Rajasthan assembly election result 2023: ರಾಜಸ್ಥಾನ ಸಿಎಂ ರೇಸ್‌ನಲ್ಲಿ ಹಿಂದೂ ಸನ್ಯಾಸಿ?
ಜೈಪುರ, ಡಿಸೆಂಬರ್ 3: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಹಂತಕ್ಕೆ ಬಿಜೆಪಿ ಮುನ್ನುಗ್ಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಚರ್ಚೆಗಳು ಶುರುವಾಗಿವೆ. ಅದರಂತೆ ಆಧ್ಯಾತ್ಮಕ ನಾಯಕ ಹಾಗೂ ಸಂಸದ ಮಹಂತ್ ಬಾಲಕನಾಥ್ ಅವರು ಮುಖ್ಯಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿದ್ದಾರೆ.
ಮಹಂತ್ ಬಾಲಕನಾಥ್ ತಮ್ಮ ತಿಜಾರಾ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಭಾರಿ ಹಿನ್ನಡೆ ಸಾಧಿಸಿದೆ. ಅಲ್ವಾರ್‌ನಿಂದ ಲೋಕಸಭಾ ಸಂಸದರಾಗಿರುವ ಕೇವಲ 40 ವರ್ಷ ವಯಸ್ಸಿನ ಬಾಲಕನಾಥ್, ಈ ಬಾರಿ ರಾಜಸ್ಥಾನದಲ್ಲಿ ಬಿಜೆಪಿ ಸ್ವಂತವಾಗಿ 120ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮತ ಎಣಿಕೆ ಆರಂಭವಾಗುವ ಮುನ್ನವೇ ಬಾಲಕನಾಥ್ ಅವರು ಶಿವ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ರಾಜಸ್ಥಾನ 199 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಪ್ರಸ್ತುತ ಬಿಜೆಪಿ 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪ್ರಸ್ತುತ ಕಾಂಗ್ರೆಸ್ 71 ರಲ್ಲಿ ಎರಡನೇ ಸ್ಥಾನದಲ್ಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ 40 ಕ್ಕೂ ಹೆಚ್ಚು ಬಂಡಾಯಗಾರರು ಟಿಕೆಟ್ ನಿರಾಕರಿಸಿದ ನಂತರ ರಾಜಸ್ಥಾನ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ಬಿಜೆಪಿಯ ಗೆಲುವಿಗೆ ಕಾರಣ ಕಾಂಗ್ರೆಸ್ ತೊಲಗಬೇಕು ಎಂದು ಜನ ಬಯಸಿದ್ದೇ ಆಗಿದೆ. ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಹೆಚ್ಚುತ್ತಿರುವ ಅಪರಾಧಗಳು ಜನರನ್ನು ಘಾಸಿಗೊಳಿಸಿವೆ. ಸಿಎಂ ಹುದ್ದೆಗೆ ಸಂಬಂಧಿಸಿದಂತೆ, ನಮ್ಮ ಪ್ರಧಾನಿ ಬಿಜೆಪಿಗೆ ಮುಖವಾಗಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಸಿಎಂ ಯಾರಾಗಬೇಕೆಂಬುದರ ಬಗ್ಗೆಯೂ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ. ಸನನಗೆ ಸಂತೋಷವಾಗಿದೆ. ಸಂಸದ ಹಾಗೂ ಸಮಾಜ ಸೇವೆ ಮಾಡುವ ಇಚ್ಛೆ ಹೊಂದಿದ್ದು, ಅದರಲ್ಲಿ ನನಗೆ ತೃಪ್ತಿ ಇದೆ ಎಂದು ಹೇಳಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆ, ಬಾಲಕನಾಥ್ ಕೂಡ ನಾಥ ಸಮುದಾಯದಿಂದ ಬಂದವರು. ಅವರು ಅಲ್ವಾರ್‌ನಲ್ಲಿ ಅಪಾರ ಬೆಂಬಲ ಮತ್ತು ಅನುಯಾಯಿಗಳನ್ನು ಹೊಂದಿದ್ದಾರೆ. ಅವರು ತಮ್ಮ ಬಾಲ್ಯದ ದಿನಗಳಲ್ಲಿ ತಮ್ಮ 6 ನೇ ವಯಸ್ಸಿನಲ್ಲಿ ಸನ್ಯಾಸವನ್ನು ತೆಗೆದುಕೊಂಡರು. ಅವರು ಸಂತನಾಗುವ ನಿರ್ಧಾರವನ್ನು ಅವರ ಕುಟುಂಬ ಸದಸ್ಯರು ತೆಗೆದುಕೊಂಡರು. ಸಮಾಜಕ್ಕೆ ಸದಾ ಸೇವೆ ಸಲ್ಲಿಸಲು ಬಯಸುವುದಾಗಿ ಬಾಲಕನಾಥ್ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಉನ್ನತ ಹುದ್ದೆಗೆ ಇತರ ಸ್ಪರ್ಧಿಗಳು. ಫಲಿತಾಂಶಕ್ಕೆ ಒಂದು ದಿನ ಮುಂಚಿತವಾಗಿ ಶನಿವಾರ ಬಾಲಕನಾಥ್ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾದರು
ಚುನಾವಣಾ ಆಯೋಗದಿಂದ ದೊರೆತ ಮಾಹಿತಿಯ ಪ್ರಕಾರ. ಮಧ್ಯಾಹ್ನ 2.31ಕ್ಕೆ ಬಿಜೆಪಿ 110, ಕಾಂಗ್ರೆಸ್ 74, ಪಕ್ಷೇತರರು 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಎಸ್‌ಪಿ 2, ಆರ್‌ಎಲ್‌ಟಿಪಿ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಚಿತ್ರಣ ದೊರೆಯಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications