ರಾಜಸ್ಥಾನ: ಅಪ್ರಾಪ್ತರ ಮೇಲೆ ಅತ್ಯಾಚಾರ ಎಸಗಿದವರಿಗೆ ಮರಣದಂಡನೆ!?
ಜೈಪುರ, ಫೆಬ್ರವರಿ 20: ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸುವ ಮಹತ್ವದ ಮಸೂದೆಯೊಂದರನ್ನು ರಾಜಸ್ಥಾನ ರಾಜ್ಯ ಸರ್ಕಾರ ಶೀಘ್ರದಲ್ಲೇ ಜಾರಿಗೆ ತರಲಿದೆ.
ಮಧ್ಯಪ್ರದೇಶದಲ್ಲಿ ಈಗಾಗಲೇ ಈ ಮಸೂದೆಯನ್ನು ಜಾರಿಗೆ ತರಲಾಗಿದ್ದು, ರಾಜಸ್ಥಾನದಲ್ಲೂ ಇಂಥದೇ ಮಸೂದೆಯನ್ನು ಜಾರಿಗೆ ತರಲು ಗಂಭೀರವಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜಸ್ಥಾನ ಸರ್ಕಾರದ ಸಚಿವ ಗುಲಾಬ್ ಚಂದ್ ಕಟಾರಿಯಾ ತಿಳಿಸಿದ್ದಾರೆ.

ಈ ಮಸೂದೆ ಜಾರಿಗೆ ಬಂದಿದ್ದೇ ಆದಲ್ಲಿ 12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸಲಾಗುವುದು ಎಂದು ಅವರು ಹೇಳಿದ್ದಾರೆ. ರಾಜಸ್ಥಾನದಲ್ಲಿ ಇತ್ತೀಚೆಗೆ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಮತ್ತು ಅತ್ಯಾಚಾರದಂಥ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಮಸೂದೆಯನ್ನು ಜಾರಿಗೆ ತರಲು ಚಿಂತಿಸಲಾಗಿದೆ.












Click it and Unblock the Notifications