Rajasthan Opinion Poll 2023: ನಿಖರ ಸಮೀಕ್ಷೆ ಹೇಳುವುದೇನು? ಯಾರಿಗೆ ಗೆಲುವು? ವರ್ಕ್‌ ಆಗುತ್ತಾ ಮೋದಿ ಹವಾ? ಅಂಕಿಅಂಶ

ಜೈಪುರ, ನವೆಂಬರ್ 05: ರಾಜಸ್ಥಾನ ವಿಧಾನಸಭೆ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬೀಳಲಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆ ಸಮೀಕ್ಷೆಯನ್ನು 'ಸ್ಮಾಲ್‌ ಬಾಕ್ಸ್‌ ಇಂಡಿಯಾ' ಪ್ರಕಟಿಸಿದೆ.

ಈ ಮೊದಲು ದಿನಾಂಕವನ್ನು ನವೆಂಬರ್ 23 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ನವೆಂಬರ್ 23 ಕ್ಕೆ ದೊಡ್ಡ ಸಂಖ್ಯೆಯ ವಿವಾಹಗಳು ಮತ್ತು ನಿಶ್ಚಿತಾರ್ಥಗಳು ನಿಗದಿಯಾಗಿದ್ದನ್ನು ತಿಳಿದ ಚುನಾವಣಾ ಆಯೋಗವು ದಿನಾಂಕವನ್ನು ಬದಲಾಯಿಸಿದೆ.

Rajasthan Opinion Poll 2023: Can BJP Wrest Power From Congress? Know Survey results

ನಾಮಪತ್ರ ಸಲ್ಲಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ನವೆಂಬರ್ 9 ಉಮೇದುವಾರಿಕೆಗಳನ್ನು ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಪ್ರಸ್ತುತ ರಾಜಸ್ಥಾನ ವಿಧಾನಸಭೆಯ ಅಧಿಕಾರಾವಧಿಯು ಜನವರಿ 2024 ರಲ್ಲಿ ಕೊನೆಗೊಳ್ಳಲಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆಯು 200 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ.

2018 ರ ಚುನಾವಣೆಯಲ್ಲಿ ಆಗಿದ್ದೇನು?

2018 ರ ಚುನಾವಣೆಯಲ್ಲಿ, ಕಾಂಗ್ರೆಸ್ 99 ಸ್ಥಾನಗಳನ್ನು ಪಡೆದುಕೊಂಡಿತು. ಬಹುಮತಕ್ಕೆ ಕೇವಲ ಎರಡು ಸೀಟುಗಳು ಕಡಿಮೆಯಾಗಿತ್ತು. ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಶಾಸಕರಿಂದ ಬೆಂಬಲ ಪಡೆದು ಕಾಂಗ್ರೆಸ್‌ ಅಧಿಕಾರ ಹಿಡಿಯಿತು. ಮತ್ತೊಂದೆಡೆ ಭಾರತೀಯ ಜನತಾ ಪಕ್ಷವು 73 ಸ್ಥಾನಗಳಲ್ಲಿ ಜಯಗಳಿಸಿ ವಿರೋಧ ಪಕ್ಷವಾಗಿ ಹೊರಹೊಮ್ಮಿತು.

ಕಾಂಗ್ರೆಸ್‌ನ ಬಲವೇನು?

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತೊಮ್ಮೆ ಅಧಿಕಾರ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ತಮ್ಮ ಸರ್ಕಾರದ ಕಲ್ಯಾಣ ಯೋಜನೆಗಳು ಹಾಗೂ ಗ್ಯಾರಂಟಿಗಳ ಮೇಲೆ ಪ್ರಚಾರ ಮಾಡುತ್ತಿದ್ದಾರೆ. ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ನಡುವಿನ ವೈಮನಸ್ಸು ತಾತ್ಕಾಲಿಕವಾಗಿ ಅಂತ್ಯಗೊಂಡಿರುವುದು ಕಾಂಗ್ರೆಸ್‌ಗೆ ಲಾಭದಾಯಕವಾಗಿ ಪರಿಣಮಿಸಬಹುದು ಎಂದು ಹೇಳಲಾಗುತ್ತಿದೆ.

Rajasthan Opinion Poll 2023: Can BJP Wrest Power From Congress? Know Survey results

ಬಿಜೆಪಿ ಬಲವೇನು?

ಮಾಜಿ ಸಿಎಂ ವಸುಂದರಾ ರಾಜೇ ಅವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರ ವರ್ಚಸ್ಸು ಈ ಚುನಾವಣೆಯಲ್ಲಿ ಕೆಲಸ ಮಾಡಬಹುದು ಎನ್ನಲಾಗುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಹಲವು ನಾಯಕರು ರಾಜಸ್ಥಾನದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಇದು ಬಿಜೆಪಿ ಪರ ಅಲೆಯನ್ನು ಸೃಷ್ಟಿಸಿದೆ ಎಂದು ಹೇಳಲಾಗುತ್ತಿದೆ.

ಸ್ಮಾಲ್‌ ಬಾಕ್ಸ್‌ ಇಂಡಿಯಾದ ಸಮೀಕ್ಷೆ ಹೇಳುವುದೇನು?

ಕರ್ನಾಟಕ ವಿಧಾನಸಭೆ ಚುನಾವಣೆಯ ನಿಖರ ಸಮೀಕ್ಷೆ ನೀಡಿದ್ದ ಸ್ಮಾಲ್‌ ಬಾಕ್ಸ್‌ ಇಂಡಿಯಾ ರಾಜಸ್ಥಾನ ವಿಧಾನಸಭೆ ಚುನಾವಣೆಯ ಸಮೀಕ್ಷೆಯನ್ನು ನೀಡಿದೆ.

ಸ್ಮಾಲ್‌ ಬಾಕ್ಸ್‌ ಇಂಡಿಯಾ ಸಮೀಕ್ಷೆ ಪ್ರಕಾರ, ಬಿಜೆಪಿಯು 106 ರಿಂದ 108 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ 75 ರಿಂದ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಪಕ್ಷೇತರರು 5 ರಿಂದ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+