ಸಿಲಿಂಡರ್ ಬೆಲೆ ಇಳಿಕೆ: ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ...
ಜೈಪುರ ಡಿಸೆಂಬರ್ 28: ಚುನಾವಣಾ ಭರವಸೆಯನ್ನು ಈಡೇರಿಸಿರುವ ರಾಜಸ್ಥಾನದ ಬಿಜೆಪಿಯು ಜನವರಿ 1, 2024 ರಿಂದ 450 ರೂ.ಗೆ ಉಜ್ವಲ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಘೋಷಿಸಿದೆ. ಇದುವರೆಗೆ ರಾಜ್ಯದಲ್ಲಿ ಈ ಸಿಲಿಂಡರ್‌ಗಳನ್ನು 500 ರೂ.ಗೆ ನೀಡಲಾಗುತ್ತಿತ್ತು.
ಬುಧವಾರ ನಡೆದ ವಿಕಾಸ ಭಾರತ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಈ ಕುರಿತು ಘೋಷಣೆ ಮಾಡಿದರು. ಚುನಾವಣೆ ಭರವಸೆಯಂತೆ ರಾಜ್ಯದಲ್ಲಿ ಯೋಜನೆ ಜಾರಿಗೊಳಿಸಲಾಗುವುದು ಎಂದರು.

ವಾಸ್ತವವಾಗಿ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿಯ ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳ ನಡುವೆ, ಉಜ್ವಲ ಯೋಜನೆಯ ಫಲಾನುಭವಿಗಳಿಗೆ 450 ರೂ.ಗೆ ಗ್ಯಾಸ್ ಸಿಲಿಂಡರ್ ನೀಡುವುದನ್ನು ಸಹ ಸೇರಿಸಲಾಗಿದೆ. ಪಕ್ಷ ಪ್ರಣಾಳಿಕೆಯಲ್ಲಿ ಸೇರಿಸಲಾದ ಎಲ್ಲಾ ಭರವಸೆಗಳನ್ನು ಈಡೇರುವುದು ಖಾತರಿ ಎಂದು ಪ್ರಚಾರ ಮಾಡಲಾಗಿತ್ತು. ಇದೀಗ ಅದನ್ನು ಈಡೇರಿಸುವ ಮೂಲಕ ಬಿಜೆಪಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಈ ಘೋಷಣೆ ಮಾಡಿದೆ.
ರಾಜಸ್ಥಾನದಲ್ಲಿ ಬಿಜೆಪಿ ನೀಡಿದ ಭರವಸೆಗಳು:-
*ಉಜ್ವಲ ಯೋಜನೆಯ ಫಲಾನುಭವಿಗಳಿಗೆ 450 ರೂ.ಗೆ ಗ್ಯಾಸ್ ಸಿಲಿಂಡರ್ ನೀಡುವ ಭರವಸೆ.
*ಐದು ವರ್ಷಗಳಲ್ಲಿ 2.5 ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ ಒದಗಿಸುವ ಭರವಸೆ.
*ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಪಡೆಯುವ ಮೊತ್ತವನ್ನು 12,000 ರೂ.ಗೆ ಹೆಚ್ಚಿಸುವ ಭರವಸೆ.
*ಪ್ರತಿ ಜಿಲ್ಲೆಯ ಪ್ರತಿ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಪೊಲೀಸ್ ಠಾಣೆ, ಮಹಿಳಾ ಡೆಸ್ಕ್ ಮತ್ತು ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಲಾಗುವುದು.
*12ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ಹುಡುಗಿಯರಿಗೆ ಸ್ಕೂಟಿ ನೀಡುವುದಾಗಿ ಭರವಸೆ.
*ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು.
ಗೆಹ್ಲೋಟ್ ಸರ್ಕಾರ 500 ರೂ.ಗೆ ಸಿಲಿಂಡರ್ ನೀಡುತ್ತಿತ್ತು
ಹಿಂದಿನ ಅಶೋಕ್ ಗೆಹ್ಲೋಟ್ ಸರ್ಕಾರವು ಉಜ್ವಲ ಯೋಜನೆಯಡಿ 500 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ಏಪ್ರಿಲ್ 2023 ರಲ್ಲಿ ನೀಡಲು ಪ್ರಾರಂಭಿಸಿತ್ತು. ಅಂದಿನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 22 ಡಿಸೆಂಬರ್ 2022 ರಂದು ಜನರಿಗೆ ಅಗ್ಗದ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಇದನ್ನು ಅವರು ಏಪ್ರಿಲ್ 2023 ರಲ್ಲಿ ಪೂರ್ಣಗೊಳಿಸಿದರು. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಈ ಹೆಜ್ಜೆ ದೊಡ್ಡ ಹೆಜ್ಜೆ ಎಂದು ಪರಿಗಣಿಸಲಾಗಿತ್ತು. ಆದರೆ, ಇದಕ್ಕೆ ಪರಿಹಾರ ಕಂಡುಕೊಂಡ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 450 ರೂ.ಗೆ ಸಿಲಿಂಡರ್ ನೀಡುವುದಾಗಿ ಭರವಸೆ ನೀಡಿತ್ತು.
ಈ ಭರವಸೆಗಳನ್ನು ನೀಡುವ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದೆ.












Click it and Unblock the Notifications