಮತ್ತು ನಾಗೌರ್ ತಲಾ ಎರಡು ಕೇಂದ್ರಗಳನ್ನು ಹೊಂದಿವೆ.
ರಾಜಸ್ಥಾನದಲ್ಲಿ ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರಣಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ಸ್ಥಳಗಳಿಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಚುನಾವಣಾ ಆಯೋಗದ ಪ್ರಕಾರ, ಅಂಚೆ ಮತಗಳ ಎಣಿಕೆ ಟೇಬಲ್‌ನಲ್ಲಿ ಸಹಾಯಕ ಚುನಾವಣಾಧಿಕಾರಿ, ಎಣಿಕೆ ಮೇಲ್ವಿಚಾರಕರು, ಇಬ್ಬರು ಎಣಿಕೆ ಸಹಾಯಕರು ಮತ್ತು ಸೂಕ್ಷ್ಮ ವೀಕ್ಷಕರು ಇರುತ್ತಾರೆ.

ಬಿಜೆಪಿ ಸಂಸದ ಹಾಗೂ ಪಕ್ಷದ ನಾಯಕ ಜೈವೀರ್ ಶೇರ್ಗಿಲ್ ಮಾತನಾಡಿ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 3-0 ಅಂತರದಲ್ಲಿ ಜಯಗಳಿಸಲಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಪಕ್ಷದ ವಿಜಯ ರಥ ಬರಲಿದೆ, ತೆಲಂಗಾಣದಲ್ಲಿ ಇಲ್ಲದಿದ್ದರೆ ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಬಾವುಟ ಹಾರಿಸಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಟೋಂಕ್ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ನಾಯಕ ಅಜಿತ್ ಸಿಂಗ್ ಮೆಹ್ತಾ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂದಾಜುಗಳು ತೋರಿಸಿವೆ. ಬಿಜೆಪಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಝಲ್ರಾಪಟನ್‌ನಿಂದ ಮುನ್ನಡೆ ಸಾಧಿಸಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ದಾರ್‌ಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.












Click it and Unblock the Notifications